ಪ್ರಕಟನೆ 8:8 - ಕನ್ನಡ ಸತ್ಯವೇದವು C.L. Bible (BSI)8 ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಎರಡನೆಯ ದೇವದೂತನು ತನ್ನ ತುತ್ತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿರುವ ದೊಡ್ಡ ಬೆಟ್ಟವೋ ಎಂಬಂತಿರುವ ವಸ್ತುವನ್ನು ಸಮುದ್ರಕ್ಕೆ ಎಸೆಯಲಾಯಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಬೆಂಕಿಯಿಂದ ಉರಿಯುತ್ತಿದ್ದ ದೊಡ್ಡ ಬೆಟ್ಟವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರದೊಳಕ್ಕೆ ಎಸೆಯಲಾಯಿತು. ಆಗ ಸಮುದ್ರದ ಮೂರನೆಯ ಒಂದು ಭಾಗ ರಕ್ತವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಎರಡನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಉರಿಯುತ್ತಿರುವ ದೊಡ್ಡ ಬೆಟ್ಟದಂಥದ್ದು ಸಮುದ್ರದಲ್ಲಿ ಎಸೆಯಲಾಯಿತು. ಸಮುದ್ರದ ಮೂರರಲ್ಲಿ ಒಂದು ಭಾಗವು ರಕ್ತವಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಮಾನಾ ದೊನ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್, ತನ್ನಾ ಆಗಿಚ್ಯಾ ಮೊಟ್ಯಾ ಮಡ್ಡಿ ಸರ್ಕೆ ಕಾಯ್ಕಿ ಸಮುಂದರಾತ್ ಟಾಕುನ್ ಹೊಲೆ. ಸಮುಂದರಾಚೊ ತಿನಾತ್ಲೊ ಎಕ್ ಭಾಗ್ ರಗಾತ್ ಹೊವ್ನ್ ಬದಲ್ಲೆ, ಅಧ್ಯಾಯವನ್ನು ನೋಡಿ |