ಪ್ರಕಟನೆ 7:3 - ಕನ್ನಡ ಸತ್ಯವೇದವು C.L. Bible (BSI)3 “ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ನಾವು ಮುದ್ರೆಯೊತ್ತುವ ತನಕ ಭೂಮಿಗಾಗಲಿ, ಸಮುದ್ರಕ್ಕಾಗಲಿ, ಇಲ್ಲವೇ ಮರಗಳಿಗಾಗಲಿ ಕೇಡನ್ನು ಮಾಡಬೇಡಿ,” ಎಂದು ಗಟ್ಟಿಯಾಗಿ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ನಾಶಮಾಡಬೇಡಿರಿ” ಎಂದು ಮಹಾಶಬ್ದದಿಂದ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ನಮ್ಮ ದೇವರ ಸೇವೆಮಾಡುವ ಜನರ ಹಣೆಯ ಮೇಲೆ ಮುದ್ರೆ ಒತ್ತುವ ತನಕ ಭೂಮಿಗಾಗಲಿ ಸಮುದ್ರಕ್ಕಾಗಲಿ ಮರಗಳಿಗಾಗಲಿ ತೊಂದರೆಯನ್ನು ಮಾಡಬೇಡಿ” ಎಂದು ಕೂಗಿ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನಾವು ನಮ್ಮ ದೇವರ ದಾಸರ ಹಣೆಗಳ ಮೇಲೆ ಮುದ್ರೆ ಒತ್ತುವ ತನಕ ಭೂಮಿಯನ್ನಾಗಲಿ, ಸಮುದ್ರವನ್ನಾಗಲಿ, ಮರಗಳನ್ನಾಗಲಿ ಹಾನಿಪಡಿಸಬೇಡ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್3 ದೆವಾಚ್ಯಾ ದುತಾನ್,“ಅಮಿ ಅಮ್ಚ್ಯಾ ದೆವಾಚ್ಯಾ ಸೆವಕಾಕ್ನಿ ಕಪಾಳಾ ವರ್ತಿ ಛಪ್ಪೊ ಮಾರುನ್ ವಳಕ್ ಕರಿ ಪತರ್ ಜಿಮ್ನಿಕ್ ಹೊಂವ್ದಿತ್, ಸಮುಂದರಾಕ್ ಹೊಂವ್ದಿತ್, ಝಾಡಾಕ್ನಿ ಹೊಂವ್ದಿತ್ ಕಾಯ್ಬಿ ವಾಯ್ಟ್ ಕರುನಕಾಶಿ.” ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |
ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.