Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:10 - ಕನ್ನಡ ಸತ್ಯವೇದವು C.L. Bible (BSI)

10 ಅವರು ಗಟ್ಟಿಯಾದ ಧ್ವನಿಯಿಂದ : “ಸಿಂಹಾಸನಾರೂಢರಾದ ದೇವರಿಂದ, ಬಲಿಯರ್ಪಿತರಾದ ಯಜ್ಞದ ಕುರಿಮರಿಯಿಂದ ಲಭಿಸುತ್ತದೆಮಗೆ ಜೀವೋದ್ಧಾರ,” ಎಂದು ಹಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರು, “ರಕ್ಷಣೆಯೆಂಬುದು ಸಿಂಹಾಸನಾರೂಢನಾದ ನಮ್ಮ ದೇವರ ಮತ್ತು ಯಜ್ಞದ ಕುರಿಮರಿಯಾದಾತನಿಗೆ ಸೇರಿದ್ದು” ಎಂದು ಮಹಾಧ್ವನಿಯಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರು ಗಟ್ಟಿಯಾದ ಧ್ವನಿಯಲ್ಲಿ, “ಸಿಂಹಾಸನದ ಮೇಲೆ ಕುಳಿತುಕೊಳ್ಳುವ ನಮ್ಮ ಪ್ರಭುವಿಗೆ ಮತ್ತು ಕುರಿಮರಿಯಾದಾತನಿಗೆ ಜಯವು ಲಭಿಸಿತು” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತೆನಿ,“ಸಿವಾಸನಾರ್ ಬಸಲ್ಲ್ಯಾ ಅಮ್ಚ್ಯಾ ದೆವಾಕ್ನಾ ಅನಿ ಬೊಕ್ಡಾಕ್ನಾ ಸುಟ್ಕಾ ಯೆತಾ!” ಮನುನ್ ಮೊಟ್ಯಾನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:10
26 ತಿಳಿವುಗಳ ಹೋಲಿಕೆ  

ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದಿಂದ ಬಂದ ಒಂದು ಮಹಾಶಬ್ದವನ್ನು ಆಲಿಸಿದೆ. ಅದು ದೊಡ್ಡ ಜನಸಮೂಹದ ಆರ್ಭಟದಂತಿತ್ತು. “ಅಲ್ಲೆಲೂಯ ! ಜೀವೋದ್ಧಾರವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲುಂಟು.


ಜಯ ವಿಜಯ ಲಭಿಸುವುದು ಪ್ರಭುವಿನಿಂದಲೆ I ನಿನ್ನಾಶೀರ್ವಾದವಿರಲಿ, ಪ್ರಭು, ಪ್ರಜೆಯ ಮೇಲೆ II


ಸ್ವರ್ಗದಿಂದ ಬಂದ ಮಹಾಶಬ್ದವನ್ನು ನಾನು ಕೇಳಿಸಿಕೊಂಡೆ. ಅದು ಇಂತೆಂದಿತು : “ಇಗೋ, ನಮ್ಮ ದೇವನಿತ್ತ ಜೀವೋದ್ಧಾರ ಸಿದ್ಧಿಸಿದೆ ಆತನ ಶಕ್ತಿ, ಸಾಮ್ರಾಜ್ಯಗಳು ಕಂಗೊಳಿಸುತ್ತಿವೆ. ಆತನ ಕ್ರಿಸ್ತಾಧಿಪತ್ಯ ಸ್ಥಾಪಿತವಾಗಿದೆ. ನಮ್ಮ ಸೋದರರನು ದೂರಿದವನನ್ನು ದಬ್ಬಲಾಗಿದೆ. ಹಗಲಿರುಳು ನಮ್ಮ ದೇವರೆದುರು ದೂರಿತ್ತಿದ್ದವನನ್ನು ತಳ್ಳಲಾಗಿದೆ.


ಹೇಳಿ, ನ್ಯಾಯಸ್ಥಾನಕ್ಕೆ ಬಂದು ನಿಮ್ಮ ವಾದವನ್ನು ಮಂಡಿಸಿ; ನಿಮ್ಮ ದೇವರುಗಳು ತಮ್ಮತಮ್ಮೊಳಗೆ ಪರ್ಯಾಲೋಚಿಸಿ ನೋಡಲಿ. ಪ್ರಾರಂಭದಿಂದಲೂ ಈ ವಿಷಯವನ್ನು ಪ್ರಕಟಿಸಿದವರು ಯಾರು? ಅದು ನಡೆಯುವುದಕ್ಕೆ ಮುಂಚೆಯೇ ತಿಳಿಸಿದವನು ನಾನಲ್ಲದೆ ಇನ್ಯಾರು? ನನ್ನ ಹೊರತು ಇನ್ನು ಯಾವ ದೇವರೂ ಇಲ್ಲ; ನಾನಲ್ಲದೆ ಸತ್ಯಸ್ವರೂಪನು, ಉದ್ಧಾರಕನು ಆದ ದೇವನಿಲ್ಲವೇ ಇಲ್ಲ.


ಶಾಪಗ್ರಸ್ತವಾದುದು ಯಾವುದೂ ಆ ನಗರದಲ್ಲಿ ಇರದು. ದೇವರ ಮತ್ತು ಯಜ್ಞದ ಕುರಿಮರಿಯ ಸಿಂಹಾಸನವು ಅಲ್ಲಿರುವುದು. ಸದಾ ಯಾಜಕ ಸೇವೆ ಸಲ್ಲಿಸುವ ಅವರ ದಾಸರಿಗೆ ಅದರ ಮುಖ ದರ್ಶನವಾಗುವುದು.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ಮರುದಿನ ಯೊವಾನ್ನನು, ತಾನಿದ್ದಲ್ಲಿಗೇ ಯೇಸು ಬರುತ್ತಿರುವುದನ್ನು ಕಂಡು, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ; ಲೋಕದ ಪಾಪಗಳನ್ನು ಪರಿಹರಿಸುವವರು ಇವರೇ.


“ನಾನು, ನಾನೇ ಸರ್ವೇಶ್ವರ, ನನ್ನ ಹೊರತು ಇಲ್ಲ ಬೇರೆ ಉದ್ಧಾರಕ.


ಸಿಂಹಾಸನಾರೂಢನಾಗಿದ್ದವನು ಆಗ, “ಇಗೋ, ನಾನೆಲ್ಲವನ್ನೂ ಹೊಸದಾಗಿಸುತ್ತೇನೆ,” ಎಂದನು. ಅಲ್ಲದೆ ಅವನು, “ಇದನ್ನು ನೀನು ಬರೆ, ಈ ಮಾತುಗಳು ಸತ್ಯವಾದುವು ಹಾಗೂ ವಿಶ್ವಾಸಾರ್ಹವಾದುವು,” ಎಂದು ಹೇಳಿದನು.


ಆಗ ದೇವರು ದಯಪಾಲಿಸುವ ಜೀವೋದ್ಧಾರವನ್ನು ಮಾನವರೆಲ್ಲರು ಕಾಣುವರು.”


ಜನರು : “ಇಗೋ, ನಿಮಗೆ ಅಭಿಮುಖರಾಗಿ ಬಂದಿದ್ದೇವೆ. ನೀವೇ ನಮ್ಮ ಸರ್ವೇಶ್ವರ, ನಮ್ಮ ದೇವರು. ನಿಶ್ಚಯವಾಗಿ ಬೆಟ್ಟಗುಡ್ಡಗಳಿಂದಲೂ ಜಾತ್ರೆಜಂಗುಳಿಯಿಂದಲೂ ನಮಗೆ ಮೋಸವಾಯಿತು. ಇಸ್ರಯೇಲಿನ ಉದ್ಧಾರ ಇರುವುದು ನಮ್ಮ ದೇವರಾದ ಸರ್ವೇಶ್ವರ ಸ್ವಾಮಿಯ ಕೈಯಲ್ಲೇ, ಇದು ಸತ್ಯಕ್ಕೂ ಸತ್ಯ.


ಆ ಯಜ್ಞದ ಕುರಿಮರಿಯಾದವರು ಮುಂದೆ ಬಂದು ಸಿಂಹಾಸನದಲ್ಲಿ ಆಸೀನರಾಗಿದ್ದವರ ಬಲಗೈಯಲ್ಲಿದ್ದ ಸುರುಳಿಯನ್ನು ತೆಗೆದುಕೊಂಡರು.


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ನೀವು ಆರಾಧಿಸುವುದು ಯಾರೆಂದು ನಿಮಗೇ ತಿಳಿಯದು. ನಾವು ಆರಾಧಿಸುವುದು ಯಾರೆಂದು ನಮಗೆ ತಿಳಿದಿದೆ. ಏಕೆಂದರೆ ಲೋಕೋದ್ಧಾರಕ ಬರುವುದು ಯೆಹೂದ್ಯರಿಂದಲೇ.


ಅವರನ್ನು ನೋಡುತ್ತಲೇ ಯೊವಾನ್ನನು ತನ್ನ ಆ ಶಿಷ್ಯರಿಗೆ, “ಇಗೋ ನೋಡಿ, ಬಲಿಯರ್ಪಣೆಗಾಗಿ ದೇವರು ನೇಮಿಸಿರುವ ಕುರಿಮರಿ,” ಎಂದು ಹೇಳಿದನು.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ಸರ್ವೇಶ್ವರ ಇಂತೆನ್ನುತ್ತಾರೆ: “ಈಜಿಪ್ಟಿನಿಂದ ನಿನ್ನನ್ನು ಬಿಡಿಸಿಕೊಂಡು ಬಂದಾಗಲಿಂದ ನಾನೇ ನಿನ್ನ ಸರ್ವೇಶ್ವರನಾದ ದೇವರು. ನಾನಲ್ಲದೆ ಬೇರೆ ದೇವರುಗಳು ನಿನಗಿಲ್ಲ. ನಾನಲ್ಲದೆ ನಿನಗೆ ಬೇರೆ ಉದ್ಧಾರಕರಿಲ್ಲ.


ಇಸ್ರಯೇಲರ ದೇವರೇ, ಉದ್ಧಾರಕನೇ, ನಿಶ್ಚಯವಾಗಿ ದೇವರಾದ ನೀನು ಮರೆಯಾಗಿರುವೆ.


ನಮಗಲ್ಲ ಹೇ ಪ್ರಭು, ನಮಗಲ್ಲ ಮಹಿಮೆ I ನಿನ್ನ ನಾಮಕೇ ಸಲ್ಲಲಿ ಆ ಮಹಿಮೆ I ನಿನ್ನ ನೀತಿ ಸತ್ಯತೆಗಳ ನಿಮಿತ್ತವೆ II


ಸಜ್ಜನರ ಜೀವೋದ್ಧಾರ ಪ್ರಭುವಿನಿಂದ I ಆಪತ್ಕಾಲದಲಿ ಆಶ್ರಯ ಆತನಿಂದ II


ಅಡ್ಡಿ ಅಡಚಣೆಗಳು ಬೆಟ್ಟದಂತಿದ್ದರೂ ನೀನು ದೇವಾಲಯವನ್ನು ಕಟ್ಟುವೆ. ಅಂತ್ಯದಲ್ಲಿ ಕಲಶವನ್ನು ಸ್ಥಾಪಿಸುವಾಗ ಜನರು ‘ಎಷ್ಟು ರಮ್ಯ! ಎಷ್ಟು ಸುಂದರ!’ ಎಂದು ಉದ್ಗರಿಸುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು