Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:7 - ಕನ್ನಡ ಸತ್ಯವೇದವು C.L. Bible (BSI)

7 ಮೊದಲನೆಯ ಜೀವಿ ಸಿಂಹದಂತೆ ಇತ್ತು. ಎರಡನೆಯ ಜೀವಿ ಹೋರಿಯಂತಿತ್ತು. ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು ಮತ್ತು ನಾಲ್ಕನೆಯ ಜೀವಿಯು ಹಾರುತ್ತಿರುವ ಗರುಡ ಪಕ್ಷಿಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು, ನಾಲ್ಕನೆಯ ಜೀವಿಯು ಹಾರುವ ಹದ್ದಿನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಮೊದಲನೆಯ ಜೀವಿಯು ಸಿಂಹದಂತಿತ್ತು; ಎರಡನೆಯ ಜೀವಿಯು ಹೋರಿಯಂತಿತ್ತು; ಮೂರನೆಯ ಜೀವಿಯ ಮುಖವು ಮನುಷ್ಯನ ಮುಖದಂತಿತ್ತು; ನಾಲ್ಕನೆಯ ಜೀವಿಯು ಹಾರುವ ಗರುಡ ಪಕ್ಷಿಯಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಮೊದಲನೆ ಜೀವಿಯು ಸಿಂಹದಂತಿತ್ತು. ಎರಡನೆಯದು ಹಸುವಿನಂತಿತ್ತು. ಮೂರನೆಯದರ ಮುಖ ಮಾನವನ ಮುಖದಂತಿತ್ತು. ನಾಲ್ಕನೆಯದು ಹಾರುವ ಗರುಡನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಮೊದಲನೆಯ ಜೀವಿಯು ಸಿಂಹದಂತಿತ್ತು, ಎರಡನೆಯ ಜೀವಿಯು ಹೋರಿಯಂತಿತ್ತು, ಮೂರನೆಯದು ಮನುಷ್ಯನಂತಿತ್ತು, ನಾಲ್ಕನೆಯದು ಹಾರುವ ಹದ್ದಿನಂತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಪಯ್ಲೆಚೆ ಸವಾಜ್ ಸಿವಾ ಸರ್ಕೆ ದಿಸಿ; ದೊನ್ವೆಚೆ ಬೈಲಾಚ್ಯಾ ಸರ್ಕೆ ದಿಸಿ. ತಿನ್ವೆಚ್ಯಾಕ್ ಮಾನ್ಸಾಚ್ಯಾ ಸರ್ಕೆ ತೊಡ್ ಹೊತ್ತೆ, ಅನಿ ಚಾರ್‍ವೆಚೆ ಹುಡ್ತಲ್ಯಾ ಗರುಡಾಚ್ಯಾ ಸರ್ಕೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:7
20 ತಿಳಿವುಗಳ ಹೋಲಿಕೆ  

ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೆಯದು ಕೆರೂಬಿಯದು; ಎರಡನೆಯದು ಮನುಷ್ಯನದು, ಮೂರನೆಯದು ಸಿಂಹನದು, ನಾಲ್ಕನೆಯದು ಗರುಡಪಕ್ಷಿಯದು.


ಅವುಗಳ ಮುಖ ಲಕ್ಷಣಗಳು ಹೀಗಿದ್ದವು: ಒಂದೊಂದರ ಮುಂದಿನ ಮುಖ ಮನುಷ್ಯ ಮುಖದಂತಿತ್ತು; ಬಲಗಡೆಯ ಮುಖ ಸಿಂಹನಂತಿತ್ತು; ಎಡಗಡೆಯ ಮುಖ ಹೋರಿಯ ಮುಖದಂತಿತ್ತು; ಹಿಂದಿನ ಮುಖ ಗರುಡ ಪಕ್ಷಿಯ ಮುಖದಂತಿತ್ತು.


ಒಂದೊಂದಕ್ಕೆ ನಾಲ್ಕು ನಾಲ್ಕು ಮುಖಗಳೂ ನಾಲ್ಕು ನಾಲ್ಕು ರೆಕ್ಕೆಗಳೂ ಇದ್ದವು; ಅವುಗಳ ರೆಕ್ಕೆಗಳ ಕೆಳಗೆ ಮನುಷ್ಯಹಸ್ತದಂಥ ಹಸ್ತಗಳು ಇದ್ದವು;


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಮೊದಲು ಕಾಣಿಸಿದ ಮೃಗ ಸಿಂಹದ ಹಾಗಿತ್ತು. ಆದರೆ ಅದಕ್ಕೆ ಹದ್ದಿನಂಥ ರೆಕ್ಕೆಗಳಿದ್ದವು. ನಾನು ನೋಡುತ್ತಿರುವಾಗಲೆ ಆ ರೆಕ್ಕೆಗಳು ಕೀಳಲ್ಪಟ್ಟವು. ಆ ಮೃಗವನ್ನು ನೆಲದಿಂದ ಮೇಲಕ್ಕೆತ್ತಿ ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲಾಯಿತು. ಅದಕ್ಕೆ ಮನುಷ್ಯನ ಹೃದಯ ಕೊಡಲಾಯಿತು.


ಒಂದೊಂದು ಜೀವಿಯ ನಾಲ್ಕು ಪಾರ್ಶ್ವಗಳಲ್ಲಿನ ರೆಕ್ಕೆಗಳ ಕೆಳಗೆ ಮನುಷ್ಯ ಹಸ್ತದಂಥ ಹಸ್ತಗಳಿದ್ದವು. ಆ ನಾಲ್ಕು ಜೀವಿಗಳ ಮುಖಗಳೂ ರೆಕ್ಕೆಗಳೂ ಹೇಗಿದ್ದವೆಂದರೆ -


ಸರ್ವೇಶ್ವರನನ್ನು ಎದುರುನೋಡುವವರು ಹೊಸ ಚೇತನವನ್ನು ಹೊಂದುವರು. ರೆಕ್ಕೆ ಚಾಚಿದ ಹದ್ದುಗಳಂತೆ ಹಾರುವರು ಓಡಿದರೂ ದಣಿಯರು, ನಡೆದರೂ ಬಳಲರು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗ, ರಣಹದ್ದು ಹೇಗೆ ದೂರದಿಂದ ಹಾರಿಬರುವುದೊ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಮಾಡುವರು.


ಅದಕ್ಕೆ ಸರ್ವೇಶ್ವರ: “ನೀನು ಹದ್ದಿನ ಮಟ್ಟದಲ್ಲಿ ಹಾರಾಡುತ್ತಿದ್ದರೂ ನಕ್ಷತ್ರಮಂಡಲದಲ್ಲಿ ನೆಲೆಗೊಂಡಿದ್ದರೂ ಅಲ್ಲಿಂದಲೂ ನಿನ್ನನ್ನು ಇಳಿಸಿಬಿಡುತ್ತೇನೆ,” ಎನ್ನುತ್ತಾರೆ.


ಅರಾಜಕತೆಯಿಂದ ನಾಡಿನಲ್ಲಿ ನಾಯಕರನೇಕರು ತಲೆಯೆತ್ತುವರು; ಜ್ಞಾನ ಹಾಗೂ ವಿವೇಕದಿಂದ ನಾಡು ಸುಸ್ಥಿರವಾಗುವುದು.


ಸೌಮ್ಯರು, ಅತಿಪ್ರಿಯರು, ಆ ಸೌಲ-ಯೋನಾತಾನರು ಬಾಳಿನಲು, ಸಾವಿನಲು ಬಿಟ್ಟಗಲದವರು. ಹದ್ದಿಗಿಂತ ಅಧಿಕ ವೇಗ ಅವರದು ಸಿಂಹಕ್ಕಿಂತ ಹೆಚ್ಚಿನ ಶಕ್ತಿ ಅವರದು!


ನನ್ನ ಪುತ್ರ ಯೆಹೂದ, ನೀ ಪ್ರಾಯದ ಸಿಂಹದಂತೆ ಬೇಟೆಹಿಡಿದು ಬೆಟ್ಟ ಏರಿದ ಕಂಠೀರವನಂತೆ ಕಾಲು ಮಡಿಚಿ ಹೊಂಚು ಕೂತ ಕೇಸರಿಯಂತೆ ಈ ಸಿಂಹಿಣಿಯನ್ನು ಕೆಣಕುವ ಕೆಚ್ಚು ಯಾರಿಗಿದೆ?


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಕಾಲು ಮಡಚಿ ಹೊಂಚುಕೂತ ಸಿಂಹದಂತಿದೆ ಆ ಜನಾಂಗ; ಕೆಣಕಲು ಯಾರಿಂದಾದೀತು, ಅದು ಮೃಗೇಂದ್ರನಿಗೆ ಸಮಾನ!


ಈ ಜನಾಂಗ ಯುವಸಿಂಹದಂತೆ ನಿಂತಿಹುದು ಮೃಗೇಂದ್ರನಂತೆ ಮೃಗ ಕೊಂದು, ರಕ್ತ ಕುಡಿದು, ಮಾಂಸ ತಿಂದು, ತೃಪ್ತಿಹೊಂದದ ಹೊರತು ಆ ಸಿಂಹ ವಿರಮಿಸದು.”


ಅನಂತರ ಯಜ್ಞದ ಕುರಿಮರಿಯು ಎರಡನೆಯ ಮುದ್ರೆಯನ್ನು ಒಡೆದಾಗ, ಎರಡನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ.


ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.


ಆ ಯಜ್ಞದ ಕುರಿಮರಿ ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು