ಪ್ರಕಟನೆ 4:6 - ಕನ್ನಡ ಸತ್ಯವೇದವು C.L. Bible (BSI)6 ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಎವ್ಡೆಚ್ ನ್ಹಯ್ ಸಿವಾಸನಾಚ್ಯಾ ಇದ್ರಾಕ್ ಝಳ್‍ಝಳ್ತಲ್ಯಾ ಕಾಜೆಚೆ ಸಮುಂದರ್ ಅಸಲ್ಲ್ಯಾ ಸರ್ಕೆ ಹೊತ್ತೆ ತವ್ಡೆಚ್ ನ್ಹಯ್ ತೆಚ್ಯಾಫಿಡೆ ಸ್ಪಟಿಕ್ ಸಾರ್ಕೆ ಪವಿತ್ರ್ ಹೊತ್ತೆ. ಸಿವಾಸನಾಕ್ಡೆ ತೆಕಾ ಚಾರಿ ಬಾಜಿನಿ ಚಾರ್ ಸಾವ್ಜಾ ಹೊತ್ತಿ. ತೆಂಕಾ ಫಾಟಿಬಿ ಫಿಡೆಬಿ ಸಗ್ಳ್ಯಾಬರ್ ಡೊಳೆ ಹೊತ್ತೆ. ಅಧ್ಯಾಯವನ್ನು ನೋಡಿ |