Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:1 - ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇದಾದ ನಂತರ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ಚತುರ್ದಿಕ್ಕುಗಳ ಗಾಳಿಗಳನ್ನು ತಡೆಹಿಡಿದಿರುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂವಿುಯ ನಾಲ್ಕು ದಿಕ್ಕುಗಳಲ್ಲಿ ನಿಂತುಕೊಂಡು ಭೂವಿುಯ ಮೇಲಾಗಲಿ ಸಮುದ್ರದ ಮೇಲಾಗಲಿ ಯಾವ ಮರದ ಮೇಲಾಗಲಿ ಗಾಳಿಬೀಸದಂತೆ ಭೂವಿುಯ ಚತುರ್ದಿಕ್ಕುಗಳ ಗಾಳಿಗಳನ್ನು ಹಿಡಿದಿರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಇದಾದ ಮೇಲೆ ನಾಲ್ಕು ಮಂದಿ ದೇವದೂತರು ಭೂಮಿಯ ನಾಲ್ಕು ಮೂಲೆಗಳಲ್ಲಿ ನಿಂತಿರುವುದನ್ನು ನಾನು ನೋಡಿದೆನು. ಗಾಳಿಯು ಭೂಮಿಯ ಮೇಲಾಗಲಿ ಸಮುದ್ರದ ಮೇಲಾಗಲಿ ಮರದ ಮೇಲಾಗಲಿ ಬೀಸದಂತೆ ಅವರು ಭೂಮಿಯ ನಾಲ್ಕು ದಿಕ್ಕುಗಳ ಗಾಳಿಯನ್ನು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇದಾದನಂತರ ನಾಲ್ಕು ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿರುವುದನ್ನು ಕಂಡೆನು. ಅವರು ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ ಅಥವಾ ಯಾವ ಮರದ ಮೇಲಾಗಲಿ ಗಾಳಿ ಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ತಡೆಹಿಡಿದಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಹೊಲ್ಲ್ಯಾ ಮಾನಾ ಚಾರ್ ಜಾನಾ ದೆವ್‍ದುತಾ ಜಿಮ್ನಿಚ್ಯಾ ಚಾರ್ ದಿಕ್ಕಾಕ್ನಿ ಇಬೆ ರ್‍ಹಾವ್ನ್ ಜಿಮ್ನಿ ವರ್ತಿ ಹೊಂವ್ದಿತ್, ಸಮುಂದರಾತ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ವಾರೊ ಯೆವ್ನ್ ಮಾರುಚೆ ನ್ಹಯ್ ಮನುನ್ ವಾರ್‍ಯಾಕ್ ಆಡ್ವುನ್ ಘೆವ್ನ್ ಇಬೆ ಹೊತ್ತೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:1
23 ತಿಳಿವುಗಳ ಹೋಲಿಕೆ  

ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಅದರ ಸಾರಾಂಶ ಇದು: ನಾನು ರಾತ್ರಿ ಕಂಡ ಕನಸಿನಲ್ಲಿ ನಾಲ್ಕು ದಿಕ್ಕುಗಳಿಂದಲೂ ಗಾಳಿ ಮಹಾಸಾಗರದ ಮೇಲೆ ರಭಸವಾಗಿ ಬೀಸಿ ಬಡಿಯುತ್ತಿತ್ತು.


ನಾಲ್ಕು ದಿಕ್ಕುಗಳಿಂದಲೂ ನಾಲ್ಕು ಗಾಳಿಗಳನ್ನು ಏಲಾಮ್ಯರ ಮೇಲೆ ಬರಮಾಡಿ ಅವರನ್ನು ಆಯಾ ಗಾಳಿಗೆ ತೂರಿಬಿಡುವೆನು. ಏಲಾಮಿನಿಂದ ದೇಶಭ್ರಷ್ಟರಾದವರು ಆಶ್ರಯ ಹುಡುಕದ ರಾಜ್ಯವೇ ಇರದು.


ಆತನು ದೇವದೂತರನ್ನು ಜಗತ್ತಿನ ನಾಲ್ಕು ದಿಕ್ಕುಗಳಿಗೂ ಕಳುಹಿಸಿ, ತಾನು ಆರಿಸಿಕೊಂಡವರನ್ನು ವಿಶ್ವದ ಅಷ್ಟದಿಕ್ಕುಗಳಿಂದಲೂ ಒಟ್ಟುಗೂಡಿಸುವನು.


ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.


ಆಗ ಸರ್ವೇಶ್ವರ ನನಗೆ - “ನರಪುತ್ರನೇ, ನೀನು ಶ್ವಾಸಕ್ಕೆ ನುಡಿ; ಶ್ವಾಸವೇ, ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚತುರ್ದಿಕ್ಕುಗಳಿಂದ ಬೀಸಿ ಹತ ಶರೀರಗಳು ಬದುಕುವಂತೆ ಅವುಗಳ ಮೇಲೆ ಸುಳಿ, ಎಂಬುದಾಗಿ ಶ್ವಾಸಕ್ಕೆ ನುಡಿ,” ಎಂದು ಅಪ್ಪಣೆಕೊಟ್ಟರು.


“ನರಪುತ್ರನೇ, ಸರ್ವೇಶ್ವರನಾದ ದೇವರು ಇಸ್ರಯೇಲ್ ನಾಡಿಗೆ ಹೀಗೆ ನುಡಿಯುತ್ತಾರೆ: ‘ಪ್ರಳಯ, ಪೂರ್ಣಪ್ರಳಯ ನಾಡಿನ ಚತುರ್ದಿಕ್ಕಿನಲ್ಲೂ ಸಂಭವಿಸಿದೆ.’


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


“ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು.


ಭೂಮಿಯ ಮೇಲಣ ಹುಲ್ಲಿಗಾಗಲಿ, ಯಾವುದೇ ಹಸಿರು ಇಲ್ಲವೇ ಮರಗಳಿಗಾಗಲಿ ಕೇಡನ್ನುಂಟುಮಾಡಬಾರದು ಎಂದೂ ಮಾನವರಲ್ಲಿ ಯಾರ ಹಣೆಯ ಮೇಲೆ ದೇವರ ಮುದ್ರೆಯಿಲ್ಲವೋ ಅಂಥವರಿಗೆ ಮಾತ್ರ ಕೇಡು ಮಾಡಬಹುದೆಂದೂ ಅಪ್ಪಣೆಯಾಗಿತ್ತು.


ನನಗೆ ಇನ್ನೊಂದು ದರ್ಶನವಾಯಿತು: ಇಗೋ, ಎರಡು ಬೆಟ್ಟಗಳ ನಡುವೆ ಬರುತ್ತಿರುವ ನಾಲ್ಕು ರಥಗಳು ಕಾಣಿಸಿದವು. ಅವು ಕಂಚಿನ ಬೆಟ್ಟಗಳಾಗಿದ್ದವು.


ಆದರೆ ಸರ್ವೇಶ್ವರ ಸಮುದ್ರದಲ್ಲಿ ಬಿರುಗಾಳಿಯೊಂದನ್ನು ಬರಮಾಡಿದರು. ಅಲೆಗಳ ಹೊಡೆತಕ್ಕೆ ಹಡಗು ನುಚ್ಚುನೂರಾಗಿ ಒಡೆದುಹೋಗುವುದರಲ್ಲಿತ್ತು. ದಿಗ್ಭ್ರಾಂತರಾದ ನಾವಿಕರು ಪ್ರಾಣರಕ್ಷಣೆಗಾಗಿ ತಮ್ಮ ದೇವದೇವತೆಗಳ ಮೊರೆ ಹೊಕ್ಕರು. ಪ್ರಾಣಾಪಾಯದಿಂದ ಪಾರಾಗಲು ತಮ್ಮಲ್ಲಿದ್ದ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆದರು.


ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.


ಸರ್ವೇಶ್ವರನಾದ ನಾನೇ ಇದರ ತೋಟಗಾರ, ಕ್ಷಣಕ್ಷಣಕ್ಕೂ ಇದಕೆ ಹೊಯ್ಯುವೆ ನೀರ, ಇದನ್ನಾದರೂ ಮುಟ್ಟದಂತೆ ಕಾಯುವೆ ನಿರಂತರ.


ಆದರೆ ಅವನು ತಲೆಯೆತ್ತಿದ ಮೇಲೆ ಅವನ ರಾಜ್ಯ ಒಡೆದು ನಾಲ್ಕು ದಿಕ್ಕುಗಳಿಗೂ ಸೀಳಿಹೋಗುವುದು. ಅದು ಅವನ ಸಂತತಿಗೆ ಭಾಗವಾಗದು. ಅವನ ಆಳ್ವಿಕೆಯಲ್ಲಿ ಪ್ರಬಲವಾಗಿ ಇದ್ದಂತೆ ಅದು ಇನ್ನು ಪ್ರಬಲವಾಗದು.


ಅದಕ್ಕೆ ದೂತನು, “ಇವು ಆಕಾಶದ ನಾಲ್ಕು ಮಾರುತಗಳು; ಭೂಲೋಕದೊಡೆಯನ ಸಾನ್ನಿಧ್ಯದಿಂದ ಇದೀಗಲೆ ಹೊರಟುಬಂದಿವೆ,” ಎಂದನು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಅವನು ಬಂದು ಭೂಮಿಯ ಅಷ್ಟದಿಕ್ಕುಗಳಲ್ಲಿರುವ ಗೋಗ್ ಮತ್ತು ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸುವನು. ಯುದ್ಧಮಾಡುವುದಕ್ಕಾಗಿ ಅವರನ್ನು ಒಟ್ಟುಗೂಡಿಸುವನು. ಅವರ ಸಂಖ್ಯೆ ಸಮುದ್ರತೀರದ ಮರಳಿನಷ್ಟಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು