Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 8:9 - ಕನ್ನಡ ಸತ್ಯವೇದವು C.L. Bible (BSI)

9 ಸಮುದ್ರದಲ್ಲಿದ್ದ ಜಲಜಂತುಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋಯಿತು. ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗವು ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗವು ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಸಮುದ್ರಜೀವಿಗಳೊಳಗೆ ಮೂರರಲ್ಲಿ ಒಂದು ಭಾಗ ಸತ್ತುಹೋಯಿತು; ಹಡಗುಗಳೊಳಗೆ ಮೂರರಲ್ಲಿ ಒಂದು ಭಾಗ ನಾಶವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಸಮುದ್ರದಲ್ಲಿದ್ದ ಜೀವಿಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋದವು ಮತ್ತು ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಸಮುದ್ರದ ಜೀವಿಗಳಲ್ಲಿ ಮೂರರಲ್ಲಿ ಒಂದು ಭಾಗ ಸತ್ತವು ಮತ್ತು ಹಡಗುಗಳಲ್ಲಿ ಮೂರರಲ್ಲಿ ಒಂದು ಭಾಗ ನಾಶವಾದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಸಮುಂದರಾತ್ಲ್ಯಾ ಜನಾವರಾನಿತ್ಲೊ ತಿನಾತ್ಲೊ ಎಕ್ ಭಾಗ್ ಜನಾವರಾ ಮರುನ್ ಗೆಲಿ, ಅನಿ ಮೊಟ್ಯಾ ಢೊನಿಯಾನಿತ್ಲೊ ತಿನಾತ್ಲೊ ಎಕ್ ಬಾಗ್ ಢೊನಿಯಾ ನಾಸ್ ಹೊವ್ನ್ ಗೆಲ್ಯಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 8:9
13 ತಿಳಿವುಗಳ ಹೋಲಿಕೆ  

ಎರಡನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಸಮುದ್ರದ ಮೇಲೆ ಸುರಿದನು. ಆಗ ಸಮುದ್ರದ ನೀರು ಸತ್ತವನ ರಕ್ತದಂತೆ ಆಯಿತು. ಸಮುದ್ರದಲ್ಲಿದ್ದ ಜಲಜಂತುಗಳೆಲ್ಲಾ ಸತ್ತುಹೋದವು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


ಎಲ್ಲಾ ದೊಡ್ಡ ದೊಡ್ಡ ಹಡಗುಗಳಿಗೆ, ಎಲ್ಲಾ ಸುಂದರವಾದ ನೌಕೆಗಳಿಗೆ, ಆ ದಿನವು ತಪ್ಪದೆ ಬರುವುದು.


ಹತರಾಗುವರು ನಾಡಿನ ಮೂರರಲ್ಲೆರಡು ಭಾಗದವರು, ಮೂರನೆಯ ಭಾಗದವರು ಉಳಿಯುವರಲ್ಲಿ, ಸರ್ವೇಶ್ವರಸ್ವಾಮಿಯ ನುಡಿಯಿದು.


ತಾರ್ಷಿಷ್ ನಾಡಿನ ದೊಡ್ಡ ದೊಡ್ಡ ಹಡಗುಗಳನು I ಚಂಡಮಾರುತದಿಂದ ಪುಡಿಪುಡಿ ಮಾಡಿದೆ ನೀನು II


ಟೈರ್ ನಗರವನ್ನು ಕುರಿತ ದೈವೋಕ್ತಿ : “ಗೋಳಾಡಿರಿ ತಾರ್ಷಿಷಿನ ನಾವಿಕರೆಲ್ಲ, ಹಾಳಾಗಿವೆ ನಿಮ್ಮ ಬಂದರುಗಳೆಲ್ಲ; ಹಡಗುಗಳಿಗೆ ರೇವಿಲ್ಲ, ನೆಲೆಯಿಲ್ಲ, ಸೈಪ್ರಸ್ಸಿನಿಂದ ಬಂದ ನಾವಿಕರಿಂದ ಈ ಸುದ್ದಿ ನಿಮಗೆ ತಿಳಿಯುವುದು.”


ಅದರಲ್ಲಿದ್ದ ಮೀನುಗಳು ಸತ್ತುಹೋದವು. ನದಿ ಹೊಲಸಾಗಿ ನಾರುತ್ತಿತ್ತು. ಈಜಿಪ್ಟಿನವರು ಅದರ ನೀರನ್ನು ಕುಡಿಯಲಾರದೆ ಹೋದರು. ಈಜಿಪ್ಟ್ ದೇಶವೆಲ್ಲಾ ರಕ್ತಮಯ ಆಯಿತು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.


ಅದು ತನ್ನ ಬಾಲದಿಂದ ಮೂರನೆಯ ಒಂದು ಭಾಗದಷ್ಟು ನಕ್ಷತ್ರಗಳನ್ನು ಆಕಾಶದಿಂದ ಸೆಳೆದೆಳೆದು ಅವುಗಳನ್ನು ಭೂಮಿಗೆ ಎಸೆಯಿತು. ಮಗು ಹುಟ್ಟಿದ ಕೂಡಲೇ ಅದನ್ನು ನುಂಗಿಬಿಡಬೇಕೆಂದು ಘಟಸರ್ಪವು ಆ ತುಂಬು ಗರ್ಭಿಣಿಯ ಬಳಿಯಲ್ಲಿಯೇ ಕಾಯ್ದುಕೊಂಡಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು