Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:1 - ಕನ್ನಡ ಸತ್ಯವೇದವು C.L. Bible (BSI)

1 ಆ ಯಜ್ಞದ ಕುರಿಮರಿ ಏಳನೆಯ ಮುದ್ರೆಯನ್ನು ಒಡೆದಾಗ ಸ್ವರ್ಗದಲ್ಲಿ ಅರ್ಧ ಗಂಟೆಯವರೆಗೆ ಮೌನವುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೆ ಕಾಲ ಪರಲೋಕದಲ್ಲಿ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆತನು ಏಳನೆಯ ಮುದ್ರೆಯನ್ನು ಒಡೆದಾಗ ಸುಮಾರು ಅರ್ಧಗಂಟೇ ಹೊತ್ತಿನವರೆಗೂ ಪರಲೋಕವು ನಿಶ್ಶಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕುರಿಮರಿಯಾದಾತನು ಏಳನೆಯ ಮುದ್ರೆಯನ್ನು ಒಡೆದನು. ಆಗ ಪರಲೋಕದಲ್ಲಿ ಅರ್ಧ ಗಂಟೆಯ ಕಾಲ ನಿಶ್ಯಬ್ದವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕುರಿಮರಿ ಆಗಿರುವವರು ಏಳನೆಯ ಮುದ್ರೆಯನ್ನು ಒಡೆದಾಗ ಪರಲೋಕದಲ್ಲಿ ಸುಮಾರು ಅರ್ಧ ತಾಸಿನವರೆಗೂ ನಿಶ್ಶಬ್ದವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಬೊಕ್ಡಾನ್ ಸಾತ್ವೆಚೊ ಛಪ್ಪೊ ಫೊಡುನ್ ಉಗಡ್ತಾನಾ, ಸುಮಾರ್ ಅರ್ದೊ ತಾಸ್ ಸರ್ಗಾತ್ ಸಗ್ಳೆ ಶಾಂತ್ ಹೊಲ್ಲೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:1
14 ತಿಳಿವುಗಳ ಹೋಲಿಕೆ  

ಸರ್ವೇಶ್ವರ ತಮ್ಮ ಪರಿಶುದ್ಧಾಲಯದಿಂದ ಹೊರಬರುತ್ತಿದ್ದಾರೆ. ನರಮಾನವರೇ, ಅವರ ಶ್ರೀಸನ್ನಿಧಿಯಲ್ಲಿ ನೀವೆಲ್ಲರು ಮೌನತಾಳಿರಿ.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಇದನ್ನೂ ನಾನು ಕಂಡೆ: ಯಜ್ಞದ ಕುರಿಮರಿಯಾದಾತನು ಏಳು ಮುದ್ರೆಗಳಲ್ಲಿ ಒಂದನ್ನು ಒಡೆದನು. ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿ ಗುಡುಗಿನಂತಿದ್ದ ಸ್ವರದಿಂದ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಎನ್ನ ಮನಕ್ಕೆ ಶಾಂತಿ ದೇವನಿಂದಲೆ I ನನ್ನ ಜೀವೋದ್ಧಾರ ಆತನಿಂದಲೆ II


ರೂಪವೊಂದು ನನ್ನ ಕಣ್ಮುಂದೆ ನಿಂತಿತ್ತು ಆದರೂ ಅದೇನೆಂಬುದು ನನಗೆ ತಿಳಿಯದೆಹೋಯಿತು ಸೂಕ್ಷ್ಮವಾಣಿಯೊಂದು ನನಗೆ ಕೇಳಿಬಂತು:


ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.


ಯಜ್ಞದ ಕುರಿಮರಿಯಾದಾತ ಐದನೆಯ ಮುದ್ರೆಯನ್ನು ಒಡೆದನು. ದೇವರ ಸಂದೇಶವನ್ನು ಸಾರಿದ ಪ್ರಯುಕ್ತ ಮತ್ತು ತಮ್ಮ ಪ್ರಾಮಾಣಿಕ ಸಾಕ್ಷ್ಯದ ಪ್ರಯುಕ್ತ ಹತರಾದವರ ಆತ್ಮಗಳು ಬಲಿಪೀಠದ ಕೆಳಗೆ ಇರುವುದನ್ನು ನಾನು ಕಂಡೆ.


ನಾನು ಈ ದೃಶ್ಯವನ್ನು ಸಹ ಕಂಡೆ : ಸಿಂಹಾಸನದಲ್ಲಿ ಆಸೀನರಾಗಿರುವವರ ಬಲಗೈಯಲ್ಲಿ ಒಂದು ಸುರುಳಿ ಇತ್ತು. ಅದರ ಒಳಭಾಗದಲ್ಲೂ ಹೊರಭಾಗದಲ್ಲೂ ಬರೆಯಲಾಗಿತ್ತು. ಅದನ್ನು ಏಳು ಮುದ್ರೆಗಳಿಂದ ಮುದ್ರಿಸಲಾಗಿತ್ತು.


ಆ ಯಜ್ಞದ ಕುರಿಮರಿ ನಾಲ್ಕನೆಯ ಮುದ್ರೆಯನ್ನು ಒಡೆದಾಗ, ನಾಲ್ಕನೆಯ ಜೀವಿ, “ಇಲ್ಲಿ ಬಾ,” ಎಂದು ಕರೆಯುವುದನ್ನು ನಾನು ಕೇಳಿಸಿಕೊಂಡೆ.


ಆ ಯಜ್ಞದ ಕುರಿಮರಿ ಮೂರನೆಯ ಮುದ್ರೆಯನ್ನು ಒಡೆದಾಗ, ಮೂರನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ. ಆಗ ಕಪ್ಪು ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ತಕ್ಕಡಿ ಇತ್ತು.


ಅನಂತರ ಯಜ್ಞದ ಕುರಿಮರಿಯು ಎರಡನೆಯ ಮುದ್ರೆಯನ್ನು ಒಡೆದಾಗ, ಎರಡನೆಯ ಜೀವಿಯು, “ಇಲ್ಲಿ ಬಾ,” ಎಂದು ಕರೆಯುವುದನ್ನು ಕೇಳಿಸಿಕೊಂಡೆ.


ಪ್ರಭುವಿನ ಮುಂದೆ ಪ್ರಶಾಂತನಾಗಿರು, ಆತನಿಗೋಸ್ಕರ ಕಾದಿರು I ಸ್ವಾರ್ಥಿಗಳ, ಕುತಂತ್ರಿಗಳ ಏಳಿಗೆಯ ಕಂಡು ಉರಿಗೊಳ್ಳದಿರು II


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ಅವರು ಹೋಗಿ, ಸಮಾಧಿಯ ಕಲ್ಲಿಗೆ ಮುದ್ರೆಹಾಕಿ, ಕಾವಲಿರಿಸಿ, ಸಮಾಧಿಯನ್ನು ಸುಭದ್ರಪಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು