Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:2 - ಕನ್ನಡ ಸತ್ಯವೇದವು C.L. Bible (BSI)

2 ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ಮಂದಿ ದೇವದೂತರನ್ನು ಕಂಡೆನು; ಅವರಿಗೆ ಏಳು ತುತೂರಿಗಳು ಕೊಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದೇವರ ಎದುರಿನಲ್ಲಿ ಏಳು ದೇವದೂತರು ನಿಂತಿರುವುದನ್ನು ನಾನು ನೋಡಿದೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ತನ್ನಾ ಸಾತ್ ದೆವ್‍ದುತಾ ದೆವಾಚ್ಯಾ ಇದ್ರಾಕ್ ಇಬೆ ಹೊತ್ತೆ ಮಿಯಾ ಬಗಟ್ಲೊ, ತೆಂಕಾ ಸಾತ್ ಪಂವೆ ದಿವ್ನ್ ಹೊಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:2
18 ತಿಳಿವುಗಳ ಹೋಲಿಕೆ  

ಏಳನೆಯ ದೂತನು ತನ್ನ ತುತೂರಿಯನ್ನು ಊದಿದನು. ಆಗ ಸ್ವರ್ಗದಲ್ಲಿ ಮಹಾಶಬ್ದಗಳು ಉಂಟಾಗಿ ಹೀಗೆ ಮೊಳಗಿದವು : “ವಿಶ್ವವನ್ನಾಳುವ ಅಧಿಕಾರವು ನಮ್ಮ ಸರ್ವೇಶನದು ಹಾಗು ಅವರಿಂದ ಅಭಿಷಿಕ್ತನಾದ ಲೋಕೋದ್ಧಾರಕನದು. ಇನ್ನಾತನು ಆಳುವನು ಎಂದೆಂದಿಗೂ".


ಆಗ ದೇವದೂತನು, “ನಾನು ದೇವರ ಸನ್ನಿಧಿಯಲ್ಲಿ ಸೇವೆಮಾಡುವ ಗಬ್ರಿಯೇಲನು; ಈ ಶುಭಸಮಾಚಾರವನ್ನು ನಿನಗೆ ತಿಳಿಸುವುದಕ್ಕಾಗಿ ದೇವರ ಅಪ್ಪಣೆಯ ಪ್ರಕಾರ ಬಂದವನು.


ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.


“ಎಚ್ಚರಿಕೆ! ಈ ಚಿಕ್ಕವರಲ್ಲಿ ಯಾರನ್ನೂ ತೃಣೀಕರಿಸಬೇಡಿ.


ಅನಂತರ ದೇವಾಲಯದೊಳಗಿಂದ ಬಂದ ಮಹಾಶಬ್ದವನ್ನು ಕೇಳಿದೆ. ಅದು ಆ ಏಳು ದೇವದೂತರಿಗೆ, “ನೀವು ಹೋಗಿ ಏಳು ಪಾತ್ರೆಗಳಲ್ಲಿ ತುಂಬಿರುವ ದೇವರ ರೋಷವನ್ನು ಭೂಮಿಯ ಮೇಲೆ ಸುರಿಯಿರಿ,” ಎಂದು ಆಜ್ಞಾಪಿಸಿತು.


ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.


ಆಗ ದೂತನು, “ಈ ಸ್ತಂಭದಲ್ಲಿರುವ ಏಳು ದೀಪಗಳು ಭೂಲೋಕದ ಎಲ್ಲಾ ಭಾಗಗಳನ್ನು ವೀಕ್ಷಿಸುವ ಸರ್ವೇಶ್ವರಸ್ವಾಮಿಯ ಏಳು ಕಣ್ಣುಗಳನ್ನು ಸೂಚಿಸುತ್ತವೆ,” ಎಂದನು.


ತುತೂರಿಯ ಘೋಷಣೆಯೊಂದಿಗೆ ಆತನು ತನ್ನ ದೂತರನ್ನು ನಾಲ್ಕು ದಿಕ್ಕುಗಳಿಗೂ ಕಳುಹಿಸುವನು. ಅವರು ಹೋಗಿ ಆತನಿಂದ ಆಯ್ಕೆಯಾದ ಜನರನ್ನು ವಿಶ್ವದ ಅಷ್ಟದಿಕ್ಕುಗಳಿಂದ ಒಟ್ಟುಗೂಡಿಸುವರು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಆಜ್ಞಾಘೋಷವಾದಾಗ, ಪ್ರಧಾನ ದೂತನ ಧ್ವನಿಯು ಕೇಳಿಬಂದಾಗ, ದೇವರ ತುತೂರಿ ನಾದಗೈದಾಗ, ಪ್ರಭುವೇ ಸ್ವರ್ಗದಿಂದ ಇಳಿದುಬರುತ್ತಾರೆ. ಆಗ, ಕ್ರಿಸ್ತಸ್ಥರಾಗಿ ಮೃತರಾದವರು ಮೊದಲು ಎದ್ದುಬರುತ್ತಾರೆ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಅನಂತರ ಆಕಾಶಮಧ್ಯದಲ್ಲಿ ಒಂದು ಗರುಡ ಪಕ್ಷಿ ಹಾರಾಡುತ್ತಿರುವುದನ್ನು ನಾನು ಕಂಡೆ. ಅದರ ಕೂಗು ನನಗೆ ಕೇಳಿಸಿತು. ಅದು, “ಇನ್ನು ಉಳಿದ ಮೂವರು ದೇವದೂತರು ತುತೂರಿಯನ್ನು ಊದುವಾಗ ಭೂನಿವಾಸಿಗಳಿಗೆ ಕೇಡು, ಕೇಡು, ಕೇಡು,” ಎಂದು ಗಟ್ಟಿಯಾಗಿ ಕೂಗುತ್ತಿತ್ತು.


ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು