Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:13 - ಕನ್ನಡ ಸತ್ಯವೇದವು C.L. Bible (BSI)

13 ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅಂಜೂರದ ಮರವು ಬಿರುಗಾಳಿಯಿಂದ ಬಡಿಯಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಹಾಗೆ ಆಕಾಶದಿಂದ ನಕ್ಷತ್ರಗಳು ಭೂಮಿಗೆ ಉದುರಿ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಪೂರ್ಣಚಂದ್ರನು ರಕ್ತದಂತಾದನು; ಅತ್ತೀಮರವು ಬಿರುಗಾಳಿಯಿಂದ ಅಲ್ಲಾಡಿಸಲ್ಪಟ್ಟು ತನ್ನ ಕಾಯಿಗಳನ್ನು ಉದುರಿಸುವ ಪ್ರಕಾರ ಆಕಾಶದ ನಕ್ಷತ್ರಗಳು ಭೂವಿುಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಕಾಶದಲ್ಲಿದ್ದ ನಕ್ಷತ್ರಗಳು, ಬಿರುಗಾಳಿ ಬೀಸಿದಾಗ ಅಂಜೂರದ ಹಣ್ಣುಗಳು ಮರದಿಂದ ಭೂಮಿಯ ಮೇಲೆ ಉದುರುವಂತೆ ಉದುರಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬಿರುಗಾಳಿಯಿಂದ ಆಕಾಶದ ನಕ್ಷತ್ರಗಳು ಅಂಜೂರದ ಕಾಯಿಗಳಂತೆ ಭೂಮಿಗೆ ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ಮೊಟೊ ವಾರೊ ಮಾರಲ್ಲ್ಯಾ ತನ್ನಾ ಹುಂಬ್ರಿಚ್ಯಾ ಝಾಡಾಚಿ ಹನ್ನಾ ಪಡ್ಲ್ಯಾ ಸರ್ಕೆ ಮಳ್ಬಾ ವೈಲ್ಯಾ ಚಿಕ್ಕಿಯಾ ಖಾಲ್ತಿ ಜಿಮ್ನಿ ವರ್ತಿ ಪಡ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:13
15 ತಿಳಿವುಗಳ ಹೋಲಿಕೆ  

ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ಅದು ನಕ್ಷತ್ರ ಗಣದ ಮೇಲೆ ಕೈಮಾಡುವಷ್ಟು ಹೆಚ್ಚಿ ಆ ಗಣದ ಕೆಲವು ನಕ್ಷತ್ರಗಳನ್ನೂ ನೆಲಕ್ಕೆ ಕೆಡವಿ ತುಳಿದುಬಿಟ್ಟಿತು.


ನಿನ್ನ ಬೆಳಕನು ನಾ ನಂದಿಸಿ ಕತ್ತಲಾಗಿಸುವಾಗ, ಮುಚ್ಚುವೆನು ಸೂರ್ಯಚಂದ್ರ ನಕ್ಷತ್ರಗಳನು ಮೋಡಮುಸುಕಿನಿಂದ.


“ಸೂರ್ಯ, ಚಂದ್ರ, ನಕ್ಷತ್ರಗಳಲ್ಲಿ ವಿಚಿತ್ರ ಸೂಚನೆಗಳು ಕಾಣಿಸಿಕೊಳ್ಳುವುವು; ಮೊರೆಯುವ ತೆರೆಗಳ ಹಾಗೂ ಭೋರ್ಗರೆಯುವ ಸಮುದ್ರದ ನಿಮಿತ್ತ ಭೂಮಿಯಲ್ಲಿ ಜನಾಂಗಗಳು ದಿಕ್ಕುತೋಚದೆ ತತ್ತರಿಸಿಹೋಗುವುವು.


ಸಿರಿಯರ ಸೈನಿಕರು ಈಗಾಗಲೇ ಇಸ್ರಯೇಲಿನ ಗಡಿಯೊಳಗಿದ್ದಾರೆ ಎಂಬ ಸುದ್ದಿ ಜುದೇಯದ ಅರಸನಿಗೆ ಮುಟ್ಟಿದ್ದೇ ತಡ, ಅವನೂ ಅವನ ಪ್ರಜೆಗಳೆಲ್ಲರೂ ಹೆದರಿದರು. ಬಿರುಗಾಳಿಗೆ ಸಿಕ್ಕಿದ ಗಿಡಮರಗಳಂತೆ ನಡುಗಿದರು.


ನಿನ್ನ ಕೋಟೆಗಳೆಲ್ಲ ಮೊತ್ತಮೊದಲು ಮಾಗಿದ ಹಣ್ಣುಗಳುಳ್ಳ ಅಂಜೂರದ ಮರಗಳಂತಿವೆ. ಆ ಮರಗಳನ್ನು ಅಲ್ಲಾಡಿಸಿದ್ದೇ ಆದರೆ ಹಣ್ಣುಗಳು ಬೀಳುವುವು. ತಿನ್ನುವವರ ಬಾಯಿಗೆ,


ಆ ಮರವನ್ನು ಕಡಿಯಿರಿ, ಕೊಂಬೆಗಳನ್ನು ಕತ್ತರಿಸಿ, ಎಲೆಗಳನ್ನು ಉದುರಿಸಿ, ಹಣ್ಣುಗಳನ್ನು ಕಿತ್ತುಬಿಸಾಡಿ. ಮೃಗಗಳು ಅದರ ನೆರಳನ್ನು ಬಿಟ್ಟು ತೆರಳಲಿ, ಪಕ್ಷಿಗಳು ರೆಂಬೆಗಳನ್ನು ತೊರೆದುಹೋಗಲಿ.


ನಾಡು ದುಃಖದಿಂದ ಸೊರಗುತ್ತಿದೆ. ಲೆಬನೋನ್ ನಾಚಿಕೆಯಿಂದ ಒಣಗುತ್ತಿದೆ. ಶಾರೋನ್ ಬೆಂದು ಬೆಂಡಾಗಿದೆ. ಬಾಷಾನ್ ಮತ್ತು ಕರ್ಮೆಲ್ ಎಲೆಗಳಿಲ್ಲದೆ ಬೋಳಾಗಿವೆ.


ಆಕಾಶದ ತಾರೆಗಳು, ನಕ್ಷತ್ರಗಳು ಬೆಳಗವು, ಸೂರ್ಯನು ಅಂಧಕಾರಮಯನಾಗುವನು, ಚಂದ್ರನು ಕಾಂತಿಹೀನನಾಗುವನು.


ಸರ್ವೇಶ್ವರಸ್ವಾಮಿಯ ಭಯಂಕರ ಮಹಾದಿನದ ಮುಂಚೆ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ರಕ್ತಗೆಂಪಾಗುವನು.


ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಅವನಾಗುವನು ಮಾಗದ ಹಣ್ಣನ್ನು ಕಳೆದುಕೊಂಡ ದ್ರಾಕ್ಷಿಬಳ್ಳಿಯಂತೆ ಹೂಗಳನ್ನು ಉದುರಿಸಿಕೊಂಡ ಓಲಿವ್ ಎಣ್ಣೆ ಮರದಂತೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು