Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:14 - ಕನ್ನಡ ಸತ್ಯವೇದವು C.L. Bible (BSI)

14 ಆಕಾಶವು ಸುರುಳಿಯಂತೆ ಸುತ್ತಿಕೊಂಡು ಕಣ್ಮರೆಯಾಯಿತು. ಎಲ್ಲಾ ಪರ್ವತಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆಕಾಶವು ಸುರುಳಿಯಂತೆ ಸುತ್ತಲ್ಪಟ್ಟು ಮರೆಯಾಯಿತು. ಎಲ್ಲಾ ಬೆಟ್ಟಗಳು ಮತ್ತು ದ್ವೀಪಗಳು ತಮ್ಮತಮ್ಮ ಸ್ಥಳಗಳಿಂದ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಕಾಶವು ವಿಭಾಗಗೊಂಡು ಸುರುಳಿಯಂತೆ ಸುತ್ತಲ್ಪಟ್ಟಿತು. ಪ್ರತಿಯೊಂದು ಬೆಟ್ಟ ಮತ್ತು ದ್ವೀಪಗಳು ತಮ್ಮ ನೆಲೆಯಿಂದ ಚಲಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಕಾಶವು ಸುರುಳಿಯಂತೆ ಸುತ್ತಿಕೊಂಡು ಹೊರಟುಹೋಯಿತು. ಪ್ರತಿ ಬೆಟ್ಟಗಳು ಮತ್ತು ದ್ವೀಪಗಳು ತಮ್ಮ ಸ್ಥಳಗಳಿಂದ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಮಳಬ್ ಎಕ್ ಸುಳ್ಳಿ ಮಡಚ್ಲ್ಯಾ ಬಾಸೆನ್ ಹೊವ್ನ್ ನಾಪತ್ತೊ ಹೊಲೊ, ಅನಿ ಸಗ್ಳ್ಯಾ ಮಡ್ಡಿಯಾ ಅನಿ ದ್ವಿಪಾ ತೆಂಚ್ಯಾ ತೆಂಚ್ಯಾ ಜಾಗ್ಯಾನಿ ವೈನಾ ಹಾಲ್ಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:14
16 ತಿಳಿವುಗಳ ಹೋಲಿಕೆ  

ಗಗನದ ನಕ್ಷತ್ರವ್ಯೂಹವು ಕ್ಷಯಿಸುವುದು, ಆಕಾಶಮಂಡಲವು ಸುರುಳಿಯಂತೆ ಸುತ್ತಿಕೊಳ್ಳುವುದು. ದ್ರಾಕ್ಷಿಯ ಎಲೆಗಳು ಒಣಗಿಬೀಳುವಂತೆ, ಅಂಜೂರದ ತರಗುಗಳು ಉದುರುವಂತೆ ತಾರಾಮಂಡಲವೆಲ್ಲ ಕಳಚಿಬೀಳುವುದು.


ದ್ವೀಪಗಳು ಕಣ್ಮರೆ ಆದವು; ಬೆಟ್ಟಗಳು ನೆಲಸಮವಾದವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ನೀನಾದರೋ ಉಳಿದಿರುವೆ, ಅವೋ ಅಳಿದುಹೋಗುವುವು I ಹಳೆಯದಾಗುತ್ತವೆ ಬಟ್ಟೆಯಂತೆ ಅವೆಲ್ಲವು I ಉಡುಪಿನಂತೆ ಬದಲಿಸುತ್ತ, ಮಾರ್ಪಡುತ್ತವೆ ಅವು II


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಭೂಜಂತುಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಹಾಗು ಜಗದ ಸಕಲ ಮಾನವರು ನನ್ನೆದುರಿಗೆ ನಡುಗುವರು; ಪರ್ವತಗಳು ಉರುಳಿಹೋಗುವುವು, ಝರಿಗಳು ಕವಚಿಕೊಳ್ಳುವುವು, ಎಲ್ಲ ಗೋಡೆಗಳು ನೆಲಸಮವಾಗುವುವು.


ಬಿರುಕುಬಿಟ್ಟಾವು ಬೆಟ್ಟಗಳು, ಕದಲಿಯಾವು ಗುಡ್ಡಗಳು, ನನ್ನ ಅಚಲ ಪ್ರೀತಿಯಾದರೊ ಬಿಟ್ಟುಹೋಗದು ನಿನ್ನನು. ಶಾಂತಿಸಮಾಧಾನದ ನನ್ನೀ ಒಪ್ಪಂದವು ಕದಲದು. ನಿನ್ನ ಮೇಲೆ ಕರುಣೆಯಿಟ್ಟಿರುವ ಸರ್ವೇಶ್ವರನ ನುಡಿಯಿದು.”


ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


ಆತನೆದುರು ಅದರುತ್ತವೆ ಬೆಟ್ಟಗಳು ಕರಗುತ್ತವೆ ಗುಡ್ಡಗಳು. ಆತನ ದರ್ಶನಕೆ ಕಂಪಿಸುತ್ತದೆ ಭೂಗೋಳವು ತಲ್ಲಣಿಸುತ್ತದೆ ಲೋಕ ಲೋಕನಿವಾಸಿಗಳೆಲ್ಲವು.


“ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು