Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:11 - ಕನ್ನಡ ಸತ್ಯವೇದವು C.L. Bible (BSI)

11 ಆಗ ಸಭಾಪ್ರಮುಖರ ಮತ್ತು ನಾಲ್ಕು ಜೀವಿಗಳ ಸಮೇತ ದೇವದೂತರೆಲ್ಲರೂ ಸಿಂಹಾಸನದ ಸುತ್ತಲೂ ನಿಂತಿದ್ದರು. ಅವರೆಲ್ಲರೂ ಸಿಂಹಾಸನದ ಮುಂದೆ ಸಾಷ್ಟಾಂಗ ನಮಸ್ಕಾರಮಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನದ ಸುತ್ತಲು ನಿಂತಿದ್ದರು. ಹಿರಿಯರು ಮತ್ತು ನಾಲ್ಕು ಜೀವಿಗಳು ಇವುಗಳ ಸುತ್ತಲೂ ನಿಂತುಕೊಂಡಿದ್ದರು ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಹಿರಿಯರು ಅಲ್ಲಿದ್ದರು ಮತ್ತು ನಾಲ್ಕು ಜೀವಿಗಳು ಅಲ್ಲಿದ್ದವು. ಅವರ ಸುತ್ತಲೂ ಮತ್ತು ಸಿಂಹಾಸನದ ಸುತ್ತಲೂ ದೇವದೂತರೆಲ್ಲಾ ನಿಂತಿದ್ದರು. ದೇವದೂತರು ಸಿಂಹಾಸನದ ಮುಂದೆ ಮೊಣಕಾಲೂರಿ ದೇವರನ್ನು ಆರಾಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಸಿಂಹಾಸನ, ಹಿರಿಯರು ಮತ್ತು ನಾಲ್ಕು ಜೀವಿಗಳ ಸುತ್ತಲೂ ದೇವದೂತರು ನಿಂತಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು ದೇವರನ್ನು ಆರಾಧಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಸಗ್ಳಿ ದೆವ್‍ದುತಾ ಜಾನ್ತಿ ಲೊಕಾ, ಅನಿ ತಿ ಚಾರ್ ಸಾವ್ಜಾ ಸಿವಾಸನಾಚ್ಯಾ ಭೊತ್ಯಾನಿ ಇಬೆ ರ್‍ಹಾಲ್ಯಾನಿ. ತನ್ನಾ ತೆನಿ ಸಿವಾಸನಾಚ್ಯಾ ಇದ್ರಾಕ್ ಡಬ್ ಪಡ್ಲ್ಯಾನಿ ಅನಿ ದೆವಾಕ್ ಆರಾದನ್ ಕರುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:11
16 ತಿಳಿವುಗಳ ಹೋಲಿಕೆ  

ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.


ತರುವಾಯ ದೇವರ ಸಾನ್ನಿಧ್ಯದಲ್ಲಿ ತಮ್ಮ ತಮ್ಮ ಪೀಠಗಳಲ್ಲಿ ಕುಳಿತಿದ್ದ ಇಪ್ಪತ್ನಾಲ್ಕು ಸಭಾಪ್ರಮುಖರು ದೇವರಿಗೆ ಸಾಷ್ಟಾಂಗವೆರಗಿ ಆರಾಧಿಸಿದರು. ಅಲ್ಲದೆ,


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಇದಲ್ಲದೆ ದೇವರು ತಮ್ಮ ಚೊಚ್ಚಲ ಮಗನನ್ನು ಭೂಲೋಕಕ್ಕೆ ಕಳುಹಿಸುವಾಗ” “ದೇವದೂತರೆಲ್ಲರೂ ಆತನನ್ನು ಆರಾಧಿಸಲಿ,” ಎಂದಿದ್ದಾರೆ.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ಸೈತಾನನೇ, ತೊಲಗು. ‘ನಿನ್ನ ದೇವರಾದ ಸರ್ವೇಶ್ವರನನ್ನು ಆರಾಧಿಸು. ಅವರೊಬ್ಬರಿಗೇ ಸೇವೆಸಲ್ಲಿಸು,’ ಎಂದೂ ಪವಿತ್ರಗ್ರಂಥದಲ್ಲಿ ಬರೆದಿದೆ,” ಎಂದರು.


ಆದರೆ ಆತನು, “ನೀನು ನನಗೆ ಅಡ್ಡಬೀಳಬೇಡ, ಪ್ರವಾದಿಗಳಾದ ನಿನ್ನ ಸಹೋದರರಿಗೂ ಈ ಪುಸ್ತಕದಲ್ಲಿ ಬರೆದಿರುವ ವಾಕ್ಯಗಳನ್ನು ಕೈಗೊಂಡು ನಡೆಯುವವರಿಗೂ ನಿನಗೂ ನಾನು ಸಹಸೇವಕನು ಮಾತ್ರ. ಆದ್ದರಿಂದ ನೀನು ದೇವರನ್ನು ಆರಾಧಿಸು,” ಎಂದು ತಿಳಿಸಿದನು.


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ನಾಚಲಿ ವ್ಯರ್ಥವಿಗ್ರಹಗಳನು ಪೂಜಿಸಿ ಹಿಗ್ಗುವವರು I ಪ್ರಭುವಿಗೆ ಅಡ್ಡಬೀಳಲಿ ಆ ದೇವರುಗಳೆಲ್ಲರು II


ಆಗ ಬಯಸುವನು ರಾಜ ನಿನ್ನ ಲಾವಣ್ಯವನು I ಆತನ ಪಾದಕ್ಕೆರಗು, ಆತನೇ ನಿನಗೊಡೆಯನು II


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು