Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:9 - ಕನ್ನಡ ಸತ್ಯವೇದವು C.L. Bible (BSI)

9 ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ, ತಮಗಿದ್ದ ದೃಢವಾದ ಸಾಕ್ಷಿಯ ನಿಮಿತ್ತವಾಗಿಯೂ, ಹತರಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಕುರಿಮರಿಯು ಐದನೆಯ ಮುದ್ರೆಯನ್ನು ತೆರೆಯಿತು. ಆಗ ಯಜ್ಞವೇದಿಕೆಯ ಕೆಳಗೆ ಕೆಲವು ಆತ್ಮಗಳಿರುವುದನ್ನು ನಾನು ನೋಡಿದೆನು. ದೇವರ ಸಂದೇಶಕ್ಕೂ ತಾವು ಸ್ವೀಕರಿಸಿ ಕೊಂಡ ಸತ್ಯಕ್ಕೂ ನಂಬಿಗಸ್ತರಾಗಿದ್ದ ಕಾರಣ ಕೊಲ್ಲಲ್ಪಟ್ಟವರ ಆತ್ಮಗಳೇ ಅವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಕುರಿಮರಿ ಆಗಿರುವವರು ಐದನೆಯ ಮುದ್ರೆಯನ್ನು ಒಡೆದಾಗ, ದೇವರ ವಾಕ್ಯದ ನಿಮಿತ್ತವಾಗಿಯೂ ತಮಗಿದ್ದ ಸಾಕ್ಷಿಯ ನಿಮಿತ್ತವಾಗಿಯೂ ಹತರಾದವರ ಆತ್ಮಗಳು ಬಲಿಪೀಠದ ಕೆಳಗಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಮಾನಾ ಬೊಕ್ಡಾನ್ ಪಾಚ್ವೆಚೊ ಛಪ್ಪೊ ಫೊಡ್ಲ್ಯಾನ್. ತನ್ನಾ ದೆವಾಚಿ ಬರಿ ಖಬರ್ ಸಾಂಗಲ್ಲ್ಯಾ ಸಾಟ್ನಿ ಅನಿ ದೆವಾಚ್ಯಾ ವಿಶಯಾತ್ ಸಾಕ್ಷಿ ದಿತಲ್ಯಾತ್ ವಿಶ್ವಾಸಾನ್ ಹೊತ್ತ್ಯಾ ಸಾಟ್ನಿ ಜಿವಾನಿ ಮಾರಲ್ಲ್ಯಾ ಲೊಕಾಂಚೆ ಆತ್ಮೆ ಆಲ್ತಾರಿಚ್ಯಾ ಖಾಲ್ತಿ ಹೊತ್ತೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:9
21 ತಿಳಿವುಗಳ ಹೋಲಿಕೆ  

ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.


ಜನರು, ನಿಮ್ಮನ್ನು ಪ್ರಾರ್ಥನಾಮಂದಿರದಿಂದ ಬಹಿಷ್ಕರಿಸುವರು, ಅಷ್ಟೇ ಅಲ್ಲ, ನಿಮ್ಮನ್ನು ಕೊಲ್ಲುವವನು ತಾನು ದೇವರಿಗೆ ಬಲಿಕೊಟ್ಟೆನೆಂದು ಭಾವಿಸುವ ಕಾಲವೂ ಬರಲಿದೆ.


ನಾನು ಯೊವಾನ್ನ, ನಿಮ್ಮ ಸಹೋದರ; ಕ್ರಿಸ್ತೇಸುವಿನಲ್ಲಿ ದೇವರ ಸಾಮ್ರಾಜ್ಯಕ್ಕೆ ಸೇರಿರುವವರಿಗೆ ಬಂದೊದಗುವ ಕಷ್ಟಸಂಕಟಗಳನ್ನು ತಾಳ್ಮೆಯಿಂದ ಸಹಿಸಿಕೊಳ್ಳುವುದರಲ್ಲಿ ನಿಮ್ಮ ಪಾಲುಗಾರ. ದೇವರ ವಾಕ್ಯವನ್ನು ಸಾರಿದುದರಿಂದಲೂ ಕ್ರಿಸ್ತೇಸುವಿಗೆ ಸಾಕ್ಷಿ ನೀಡಿದುದರಿಂದಲೂ ನಾನು ಪತ್ಮೋಸ್ ದ್ವೀಪವಾಸವನ್ನು ಅನುಭವಿಸಬೇಕಾಯಿತು.


ನಿನ್ನ ನಿವಾಸಸ್ಥಳವನ್ನು ನಾನು ಬಲ್ಲೆ. ಅದು ಸೈತಾನನ ಅಧಿಕಾರಸ್ಥಾನ. ಆದರೂ ನೀನು ನನ್ನ ನಾಮವನ್ನೇ ದೃಢವಾಗಿ ಆಶ್ರಯಿಸಿರುವೆ. ಸೈತಾನನ ಬಿಡಾರವಾದ ನಿನ್ನ ಆ ನಗರದಲ್ಲಿಯೇ ನನ್ನ ನಂಬಿಕಸ್ಥನೂ ಸಾಕ್ಷಿಯೂ ಆದ ಅಂತಿಪನನ್ನು ಕೊಂದುಹಾಕಿದರು. ಆ ದಿವಸಗಳಲ್ಲೂ ನೀನು ನನ್ನಲ್ಲಿಟ್ಟಿರುವ ವಿಶ್ವಾಸವನ್ನು ನಿರಾಕರಿಸಲಿಲ್ಲ.


ಆದ್ದರಿಂದ ಕ್ರಿಸ್ತಯೇಸುವಿಗೆ ಸಾಕ್ಷಿ ಆಗಿರಲು ನಾಚಬೇಡ. ಅವರಿಗಾಗಿ ಬಂಧಿಯಾಗಿರುವ ನನ್ನ ವಿಷಯದಲ್ಲೂ ನಾಚಬೇಡ. ದೇವರ ಶಕ್ತಿಯನ್ನು ಆಶ್ರಯಿಸಿ ನನ್ನೊಡನೆ ಶುಭಸಂದೇಶಕ್ಕೋಸ್ಕರ ನಿನ್ನ ಪಾಲಿನ ಶ್ರಮವನ್ನು ಅನುಭವಿಸು.


ಅನಂತರ ಬಲಿಪೀಠದಿಂದ ಹೀಗೆ ಕೇಳಿ ಬಂತು : “ಹೌದು ಪ್ರಭುವೇ, ಸರ್ವಶಕ್ತನೇ, ನೀನಿತ್ತ ತೀರ್ಪು ಸತ್ಯ ಹಾಗೂ ನ್ಯಾಯಬದ್ಧವಾದುದೇ.”


ಬೆಂಕಿಯ ಮೇಲೆ ಅಧಿಕಾರ ಪಡೆದಿದ್ದ ಒಬ್ಬ ದೇವದೂತನು, ಆಗ ಬಲಿಪೀಠದ ಬಳಿಯಿಂದ ಬಂದನು. ಈತ ಕೈಯಲ್ಲಿ ಹರಿತವಾದ ಕುಡುಗೋಲನ್ನು ಹಿಡಿದಿದ್ದ ದೇವದೂತನನ್ನು ಉದ್ದೇಶಿಸಿ, “ನಿನ್ನ ಹರಿತವಾದ ಕುಡುಗೋಲನ್ನು ಕಳುಹಿಸು, ಭೂಮಿಯ ದ್ರಾಕ್ಷಾಫಲಗಳು ಪೂರ್ಣವಾಗಿ ಮಾಗಿವೆ; ಆ ಗೊಂಚಲುಗಳನ್ನು ಕೊಯ್ಯಬೇಕಾಗಿದೆ,” ಎಂದು ಕೂಗಿ ಹೇಳಿದನು.


ಯೊವಾನ್ನನು ದೇವರ ಸಂದೇಶಕ್ಕೂ ಕ್ರಿಸ್ತೇಸು ತಿಳಿಸಿದ ಸತ್ಯಕ್ಕೂ ಸಾಕ್ಷಾತ್ ಸಾಕ್ಷಿಯಾಗಿದ್ದಾನೆ.


ಉಭಯ ಸಂಕಟಕ್ಕೆ ಸಿಲುಕಿದ್ದೇನೆ. ಒಂದು ಕಡೆ, ಈ ಬದುಕನ್ನು ತೊರೆದು ಕ್ರಿಸ್ತಯೇಸುವಿನೊಡನೆ ಒಂದಾಗಿರಬೇಕೆಂಬುದೇ ನನ್ನ ಬಯಕೆ. ಇದು ಎಷ್ಟೋ ಮೇಲಾದುದು.


ಆದ್ದರಿಂದ ಈ ದೇಹವನ್ನು ತ್ಯಜಿಸಿ, ಪ್ರಭುವನ್ನೇ ನೆಚ್ಚಿ ನೆಲಸುವುದು ಲೇಸೆಂದು ಧೈರ್ಯದಿಂದ ಹೇಳುತ್ತೇವೆ.


ಬಳಿಕ ಯಾಜಕನು ದೇವದರ್ಶನದ ಗುಡಾರದೊಳಗೆ ಸರ್ವೇಶ್ವರನ ಸನ್ನಿಧಿಯಲ್ಲಿರುವ ಪರಿಮಳ ಧೂಪವೇದಿಕೆಯ ಕೊಂಬುಗಳಿಗೆ ಆ ರಕ್ತವನ್ನು ಹೆಚ್ಚಿ ಹೋರಿಯ ಮಿಕ್ಕ ರಕ್ತವನ್ನೆಲ್ಲ ದೇವದರ್ಶನದ ಗುಡಾರದ ಬಾಗಿಲಿಗೆ ಎದುರಾಗಿ ದಹನಬಲಿ ಕೊಡುವ ಬಲಿಪೀಠದ ಬುಡದಲ್ಲಿ ಸುರಿಯಬೇಕು.


ಕೂಡಲೇ ಆರಾಧಿಸಲೆಂದು ಆತನ ಪಾದಗಳಿಗೆ ಅಡ್ಡಬಿದ್ದೆ. ಆಗ ಆತನು, “ನೀನು ನನಗೆ ಅಡ್ಡಬೀಳಬಾರದು, ನಾನು ನಿನ್ನ ಹಾಗೂ ಕ್ರಿಸ್ತೇಸು ಶ್ರುತಪಡಿಸಿದ ಸತ್ಯವನ್ನು ಅಂಗೀಕರಿಸಿದ ನಿನ್ನ ಸಹೋದರರ ಸಹ ಸೇವಕನಷ್ಟೆ. ನೀನು ದೇವರನ್ನು ಆರಾಧಿಸು,” ಎಂದನು. ಯೇಸು ಶ್ರುತಪಡಿಸಿದ ಸತ್ಯವೇ ಪ್ರವಾದಿಗಳ ಜೀವಾಳ.


ಅನಂತರ ಮತ್ತೊಬ್ಬ ದೇವದೂತನು ಬಂದು ಬಲಿಪೀಠದ ಬಳಿ ನಿಂತನು. ಅವನ ಕೈಯಲ್ಲಿ ಚಿನ್ನದ ಧೂಪಾರತಿ ಇತ್ತು. ಸಿಂಹಾಸನದ ಸಮ್ಮುಖದಲ್ಲಿರುವ ಚಿನ್ನದ ಬಲಿಪೀಠದ ಮೇಲೆ ದೇವಜನರೆಲ್ಲರ ಪ್ರಾರ್ಥನೆಯೊಡನೆ ಸಮರ್ಪಿಸಲು ಅವನಿಗೆ ಬಹಳಷ್ಟು ಧೂಪವನ್ನು ಕೊಡಲಾಗಿತ್ತು.


ನಾನು ಯಜ್ಞಪಶುವಾಗಿ ಅರ್ಪಿತನಾಗುವ ಸಮಯವು ಬಂದಿದೆ. ಈ ಲೋಕದಿಂದ ತೆರಳಬೇಕಾದ ಕಾಲವೂ ಕೂಡಿಬಂದಿದೆ.


ಆರನೆಯ ದೇವದೂತನು ತುತೂರಿಯನ್ನು ಊದಿದನು. ದೇವರ ಸಾನ್ನಿಧ್ಯದಲ್ಲಿ ಇರುವ ಚಿನ್ನದ ಬಲಿಪೀಠದ ನಾಲ್ಕು ಮೂಲೆಗಳಿಂದ ಹೊರಟ ಒಂದು ಶಬ್ದ ನನಗೆ ಕೇಳಿಸಿತು.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ಆಗ ಸರ್ವೇಶ್ವರ, “ನೀನು ಎಂಥ ಕೃತ್ಯ ಎಸಗಿದೆ? ಪ್ರತೀಕಾರಕ್ಕಾಗಿ ನೆಲದಿಂದ ನಿನ್ನ ತಮ್ಮನ ರಕ್ತ ಕೂಗಿ ನನಗೆ ಮೊರೆಯಿಡುತ್ತಿದೆ, ಕೇಳು.


ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು.


ಸ್ವರ್ಗದಲ್ಲಿ ದಾಖಲೆಯಾಗಿರುವ ಜೇಷ್ಠಪುತ್ರನ ಸಭೆಗೆ; ನೀವು ಬಂದಿರುವುದು ಸಕಲ ಮಾನವರ ನ್ಯಾಯಮೂರ್ತಿಯಾದ ದೇವರ ಸನ್ನಿಧಿಗೆ; ಸಿದ್ಧಿಗೆ ಬಂದ ಸತ್ಪುರುಷರ ಆತ್ಮಗಳ ಸಮೂಹಕ್ಕೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು