Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:15 - ಕನ್ನಡ ಸತ್ಯವೇದವು C.L. Bible (BSI)

15 ಭೂರಾಜರು, ಅಧಿಪತಿಗಳು, ಸೇವಾನಾಯಕರು, ಸಿರಿವಂತರು, ಪರಾಕ್ರಮಿಗಳು, ದಾಸರು, ಸ್ವತಂತ್ರರು ಎಲ್ಲರೂ ಓಡಿಹೋಗಿ ಬೆಟ್ಟಗಳ ಗವಿಗಳಲ್ಲೂ ಮತ್ತು ಬಂಡೆಗಳ ಸಂದುಗಳಲ್ಲೂ ಅವಿತುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆಗ ಭೂರಾಜರುಗಳೂ, ಮಹಾಪುರುಷರೂ, ಸಹಸ್ರಾಧಿಪತಿಗಳೂ, ಐಶ್ವರ್ಯವಂತರೂ, ಪರಾಕ್ರಮಶಾಲಿಗಳೂ, ಎಲ್ಲಾ ದಾಸರೂ ಮತ್ತು ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಮತ್ತು ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆಗ ಲೋಕದ ರಾಜರುಗಳೂ ಅಧಿಪತಿಗಳೂ ಸೇನಾಧಿಪತಿಗಳೂ ಶ್ರೀಮಂತರೂ ಬಲಿಷ್ಠರೂ ಪ್ರತಿಯೊಬ್ಬ ಗುಲಾಮನೂ ಸ್ವತಂತ್ರ ಪ್ರಜೆಯೂ ಗವಿಗಳಲ್ಲಿ ಮತ್ತು ಬೆಟ್ಟಗಳ ಮೇಲಿನ ಬಂಡೆಗಳ ಮರೆಯಲ್ಲಿ ಅಡಗಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅನಂತರ ಭೂರಾಜರುಗಳು, ಮಹಾಪುರುಷರು, ಸಹಸ್ರಾಧಿಪತಿಗಳು, ಐಶ್ವರ್ಯವಂತರು, ಬಲಿಷ್ಠರು, ದಾಸರು ಹಾಗೂ ಸ್ವತಂತ್ರರು, ಗವಿ ಮತ್ತು ಬೆಟ್ಟಗಳ ಬಂಡೆಗಳಲ್ಲಿ ತಮ್ಮನ್ನು ಮರೆಮಾಡಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತನ್ನಾ ಹ್ಯಾ ಜಿಮ್ನಿ ವೈಲೆ ರಾಜಾ, ಅದಿಕಾರಿ ಅನಿ ಸೈನಿಕಾಂಚೆ ಮೊಟೆ-ಮೊಟೆ ಅದಿಕಾರಿ, ಸಾವ್ಕಾರಾ ಅನಿ ತಾಕತ್ವರ್ ಲೊಕಾ, ಅನಿ ಹುರಲ್ಲಿ ಸಗ್ಳಿ ಲೊಕಾ, ಗುಲಾಮಾ ಅನಿ ಸ್ವತಂತ್ರ್ ಅಸಲ್ಲಿ ಸಗ್ಳಿ ಲೊಕಾ, ಢುರ್‍ಯಾತ್ನಿ ಅನಿ ಮಡ್ಡಿಯಾಂಚ್ಯಾ ಮೊಟ್ಯಾ-ಮೊಟ್ಯಾ ಗುಂಡ್ಯಾಂಚ್ಯಾ ಮುಳಾತ್ನಿ ಜಾವ್ನ್ ನಿಪ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:15
19 ತಿಳಿವುಗಳ ಹೋಲಿಕೆ  

ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ನುಗ್ಗುವರು ಜನರು ಕಲ್ಲುಬಂಡೆಗಳ ಸಂದುಗೊಂದುಗಳಲ್ಲಿ, ಶಿಲೆಗಳ ಸೀಳುಪಾಳುಗಳಲ್ಲಿ.


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


ಇಂಥವರಿಗೆ ಈ ಲೋಕ ತಕ್ಕ ಸ್ಥಳವಾಗಿರಲಿಲ್ಲ. ಈ ಕಾರಣದಿಂದ, ಅವರು ಕಾಡು ಬೆಟ್ಟಗಳಲ್ಲೂ ಗುಹೆಕಣಿವೆಗಳಲ್ಲೂ ತಲೆಮರೆಸಿಕೊಂಡಿದ್ದರು.


ನೆಲದ ಮೇಲೆ ಹರಿದಾಡುವ ಹಾವುಹಲ್ಲಿಗಳಂತೆ ಅವರು ಮಣ್ಣು ಮುಕ್ಕುವರು; ಗಡಗಡನೆ ನಡುಗುತ್ತಾ ಬಿಲದಿಂದ ಈಚೆ ಬರುವರು. ಸರ್ವೇಶ್ವರ ಎಂಬ ನಮ್ಮ ದೇವರಾದ ನಿಮ್ಮ ಕಡೆಗೆ ಭಯಭಕ್ತಿಯಿಂದ ತಿರುಗಿಕೊಳ್ಳುವರು.


ಈ ಜನರಾದರೋ ಸೂರೆಯಾಗಿದ್ದಾರೆ ಕೊಳ್ಳೆಗೆ ಈಡಾಗಿ, ಎಲ್ಲರೂ ಬಿದ್ದಿದ್ದಾರೆ ಹಳ್ಳಕೊಳ್ಳಗಳಲ್ಲಿ, ಸೆರೆಮನೆಗಳಲ್ಲಿ ಬಂಧಿಗಳಾಗಿ; ಸುಲಿಗೆಯಾಗಿದ್ದರೂ ಅವರನ್ನು ಬಿಡಿಸುವವರಾರೂ ಇಲ್ಲ ಸೂರೆಯಾಗಿದ್ದರೂ ಅವರನ್ನು ಬಿಟ್ಟುಬಿಡಿ ಎನ್ನುವವರಾರೂ ಇಲ್ಲ.


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ಇಸ್ರಯೇಲರಿಗೆ ಕೇಡು ಬಂದೊದಗಿತು. ತಾವು ಇಕ್ಕಟ್ಟಿನಲ್ಲಿ ಇದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.


ಮಿದ್ಯಾನ್ಯರ ಶಕ್ತಿ ಹೆಚ್ಚಿತು. ಇಸ್ರಯೇಲರು ಅವರಿಗೆ ಹೆದರಿ ಬೆಟ್ಟಗುಡ್ಡಗಳಲ್ಲಿ ಕಂದರಗಳನ್ನೂ ಗುಹೆಗಳನ್ನೂ ಮಾಡಿ ಅವುಗಳಲ್ಲಿ ವಾಸಮಾಡಿದರು.


ಅಂದು, ಸಂಜೆಯ ತಂಗಾಳಿಯಲ್ಲಿ, ಸರ್ವೇಶ್ವರನಾದ ದೇವರು ತೋಟದೊಳಗೆ ಸಂಚರಿಸುವ ಸಪ್ಪಳವು ಕೇಳಿಸಿತು. ಅವರಿಗೆ ಕಾಣಿಸಿಕೊಳ್ಳಬಾರದೆಂದು ಆದಾಮನೂ ಹವ್ವಳೂ ಹಿಂದೆ ಅವಿತುಕೊಂಡರು.


“ಉರಿಯುವ ದೀಪದ ಬೆಳಕು ಹೊಳೆಯದು ನಿನ್ನಲ್ಲಿ, ವಧುವರರ ಇನಿದನಿ ಕೇಳದು ನಿನ್ನಲ್ಲಿ. ಇದ್ದರು ನಿನ್ನ ವರ್ತಕರು ಇಳೆಗೆ ಧನವಂತರಾಗಿ ಬಿದ್ದವು ರಾಷ್ಟ್ರಗಳು ನಿನ್ನ ಜಾಲಕೆ ವಂಚಿತರಾಗಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು