Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:14 - ಕನ್ನಡ ಸತ್ಯವೇದವು C.L. Bible (BSI)

14 ಇದಕ್ಕುತ್ತರವಾಗಿ ಆ ನಾಲ್ಕು ಜೀವಿಗಳು, ‘ಆಮೆನ್’ ಎಂದು ಹೇಳಿದವು. ಸಭಾಪ್ರಮುಖರು ಸಾಷ್ಟಾಂಗವೆರಗಿ ನಮಸ್ಕಾರಮಾಡಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಗ ನಾಲ್ಕು ಜೀವಿಗಳು “ಆಮೆನ್” ಅಂದವು ಮತ್ತು ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ನಾಲ್ಕು ಜೀವಿಗಳು “ಆಮೆನ್!” ಎಂದು ಹೇಳಿದವು. ಹಿರಿಯರು ಮೊಣಕಾಲೂರಿ ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಗ ನಾಲ್ಕು ಜೀವಿಗಳು, “ಆಮೆನ್,” ಎಂದವು. ಹಿರಿಯರು ಅಡ್ಡಬಿದ್ದು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಚಾರ್ ಸಾವ್ಜಾನಿ “ತಸೆಚ್ ಹೊಂವ್ದಿ!” ಮನುನ್ ಜಬಾಬ್ ದಿಲ್ಯಾನಿ. ತನ್ನಾ ಜಾನ್ತ್ಯಾನಿ ಡಬ್ ಪಡುನ್ ಆರಾದನ್ ಕರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:14
9 ತಿಳಿವುಗಳ ಹೋಲಿಕೆ  

ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.


ಸುರುಳಿಯನ್ನು ತೆಗೆದುಕೊಂಡಾಗ, ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ಆ ಯಜ್ಞದ ಕುರಿಮರಿಯ ಪಾದಗಳಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. ಸಭಾಪ್ರಮುಖರ ಕೈಗಳಲ್ಲಿ ಕಿನ್ನರಿಯೂ ಚಿನ್ನದ ಧೂಪಾರತಿಗಳೂ ಇದ್ದವು. ಆ ಧೂಪಾರತಿಗಳಲ್ಲಿ ದೇವಜನರ ಪ್ರಾರ್ಥನೆಯೆಂಬ ಧೂಪವು ತುಂಬಿತ್ತು.


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು.


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ಸಭೆಯಲ್ಲಿ ನೀನು ಆತ್ಮದಿಂದ ಮಾತ್ರ ದೇವರ ಸ್ತುತಿಮಾಡಿದರೆ ನಿನ್ನ ಹಾಗೆ ಪರವಶನಲ್ಲದವನು ನಿನ್ನ ಕೃತಜ್ಞತಾ ಸ್ತುತಿಗೆ ‘ಆಮೆನ್’ ಎಂದು ಹೇಗೆ ತಾನೇ ಹೇಳಬಲ್ಲನು? ನೀನು ಹೇಳುವುದೇ ಅವನಿಗೆ ತಿಳಿಯುವುದಿಲ್ಲವಲ್ಲಾ!


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು