Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:4 - ಕನ್ನಡ ಸತ್ಯವೇದವು C.L. Bible (BSI)

4 ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತುಕೊಂಡಿದ್ದರು. ಅವರು ಬಿಳಿ ವಸ್ತ್ರಗಳನ್ನು ಧರಿಸಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಇದಲ್ಲದೆ ಸಿಂಹಾಸನದ ಸುತ್ತ ಇತರ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಬಿಳಿವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಬಂಗಾರದ ಕಿರೀಟಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಸಿವಾಸನಾಚ್ಯಾ ಭೊತ್ಯಾನಿ ಅನಿ ಇಸಾರ್-ಚಾರ್ ಸಿವಾಸನಾ ಹೊತ್ತಿ. ತ್ಯಾ ಸಿವಾಸನಾಂಚ್ಯಾ ವೈನಿ ಇಸಾರ್-ಚಾರ್ ಜಾನ್ತಿ ಲೊಕಾ ಫಾಂಡ್ರೆ ಕಪ್ಡೆ ನೆಸುನ್ ಟಕ್ಲ್ಯಾ ವೈನಿ ಸೊನ್ಯಾಚಿ ಮುಕುಟ್ ಘಾಲುನ್ ಘೆವ್ನ್ ಬಸಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:4
24 ತಿಳಿವುಗಳ ಹೋಲಿಕೆ  

ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ,


ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ: ಹೊಸ ಸೃಷ್ಟಿಯಲ್ಲಿ ನರಪುತ್ರನು ತನ್ನ ಮಹಿಮಾನ್ವಿತ ಸಿಂಹಾಸನದ ಮೇಲೆ ಆಸೀನನಾಗುವಾಗ, ನನ್ನನ್ನು ಹಿಂಬಾಲಿಸಿರುವ ನೀವು ಕೂಡ, ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಹನ್ನೆರಡು ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ನನ್ನ ಸಾಮ್ರಾಜ್ಯದಲ್ಲಿ ನನ್ನ ಸಂಗಡ ಊಟ ಮಾಡುವಿರಿ. ಪಾನ ಮಾಡುವಿರಿ, ಮಾತ್ರವಲ್ಲ ಇಸ್ರಯೇಲಿನ ಹನ್ನೆರಡು ಗೋತ್ರಗಳಿಗೆ ನ್ಯಾಯಾಧಿಪತಿಗಳಾಗಿ ಸಿಂಹಾಸನಗಳ ಮೇಲೆ ಆಸೀನರಾಗುವಿರಿ.


ಇನ್ನು ನನಗೆ ಉಳಿದಿರುವುದು ಒಂದೇ: ಸಜ್ಜನರಿಗೆ ಸಲ್ಲುವಂಥ ಜಯಮಾಲೆ ನನಗೀಗ ಸಿದ್ಧವಾಗಿದೆ. ಅದನ್ನು ನೀತಿವಂತ ನ್ಯಾಯಾಧಿಪತಿಯಾದ ಪ್ರಭು ಆ ದಿನದಂದು ನನಗೆ ಕೊಡುವರು; ನನಗೆ ಮಾತ್ರವಲ್ಲ, ಅವರ ಪ್ರತ್ಯಕ್ಷತೆಯನ್ನು ಪ್ರೀತಿಯಿಂದ ನಿರೀಕ್ಷಿಸುತ್ತಿರುವ ಎಲ್ಲರಿಗೂ ಕೊಡುವರು.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ಸ್ವರ್ಗದ ಸೈನಿಕರು ಬಿಳಿಯ ಕುದುರೆಗಳನ್ನೇರಿ ಆತನನ್ನು ಹಿಂಬಾಲಿಸಿದರು. ಅವರು ಶುಭ್ರವಾದ ಬಿಳಿಯ ಸಮವಸ್ತ್ರಗಳನ್ನು ಧರಿಸಿದ್ದರು.


ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು.


ಆ ಮಿಡತೆಗಳು ನೋಡುವುದಕ್ಕೆ ಸಮರಕ್ಕೆ ಸನ್ನದ್ಧರಾಗಿರುವ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟವಿದ್ದಂತೆ ಕಾಣಿಸುತ್ತಿತ್ತು. ಮುಖಗಳು ಮನುಷ್ಯರ ಮುಖಗಳಂತೆ ಇದ್ದವು.


ನಿನಗೆ ಬಂದೊದಗಲಿರುವ ಯಾತನೆಯಿಂದಾಗಿ ಎದೆಗುಂದಬೇಡ. ನೋಡು, ಪರಿಶೋಧನೆಗೆ ಗುರಿಯಾಗುವಂತೆ ನಿಮ್ಮಲ್ಲಿ ಕೆಲವರನ್ನು ಸೈತಾನನು ಸೆರೆಮನೆಗೆ ತಳ್ಳುವನು. ಹತ್ತು ದಿನಗಳು ನೀನು ಕಷ್ಟಸಂಕಟಗಳನ್ನು ಅನುಭವಿಸಬೇಕಾಗುವುದು; ಸಾಯಬೇಕಾಗಿ ಬಂದರೂ ಸ್ವಾಮಿನಿಷ್ಠೆಯಿಂದಿರು. ಆಗ ನಾನು ಜೀವವೆಂಬ ಜಯಮಾಲೆಯನ್ನು ನಿನಗೆ ಕೊಡುತ್ತೇನೆ.


ಮೊರ್ದೆಕೈಯಾದರೋ ನೀಲ ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿ, ಬಂಗಾರದ ದೊಡ್ಡ ಪಟ್ಟಿಯನ್ನು ಹಣೆಗೆ ಕಟ್ಟಿಕೊಂಡು, ರಕ್ತವರ್ಣದ ನಾರಿನ ಶಾಲನ್ನು ಹೊದ್ದು ರಾಜಸನ್ನಿಧಿಯಿಂದ ಹೊರಟನು. ಶೂಷನ್ ನಗರದಲ್ಲಿ ಹರ್ಷೋದ್ಗಾರ ಮೊಳಗಿತು.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು