Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:13 - ಕನ್ನಡ ಸತ್ಯವೇದವು C.L. Bible (BSI)

13 ಸಭಾಪ್ರಮುಖರಲ್ಲಿ ಒಬ್ಬನು, “ಶ್ವೇತಾಂಬರರಾದ ಇವರೆಲ್ಲರೂ ಯಾರು? ಎಲ್ಲಿಂದ ಬಂದರು?” ಎಂದು ನನ್ನ‍ನ್ನು ಪ್ರಶ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು - ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು ಎಂದು ನನ್ನನ್ನು ಕೇಳಲು - ಅಯ್ಯಾ, ನೀನೇ ಬಲ್ಲೆ ಅಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಆಗ ಹಿರಿಯರಲ್ಲೊಬ್ಬನು, “ಬಿಳಿ ನಿಲುವಂಗಿಗಳನ್ನು ಧರಿಸಿಕೊಂಡಿರುವ ಈ ಜನರು ಯಾರು! ಅವರು ಎಲ್ಲಿಂದ ಬಂದವರು?” ಎಂದು ನನ್ನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆಗ ಹಿರಿಯರಲ್ಲೊಬ್ಬನು ನನ್ನನ್ನು, “ಈ ಬಿಳಿ ನಿಲುವಂಗಿಯನ್ನು ತೊಟ್ಟ ಇವರು ಯಾರು? ಎಲ್ಲಿಂದ ಬಂದವರು?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತ್ಯಾ ಜಾನ್ತ್ಯಾನಿತ್ಲ್ಯಾ ಎಕ್ಲ್ಯಾನ್ ಮಾಕಾ,“ಹಿ ಫಾಂಡ್ರೆ ಝಗೆ ನೆಸಲ್ಲಿ ಲೊಕಾ ಕೊನ್‍ ಹಿ, ತೆನಿ ಖೈತ್ನಾ ಯೆಲ್ಯಾತ್?” ಮನುನ್ ಮಾಕಾ ಇಚಾರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:13
11 ತಿಳಿವುಗಳ ಹೋಲಿಕೆ  

ಇದಾದ ಬಳಿಕ ನಾನು ಇನ್ನೊಂದು ದಿವ್ಯದರ್ಶನವನ್ನು ಕಂಡೆ; ಯಾರಿಂದಲೂ ಎಣಿಸಲಾಗದಷ್ಟು ಒಂದು ದೊಡ್ಡ ಜನಸಮೂಹವು ನೆರೆದಿತ್ತು. ಅವರು ಎಲ್ಲಾ ದೇಶ, ಭಾಷೆ, ಕುಲಗೋತ್ರಗಳಿಂದ ಬಂದವರಾಗಿದ್ದರು. ಶ್ವೇತಾಂಬರರಾಗಿ ಸಿಂಹಾಸನದ ಮತ್ತು ಯಜ್ಞದ ಕುರಿಮರಿಯಾದಾತನ ಸಾನ್ನಿಧ್ಯದಲ್ಲಿ ನಿಂತಿದ್ದರು. ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದಿದ್ದರು.


ಆ ಇಪ್ಪತ್ನಾಲ್ಕು ಸಭಾಪ್ರಮುಖರು ತಮ್ಮ ಕಿರೀಟಗಳನ್ನು ತೆಗೆದು ಬದಿಗಿಟ್ಟು, ಸರ್ವಕಾಲಕ್ಕೂ ಜೀವಿಸುವ ಹಾಗೂ ಸಿಂಹಾಸನದಲ್ಲಿ ಆಸೀನರಾಗಿದ್ದ ವ್ಯಕ್ತಿಯ ಪಾದಗಳಿಗೆ ಅಡ್ಡಬಿದ್ದು ಯುಗಯುಗಾಂತರಗಳಲ್ಲಿಯೂ ಜೀವಿಸುವವರನ್ನು ಆರಾಧಿಸುತ್ತಾ :


ಅನಂತರ ಅವರ ಸಿಂಹಾಸನದ, ನಾಲ್ಕು ಜೀವಿಗಳ ಹಾಗೂ ಸಭಾಪ್ರಮುಖರ ಸುತ್ತಲೂ ನಿಂತಿದ್ದ ಬಹುಮಂದಿ ದೇವದೂತರ ಸ್ವರವನ್ನು ಕೇಳಿಸಿಕೊಂಡೆ. ಅವರ ಸಂಖ್ಯೆ ಲಕ್ಷೋಪಲಕ್ಷವಾಗಿಯೂ ಕೋಟ್ಯಾನುಕೋಟಿಯಾಗಿಯೂ ಇತ್ತು.


ಆಗ ಸಭಾಪ್ರಮುಖರಲ್ಲಿ ಒಬ್ಬರು ನನಗೆ, “ದುಃಖಿಸಬೇಡ, ಇಗೋ, ಯೂದಕುಲದ ಸಿಂಹವೂ ದಾವೀದನ ವಂಶಜರೂ ಆದ ಒಬ್ಬರು ಜಯಗಳಿಸಿದ್ದಾರೆ. ಅವರು ಆ ಏಳು ಮುದ್ರೆಗಳನ್ನು ಒಡೆದು ಈ ಸುರುಳಿಯನ್ನು ಬಿಚ್ಚಬಲ್ಲರು", ಎಂದು ಹೇಳಿದರು.


ಈ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಪೀಠಗಳು ಇದ್ದವು. ಶ್ವೇತವಸ್ತ್ರಧಾರಿಗಳಾದ ಇಪ್ಪತ್ನಾಲ್ಕುಮಂದಿ ಸಭಾಪ್ರಮುಖರು ಆ ಪೀಠಗಳಲ್ಲಿ ಕುಳಿತಿದ್ದರು. ಅವರು ತಮ್ಮ ತಲೆಗಳ ಮೇಲೆ ಚಿನ್ನದ ಕಿರೀಟಗಳನ್ನು ಧರಿಸಿದ್ದರು.


ಆದುದರಿಂದ ದೇವಾಲಯದಲ್ಲಿ ಬೋಧಿಸುತ್ತಿದ್ದ ಯೇಸು ಸ್ವಾಮಿ ಆಗ ಗಟ್ಟಿಯಾಗಿ ಇಂತೆಂದರು: “ನಾನು ಯಾರೆಂದು, ಎಲ್ಲಿಂದ ಬಂದವನೆಂದು ನೀವು ಬಲ್ಲಿರೋ? ನಾನು ನನ್ನಷ್ಟಕ್ಕೇ ಬಂದವನಲ್ಲ: ನನ್ನನ್ನು ಕಳುಹಿಸಿದಾತನು ಸತ್ಯಸ್ವರೂಪಿ. ಆತನನ್ನು ನೀವು ಅರಿತಿಲ್ಲ.


ತರುವಾಯ ಆ ಸ್ತ್ರೀ ತನ್ನ ಗಂಡನ ಬಳಿಗೆ ಹೋಗಿ, “ಒಬ್ಬ ದೇವಪುರುಷ ನನ್ನ ಹತ್ತಿರ ಬಂದಿದ್ದನು. ಅವನ ರೂಪ ದೇವದೂತನ ರೂಪದಂತೆ ಘನಗಂಭೀರವಾಗಿತ್ತು. ‘ಎಲ್ಲಿಂದ ಬಂದಿರಿ?’ ಎಂದು ನಾನು ಅವನನ್ನು ಕೇಳಲಿಲ್ಲ; ಅವನೂ ತನ್ನ ಹೆಸರನ್ನು ತಿಳಿಸಲಿಲ್ಲ.


“ಸಾರಯಳ ದಾಸಿಯಾದ ಹಾಗರಳೇ, ಎಲ್ಲಿಂದ ಬಂದೆ? ಎಲ್ಲಿಗೆ ಹೋಗುತ್ತಿರುವೆ?” ಎಂದು ವಿಚಾರಿಸಿದನು. “ನನ್ನ ಯಜಮಾನಿ ಸಾರಯಳ ಬಳಿಯಿಂದ ಓಡಿಹೋಗುತ್ತಿದ್ದೇನೆ,” ಎಂದು ಉತ್ತರಕೊಟ್ಟಳು.


ಹತ್ತಿರದಲ್ಲೆ ನಿಂತಿದ್ದವರಲ್ಲಿ ಒಬ್ಬನ ಬಳಿಗೆ ಹೋಗಿ ಇವುಗಳ ಸರಿಯಾದ ಅರ್ಥ ಏನೆಂದು ವಿಚಾರಿಸಿದೆ.


ಇದನ್ನು ನೋಡಿ ಪೇತ್ರನು ಇಂತೆಂದನು: “ಇಸ್ರಯೇಲಿನ ಜನರೇ, ಈ ಘಟನೆಯಿಂದ ನೀವೇಕೆ ಆಶ್ಚರ್ಯಚಕಿತರಾಗಿದ್ದೀರಿ? ನಮ್ಮನ್ನೇಕೆ ಎವೆಯಿಕ್ಕದೆ ನೋಡುತ್ತಿದ್ದೀರಿ? ನಮ್ಮ ಸ್ವಂತ ಶಕ್ತಿಯಿಂದಾಗಲೀ ಭಕ್ತಿಯಿಂದಾಗಲೀ, ಈ ಮನುಷ್ಯನು ನಡೆಯುವಂತೆ ನಾವು ಮಾಡಿದೆವೆಂದು ಭಾವಿಸುತ್ತೀರೋ?


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು