Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 7:16 - ಕನ್ನಡ ಸತ್ಯವೇದವು C.L. Bible (BSI)

16 ಇನ್ನಿರದು ಅವರಿಗೆ ಹಸಿವು ಬಾಯಾರಿಕೆ ತಟ್ಟದವರನು ಬಿಸಿಲಿನ ತಾಪ, ಸೂರ್ಯನ ಕೋಪ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇನ್ನೆಂದಿಗೂ ಅವರಿಗೆ ಹಸಿವೆಯಾಗಲಿ, ಬಾಯಾರಿಕೆಯಾಗಲಿ ಆಗುವುದಿಲ್ಲ, ಅವರಿಗೆ ಸೂರ್ಯನ ಬಿಸಿಲಾದರೂ, ಯಾವ ಝಳವಾದರೂ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇನ್ನು ಮೇಲೆ ಅವರಿಗೆ ಹಸಿವೆ ಇಲ್ಲ, ಬಾಯಾರಿಕೆ ಇಲ್ಲ; ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರಿಗೆ ಮತ್ತೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಸೂರ್ಯನ ತಾಪವಾಗಲಿ ಇರುವುದಿಲ್ಲ. ಅವರನ್ನು ಯಾವ ತಾಪವೂ ಸುಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ‘ಇವರಿಗೆ ಇನ್ನೆಂದಿಗೂ ಹಸಿವೆಯಾಗಲಿ; ಬಾಯಾರಿಕೆಯಾಗಲಿ ಆಗುವುದಿಲ್ಲ. ಇದಲ್ಲದೆ ಸೂರ್ಯನ ಬಿಸಿಲಾದರೂ,’ ಯಾವ ಝಳವಾದರೂ ಇವರಿಗೆ ತಟ್ಟುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಅನಿ ಫಿಡೆ ಕನ್ನಾಬಿ ತೆಂಕಾ ಭುಕ್ ಹೊಂವ್ದಿತ್ ಸೊಸ್ ಹೊಂವ್ದಿತ್ ಲಾಗಿನಾ; ನಿಂಬಾರ್ ಹೊಂವ್ದಿತ್ ಅನಿ ಕಸ್ಲೊಬಿ ಝಳ್ ಹೊಂವ್ದಿತ್ ತೆಂಕಾ ಲಾಗಿನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 7:16
23 ತಿಳಿವುಗಳ ಹೋಲಿಕೆ  

ಇರದು ಅವರಿಗೆ ಹಸಿವು ಬಾಯಾರಿಕೆ ಬಡಿಯವು ಅವರಿಗೆ ಬಿಸಿಲುಬೇಗೆ. ನಡೆಸುವೆನು ನೀರುಕ್ಕುವ ಚಿಲುಮೆಗಳ ಬಳಿಗೆ ಕರುಣಾಕರನು ದಾರಿತೋರಿಸುವನು ಅವರಿಗೆ.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.”


ನ್ಯಾಯನೀತಿಗಾಗಿ ಹಸಿದು ಹಾತೊರೆಯುವವರು ಭಾಗ್ಯವಂತರು; ದೇವರು ಅವರಿಗೆ ತೃಪ್ತಿಯನ್ನೀಯುವರು.


ನಿನ್ನ ಬಾಧಿಸನು ಸೂರ್ಯನು ಹಗಲೊಳು I ನಿನ್ನ ಪೀಡಿಸನು ಚಂದ್ರನು ಇರುಳೊಳು II


ಈಗ ಹಸಿದಿರುವವರೇ, ನೀವು ಭಾಗ್ಯವಂತರು! ನಿಮಗೆ ಸಂತೃಪ್ತಿಯಾಗುವುದು. ಈಗ ಅತ್ತು ಗೋಳಾಡುವವರೇ, ನೀವು ಭಾಗ್ಯವಂತರು! ನೀವು ನಕ್ಕುನಲಿದಾಡುವಿರಿ!


ತೃಪ್ತಿಪಡಿಸಿರುವನಾತ ಹಸಿದವರನು ಮೃಷ್ಟಾನ್ನದಿ I ಹೊರದೂಡಿರುವನು ಸಿರಿವಂತರನು ಬರೀಗೈಯಲಿ II


ದೀನದರಿದ್ರರು ನೀರಿಗಾಗಿ ಪರದಾಡುವಾಗ ಬಾಯಾರಿ ಅವರ ನಾಲಿಗೆ ಒಣಗಿಹೋದಾಗ ಪ್ರಸನ್ನನಾಗುವೆ ಸರ್ವೇಶ್ವರನಾದ ನಾನೇ. ಇಸ್ರಯೇಲಿನ ದೇವರಾದ ನಾನವರನ್ನು ಕೈಬಿಡುವೆನೆ?


ದುರ್ಗವಾಗಿರುವೆ ನೀನು ದೀನದಲಿತರಿಗೆ, ಸುರಕ್ಷಿತ ಕೋಟೆಯಾಗಿರುವೆ ದಟ್ಟದರಿದ್ರರಿಗೆ, ನೆರಳಾಗಿರುವೆ ಬಿಸಿಲೊಳು ಬೆಂದವರಿಗೆ. ಕ್ರೂರಿಗಳ ಹೊಡೆತ ಚಳಿಗಾಲದ ಚಂಡಮಾರುತವಾಗಿರೆ, ಬಿರುಗಾಳಿಯ ಆ ಬಡಿತಕೆ ನೀನಾದೆ ಆಸರೆ.


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ಆದರೆ ಬಿಸಿಲೇರಿದಾಗ ಬಾಡಿದವು. ಬೇರು ಬಲವಾಗಿಲ್ಲದ ಕಾರಣ ಒಣಗಿಹೋದವು.


ದಿಟ್ಟಿಸಿ ನೋಡಬೇಡಿ ನನ್ನ ರೂಪವನ್ನೆ ನಾ ಕಪ್ಪಾಗಿರುವುದು ಸೂರ್ಯನ ತಾಪದಿಂದಲೆ. ಸಿಟ್ಟುಗೊಂಡರು ಸಹೋದರರು ನನ್ನ ಮೇಲೆ ಅಟ್ಟಿದರು ನನ್ನನು ತೋಟಕಾಯುವುದಕ್ಕೆ ಗಮನ ಕೊಡಲಾಗಲಿಲ್ಲ ನನ್ನ ತನು ತೋಟಕ್ಕೆ.


ಜೀವಂತ ದೇವನಿಗಾಗಿ ದಾಹದಿಂದಿದೆ ಎನ್ನ ಮನ I ನಾ ತೆರಳಿ ಪಡೆವುದೆಂತು ಆ ದೇವನ ಮುಖದರ್ಶನ? II


ಏಕೆಂದರೆ, ಧನಿಕರು ಹುಲ್ಲಿನ ಹೂವಿನಂತೆ ಗತಿಸಿಹೋಗುತ್ತಾರೆ. ಸೂರ್ಯನ ಸುಡುಬಿಸಿಲಿಗೆ ಹುಲ್ಲು ಒಣಗಿಹೋಗುತ್ತದೆ. ಅದರ ಹೂವು ಉದುರಿಹೋಗುವುದು, ಅದರ ಅಂದಚೆಂದವೂ ಹಾಳಾಗಿ ಹೋಗುತ್ತದೆ. ಅಂತೆಯೇ ಧನಿಕನು ತನ್ನ ವ್ಯವಹಾರಗಳಲ್ಲಿಯೇ ಕುಂದಿಹೋಗುತ್ತಾನೆ.


ದೇವರ ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿ ಬೀಳುತ್ತಾರೆ. ಇವರೇ ಕಲ್ಲುನೆಲದ ಮೇಲೆ ಬಿದ್ದ ಬೀಜಕ್ಕೆ ಸಮಾನರಾದವರು.


ಬಿಸಿಲೇರಿದಾಗ ಬಾಡಿದವು; ಆಳವಾಗಿ ಬೇರೂರಲು ಆಗದ ಕಾರಣ ಅವು ಒಣಗಿಹೋದವು.


ಆದರೆ ಅದು ತನ್ನಲ್ಲಿ ಬೇರೂರದ ಕಾರಣ ಕೊಂಚಕಾಲ ಮಾತ್ರ ಇದ್ದು, ಸಂದೇಶದ ನಿಮಿತ್ತ ಕಷ್ಟಕೋಟಲೆಗಳು ಬಂದೊದಗಿದಾಗ ಕೂಡಲೇ ಎಡವಿಬೀಳುತ್ತಾನೆ. ಇವನು ಕಲ್ಲು ನೆಲದ ಮೇಲೆ ಬಿದ್ದ ಬೀಜವನ್ನು ಹೋಲುತ್ತಾನೆ.


ಸೂರ್ಯನು ಏರುತ್ತಿರಲು, ಸರ್ವೇಶ್ವರನ ಚಿತ್ತಾನುಸಾರ ಬಿಸಿಯಾದ ಮೂಡಣ ಗಾಳಿ ಬೀಸಿತು. ಬಿಸಿಲಿನ ತಾಪದಿಂದ ಯೋನನು ಮೂರ್ಛೆಹೋಗುವಂತಾದನು; ಸಾವನ್ನು ಅಪೇಕ್ಷಿಸುತ್ತಾ: “ಬದುಕುವುದಕ್ಕಿಂತ ಸಾಯುವುದೇ ಲೇಸು,” ಎಂದು ಬೇಡಿಕೊಂಡನು.


ಪ್ರತಿಯೊಬ್ಬನೂ ಬಿರುಗಾಳಿಗೆ ತಡೆಯಂತೆ, ಬಿರುಮಳೆಗೆ ಬಿಡಾರದಂತೆ, ಮರುಭೂಮಿಯಲ್ಲಿ ಜಲಧಾರೆಯಂತೆ, ಬೆಂಗಾಡಿನಲ್ಲಿ ಭಾರಿಬಂಡೆಯ ನೆರಳಿನಂತೆ ಇರುವನು.


ಬೇಡುತಾ ನಿನ್ನ ಕಡೆಗೆ ಕೈಚಾಚಿದೆ I ನಿನಗಾಗಿ ನನ್ನಾತ್ಮ ತವಕಪಡುತ್ತಿದೆ II


ದೇವಾ, ನೀಯೆನ್ನ ದೇವ, ನಿನಗಾಗಿ ನಾ ಕಾದಿರುವೆ I ನಿರ್ಜಲ ಮರುಭೂಮಿಯಲಿ ನೀರಿಗಾಗಿ ಹಾತೊರೆವಂತೆ I ನಿನಗೋಸ್ಕರ ಎನ್ನ ತನು ಸೊರಗಿದೆ, ಮನ ಬಾಯಾರಿದೆ II


ನಿನ್ನನು ಕಾಯುತಿಹನು ಪ್ರಭುವೇ I ಬಲಗಡೆ ನೆರಳಂತಿಹನು ವಿಭುವೇ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು