ಪ್ರಕಟನೆ 7:4 - ಕನ್ನಡ ಸತ್ಯವೇದವು C.L. Bible (BSI)4 ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಇಸ್ರಯೇಲರು ಪ್ರತಿಯೊಂದು ಕುಲದಲ್ಲಿ ಮುದ್ರೆಯೊತ್ತಿಸಿಕೊಂಡವರು ಒಂದು ಲಕ್ಷದ ನಲವತ್ತ ನಾಲ್ಕು ಸಾವಿರ ಮಂದಿ. ಅವರ ಬಿಡಿ ಸಂಖ್ಯೆ ಹೀಗಿತ್ತು : ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ಅದನ್ನು ನಾನು ಕೇಳಿಸಿಕೊಂಡೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಮುದ್ರೆಯೊತ್ತಿಸಿಕೊಂಡವರ ಸಂಖ್ಯೆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮುದ್ರೆ ಒತ್ತಿಸಿಕೊಂಡವರ ಸಂಖ್ಯೆಯು ಪ್ರಸಿದ್ಧವಾದಾಗ ನಾನು ಕೇಳಿದೆನು. ಇಸ್ರಾಯೇಲ್ಯರ ಪ್ರತಿಯೊಂದು ಕುಲಕ್ಕೆ ಸೇರಿದವರು ಒತ್ತಿಸಿಕೊಂಡರು. ಅವರ ಸಂಖ್ಯೆ ಒಂದು ಲಕ್ಷ ನಾಲ್ವತ್ತುನಾಲ್ಕು ಸಾವಿರ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಂತರ, ಮುದ್ರೆ ಒತ್ತಿಸಿಕೊಂಡವರ ಸಂಖ್ಯೆ ನನಗೆ ಕೇಳಿಬಂತು. ಅವರ ಒಟ್ಟು ಸಂಖ್ಯೆ 1,44,000 ಮಂದಿ. ಅವರು ಇಸ್ರೇಲರ ಹನ್ನೆರಡು ಕುಲಗಳಿಗೆ ಸೇರಿದವರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಮುದ್ರೆ ಹೊಂದಿರುವವರ ಸಂಖ್ಯೆಯು ನನಗೆ ಕೇಳಿಸಿತು. ಇಸ್ರಾಯೇಲಿನ ಎಲ್ಲಾ ಕುಲಗಳಿಂದ ಮುದ್ರೆಹಾಕಿಸಿಕೊಂಡವರು 1,44,000 ಜನರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ಕಪಾಳಾ ವೈನಿ ದೆವಾಚೊ ಛಪ್ಪೊ ಮಾರುನ್ ವಳಕ್ ಕರಲ್ಲಿ ಲೊಕಾ ಎಕ್ ಲಾಕ್ ಚಾಳಿಸಾರ್ ಚಾರ್ ಹಜಾರ್ ಲೊಕಾ ಮನುನ್ ಮಾಕಾ ಸಾಂಗಟ್ಲ್ಯಾನಿ. ತಿ ಲೊಕಾ ಇಸ್ರಾಯೆಲಾಚ್ಯಾ ಬಾರಾ ಘರಾನ್ಯಾನಿತ್ಲಿ ಲೊಕಾ. ಅಧ್ಯಾಯವನ್ನು ನೋಡಿ |