Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:8 - ಕನ್ನಡ ಸತ್ಯವೇದವು C.L. Bible (BSI)

8 ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ, “ದೇವರಾದ ಕರ್ತನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಆತನು ಸರ್ವಶಕ್ತನು, ಇರುವಾತನು, ಇದ್ದಾತನು, ಬರುವಾತನು” ಎಂದು ಹೇಳುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಈ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಈ ಜೀವಿಗಳ ಹೊರಭಾಗದಲ್ಲೆಲ್ಲಾ ಮತ್ತು ಒಳಭಾಗದಲ್ಲೆಲ್ಲಾ ಕಣ್ಣುಗಳಿದ್ದವು. ಈ ನಾಲ್ಕು ಜೀವಿಗಳು ಹಗಲಿರುಳು ಎಡಬಿಡದೆ ಹೀಗೆ ಹೇಳುತ್ತಿದ್ದವು: “ದೇವರಾದ ಪ್ರಭು, ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಆತನು ಸರ್ವಶಕ್ತನು. ಆತನು ಭೂತಕಾಲದಲ್ಲಿ ಇದ್ದವನೂ ವರ್ತಮಾನಕಾಲದಲ್ಲಿ ಇರುವಾತನೂ ಮುಂದೆ ಬರುವಾತನೂ ಆಗಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆ ನಾಲ್ಕು ಜೀವಿಗಳಿಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು. ಆ ಜೀವಿಗಳ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರಮಿಸಿಕೊಳ್ಳದೆ ಹೀಗೆ ಹೇಳುತ್ತಿದ್ದವು: “ ‘ದೇವರು ಆಗಿರುವ ಕರ್ತ ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು, ಅವರು ಸರ್ವಶಕ್ತರು,’ ಗತಕಾಲ, ವರ್ತಮಾನ ಭವಿಷ್ಯತ್ಕಾಲಗಳಲ್ಲಿ ಇರುವವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತ್ಯಾ ಚಾರಿಬಿ ಸಾವ್ಜಾಕ್ನಿ ಸಾ-ಸಾ ಫಾಕಾಟೆ ಹೊತ್ತೆ, ಅನಿ ತೆಂಕಾ ಭಾಯ್ಲ್ಯಾ ಬಾಜುನ್‍ಬಿ ಭುತ್ತುರ್ಲ್ಯಾ ಬಾಜುನ್‍ಬಿ ಡೊಳೆಚ್ ಡೊಳೆ ಹೊತ್ತೆ. ದಿಸ್ ರಾತ್ ತೆನಿ, “ಪವಿತ್ರ್, ಪವಿತ್ರ್,ಪವಿತ್ರ್, ಸರ್ವ ಶಕ್ತಿಮಾನ್ ದೆವ್, ತೊ ಸಗ್ಳ್ಯಾನಿಕಿ ಮೊಟೊ, ಜೊ ಹೊತ್ತೊ, ಜೊ ಅತ್ತಾ ಹಾಯ್, ಅನಿಫಿಡೆ ತೊ ಯೆತಲೊ ಹಾಯ್”. ಮನುನ್ ಗಿತ್ ಗಾವ್ತಲೆ ಕನ್ನಾಬಿ ಬಂದ್ ಕರಿನಸಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:8
42 ತಿಳಿವುಗಳ ಹೋಲಿಕೆ  

“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಹೇ ಸರ್ವೇಶ್ವರಾ, ದೇವರುಗಳಲ್ಲಿ ನಿನಗಾರು ಸಮಾನನು? ಎಲ್ಲಿ ನಿನ್ನಂತೆ ಪವಿತ್ರತೆಯಲ್ಲಿ ಸರ್ವೋತ್ತಮನು? ಪ್ರಖ್ಯಾತ ಕಾರ್ಯವೆಸಗುವುದರಲ್ಲಿ ನಿನ್ನಂತೆ ಭಯಂಕರನು? ಅದ್ಭುತಗಳ ನಡೆಸುವುದರಲ್ಲಿ ನಿನ್ನ ಹೋಲುವವನು?


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


“ಪ್ರಭುವೇ, ದೇವನೇ, ಸರ್ವಶಕ್ತನೇ, ಇರುವಾತನೂ ಇದ್ದಾತನೂ ನೀನೇ ಘನಾಧಿಕಾರವನ್ನು ತೋರಿ ನೀ ಆಳುತ್ತಿರುವೆ ಧನ್ಯವಾದಗಳನ್ನು ನಿನಗೆ ಸಲ್ಲಿಸುವೆ.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಒಂದೊಂದಕ್ಕೆ ನಾಲ್ಕು ಮುಖಗಳು, ನಾಲ್ಕು ರೆಕ್ಕೆಗಳು ಇದ್ದವು.


ಪರಾತ್ಪರ ಪ್ರಭುವಿನ ಮೊರೆಹೊಕ್ಕಿರುವವನು I ಸರ್ವಶಕ್ತನ ಆಶ್ರಯದಲಿ ಸುರಕ್ಷಿತನು II


‘ಇರುವರು ದೇವರ ಸಿಂಹಾಸನದ ಸಮ್ಮುಖದಲ್ಲೇ ಆರಾಧಿಪರಾತನನು ಹಗಲಿರುಳು ದೇವಾಲಯದಲ್ಲೇ ಸಂರಕ್ಷಿಪನಾತನು ಅವರನ್ನು ಗುಡಾರದಂತೆ.


ಅಬ್ರಾಮನಿಗೆ ತೊಂಬತ್ತೊಂಬತ್ತು ವರ್ಷಗಳಾಗಿದ್ದಾಗ, ಸರ್ವೇಶ್ವರ ದರ್ಶನವಿತ್ತು ಇಂತೆಂದರು: “ನಾನು ಸರ್ವಶಕ್ತ ಸರ್ವೇಶ್ವರ. ನೀನು ನನ್ನ ಸಮ್ಮುಖದಲ್ಲಿದ್ದು ನಿರ್ದೋಷಿಯಾಗಿ ನಡೆದುಕೊಳ್ಳಬೇಕು.


ಆ ನಗರದಲ್ಲಿ ನಾನು ದೇವಾಲಯವನ್ನು ಕಾಣಲಿಲ್ಲ; ಏಕೆಂದರೆ, ಸರ್ವಶಕ್ತ ದೇವರಾದ ಪ್ರಭುವೂ ಯಜ್ಞದ ಕುರಿಮರಿಯಾದಾತನೂ ಅದರ ದೇವಾಲಯವಾಗಿದ್ದಾರೆ.


ರಾಷ್ಟ್ರಗಳನ್ನು ಹೊಡೆದುರುಳಿಸುವಂಥ ಹರಿತವಾದ ಖಡ್ಗವೊಂದು ಆತನ ಬಾಯಿಂದ ಹೊರಟಿತು. ಆತನು ಕಬ್ಬಿಣದ ದಂಡದಿಂದ ಅವುಗಳ ಆಳ್ವಿಕೆ ನಡೆಸುವನು. ಸರ್ವಶಕ್ತ ದೇವರ ರೋಷವೆಂಬ ದ್ರಾಕ್ಷಿಯ ಆಲೆಯಲ್ಲಿ ಇರುವವರನ್ನು ತುಳಿದುಹಾಕುವನು.


“ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಅಕ್ಕರೆಯಿಂದ ನಾನಾಗ ನಿಮ್ಮನ್ನು ಸ್ವಾಗತಿಸುವೆನು ತಂದೆಯಾಗಿರುವೆನು ನಾನು ನಿಮಗೆ ಪುತ್ರಪುತ್ರಿಯರಾಗಿರುವಿರಿ ನೀವು ನನಗೆ.” - ಎಂದು ನುಡಿದಿಹರು ಸರ್ವಶಕ್ತ ಪ್ರಭು.


ಸಿಯೋನಿನ ಸದ್ಧರ್ಮವು ಪ್ರಕಾಶಗೊಳ್ಳುವತನಕ ಜೆರುಸಲೇಮಿನ ಉದ್ಧಾರ ದೀಪವು ಬೆಳಗುವತನಕ ಸುಮ್ಮನಿರೆನು ನಾನು ಸಿಯೋನಿನ ಹಿತವನ್ನು ಲಕ್ಷಿಸದೆ, ಮೌನವಿರೆನು ಜೆರುಸಲೇಮಿನ ಸುಕ್ಷೇಮವನು ಚಿಂತಿಸದೆ.


ಪ್ರಲಾಪಿಸಿರಿ, ಸಮೀಪಿಸಿದೆ ಸರ್ವೇಶ್ವರನ ದಿನ; ಸನ್ನಿಹಿತವಾಗಿದೆ, ಸರ್ವನಾಶ ಮಾಡುವ ಸೇನಾಧೀಶ್ವರನ ದಿನ !


ಸರ್ವೇಶ್ವರಸ್ವಾಮಿಯ ದಿನ ಸಮೀಪಿಸಿದೆ. ಆ ದಿನ ಸರ್ವಶಕ್ತನಿಂದ ವಿನಾಶವನ್ನು ತರಲಿದೆ; ಎಂಥಾ ಭಯಂಕರ ದಿನವದು!


ಇವು ಪವಾಡ ಕಾರ್ಯಗಳನ್ನು ಎಸಗುವ ದೆವ್ವಾತ್ಮಗಳು. ಸರ್ವಶಕ್ತ ದೇವರ ಮಹಾದಿನದಲ್ಲಿ ನಡೆಯುವ ಯುದ್ಧಕ್ಕಾಗಿ ಭೂಲೋಕದ ರಾಜರುಗಳನ್ನೆಲ್ಲಾ ಒಟ್ಟುಗೂಡಿಸಲು ಅವು ಹೊರಟವು.


ಅಂಥವರ ನರಳಾಟದ ಹೊಗೆ ಸತತ ಮೇಲೇರುತ್ತಿರುತ್ತದೆ. ಮೃಗಕ್ಕೂ ಅದರ ವಿಗ್ರಹಕ್ಕೂ ಪೂಜೆಸಲ್ಲಿಸುವವರು ಮತ್ತು ಅದರ ಹೆಸರನ್ನು ಸೂಚಿಸುವ ಹಚ್ಚೆಯನ್ನು ಚುಚ್ಚಿಸಿಕೊಂಡವರು ಹಗಲಿರುಳೂ ಬಿಡುವಿಲ್ಲದೆ ಸಂಕಟಪಡುವರು,” ಎಂದು ಹೇಳಿದನು.


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ಇವುಗಳಲ್ಲೇ ಮಗ್ನನಾಗಿರು. ಇದರಿಂದ ನಿನ್ನ ಮತ್ತು ನಿನ್ನ ಉಪದೇಶವನ್ನು ಕೇಳುವವರ ಜೀವೋದ್ಧಾರವನ್ನು ಸಾಧಿಸುವೆ.


ಸಹೋದರರೇ, ನಮ್ಮ ಶ್ರಮೆ ಹಾಗೂ ದುಡಿಮೆಗಳನ್ನು ನೀವು ಮರೆಯುವಂತಿಲ್ಲ. ನಿಮ್ಮಲ್ಲಿ ಯಾರಿಗೂ ನಾವು ಹೊರೆಯಾಗಬಾರದೆಂದು, ಬದುಕಿಗಾಗಿ ಹಗಲಿರುಳೂ ದುಡಿಯುತ್ತಾ ದೇವರ ಶುಭಸಂದೇಶವನ್ನು ಸಾರಿದೆವು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಆಗ ದೇವರು ಹೀಗೆಂದರು: “ಇರುವವನಾಗಿ ಇರುವವನು ನಾನೇ; ನೀನು ಇಸ್ರಯೇಲರಿಗೆ 'ತಾನಾಗಿ ಇರುವವನು,' ನನ್ನನ್ನು ನಿಮ್ಮ ಬಳಿಗೆ ಕಳಿಸಿದ್ದಾನೆ ಎಂದು ಹೇಳು.”


ಅದರ ಮಧ್ಯೆದಿಂದ ನಾಲ್ಕು ಜೀವಿಗಳ ಆಕಾರಗಳು ಕಂಡುಬಂದವು. ಅವುಗಳ ರೂಪ ಮನುಷ್ಯರೂಪದಂತಿತ್ತು.


ಗಾಲಿಗಳ ಸುತ್ತಣ ಭಾಗಗಳು ಎತ್ತರವಾಗಿಯೂ ಭಯಂಕರವಾಗಿಯೂ ಇದ್ದವು; ಈ ಭಾಗಗಳ ಎಲ್ಲಾ ಕಡೆಯಲ್ಲೂ ಅನೇಕಾನೇಕ ಮಿನುಗು ಕಣ್ಣುಗಳಿದ್ದವು;


ಕೆರೂಬಿಗಳ ಬೆನ್ನು, ಕೈ, ರೆಕ್ಕೆ, ಅಂತು ಸರ್ವಾಂಗಗಳಲ್ಲಿಯೂ ಹಾಗು ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.


ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.


ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,


ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಜನರು ಸಿಂಹಾಸನದ ಸಾನ್ನಿಧ್ಯದಲ್ಲಿಯೂ ನಾಲ್ಕು ಜೀವಿಗಳ ಮುಂದೆಯೂ ಸಭಾಪ್ರಮುಖರ ಎದುರಿನಲ್ಲಿಯೂ ನಿಂತು ಒಂದು ಹೊಸಗೀತೆಯನ್ನು ಹಾಡುತ್ತಿದ್ದರು. ಇಡೀ ಮಾನವಕುಲದವರಲ್ಲಿ ವಿಮೋಚನೆಯನ್ನು ಹೊಂದಿದವರು ಇವರೇ. ಇವರನ್ನುಳಿದು ಬೇರೆ ಯಾರಿಂದಲೂ ಆ ಹಾಡನ್ನು ಕಲಿಯಲಾಗಲಿಲ್ಲ.


ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಈ ಏಳು ಮಂದಿ ದೇವದೂತರಿಗೆ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು. ಆ ಪಾತ್ರೆಗಳಲ್ಲಿ ಯುಗಯುಗಾಂತರಕ್ಕೂ ಜೀವಿಸುವ ದೇವರ ರೋಷವು ತುಂಬಿತುಳುಕುತ್ತಿತ್ತು.


ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು