Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:1 - ಕನ್ನಡ ಸತ್ಯವೇದವು C.L. Bible (BSI)

1 ಐದನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಆಕಾಶದಿಂದ ಭೂಮಿಗೆ ಬಿದ್ದಿದ್ದ ಒಂದು ನಕ್ಷತ್ರವನ್ನು ಕಂಡೆ. ಪಾತಾಳಕೂಪದ ಬೀಗದ ಕೈಯನ್ನು ಅವನಿಗೆ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಐದನೆಯ ದೇವದೂತನು ತುತ್ತೂರಿಯನ್ನೂದಿದಾಗ ಆಕಾಶದಿಂದ ಭೂಮಿಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದ ಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಐದನೆಯ ದೇವದೂತನು ತುತೂರಿಯನ್ನೂದಿದಾಗ ಆಕಾಶದಿಂದ ಭೂವಿುಗೆ ಬಿದ್ದ ಒಂದು ನಕ್ಷತ್ರವನ್ನು ಕಂಡೆನು. ಅವನಿಗೆ ಅಧೋಲೋಕಕ್ಕೆ ಹೋಗುವ ಕೂಪದ ಬೀಗದಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಿದನು. ಆಗ ಒಂದು ನಕ್ಷತ್ರವು ಆಕಾಶದಿಂದ ಭೂಮಿಯ ಮೇಲೆ ಬಿದ್ದದ್ದನ್ನು ನಾನು ನೋಡಿದೆನು. ಆ ನಕ್ಷತ್ರಕ್ಕೆ ತಳವಿಲ್ಲದ ಆಳವಾದ ಕೂಪಕ್ಕೆ ಹೋಗುವ ಬೀಗದ ಕೈ ಕೊಡಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಐದನೆಯ ದೇವದೂತನು ತನ್ನ ತುತೂರಿಯನ್ನು ಊದಲು; ಆಕಾಶದಿಂದ ಒಂದು ನಕ್ಷತ್ರವು ಭೂಮಿಗೆ ಬಿದ್ದದ್ದನ್ನು ಕಂಡೆನು. ಅದಕ್ಕೆ ಪಾತಾಳ ಸುರಂಗದ ಬೀಗದ ಕೈ ಕೊಡಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಪಾಚ್ವೆಚ್ಯಾ ದೆವಾಚ್ಯಾ ದುತಾನ್ ಅಪ್ನಾಚೊ ಪಂವೊ ವಾಜ್ವುಲ್ಯಾನ್. ತನ್ನಾ ಎಕ್ ಚಿಕ್ಕಿ ಮಳ್ಬಾ ವೈನಾ ಜಿಮ್ನಿ ವರ್ತಿ ಪಡ್ತಲೆ ಮಿಯಾ ಬಗಟ್ಲೊ, ತೆಚೆಕ್ಡೆ ಪಾತಾಳಾಚಿ ಚಾವಿ ದಿಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:1
20 ತಿಳಿವುಗಳ ಹೋಲಿಕೆ  

ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


ಅವನು ಆ ಕೂಪದ ಮುಚ್ಚಳವನ್ನು ತೆರೆದನು. ಅದರೊಳಗಿಂದ ದಟ್ಟಹೊಗೆ ದೊಡ್ಡ ಕುಲುಮೆ ಒಂದರಿಂದ ಬರುತ್ತಿರುವಂತೆ ಮೇಲೇರಿತು. ಇದರಿಂದಾಗಿ ಸೂರ್ಯನೂ ವಾಯುಮಂಡಲವೂ ಕಪ್ಪಾದವು.


“ಕ್ರಿಸ್ತಯೇಸುವನ್ನು ಸಾವಿನಿಂದ ಮೇಲಕ್ಕೆ ಕರೆತರಲು ಪಾತಾಳಕ್ಕೆ ಇಳಿದುಹೋಗುವವರು ಯಾರು?” ಎಂದಾಗಲೀ ನಿನ್ನ ಮನದಲ್ಲಿ ನೀನು ಪ್ರಶ್ನಿಸಿಕೊಳ್ಳಬೇಕಾಗಿಲ್ಲ.


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ತರುವಾಯ ದೇವದೂತನೊಬ್ಬನು ಸ್ವರ್ಗದಿಂದ ಇಳಿದುಬಂದುದನ್ನು ಕಂಡೆ. ಆತನ ಕೈಯಲ್ಲಿ ಪಾತಾಳದ ಬೀಗದ ಕೈ ಮತ್ತು ದೊಡ್ಡ ಸರಪಣಿ ಇದ್ದವು.


ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.


ಆ ಪಿಶಾಚಿಗಳು, “ಪಾತಾಳಕ್ಕೆ ಹೋಗಿಬೀಳಿರೆಂದು ನಮಗೆ ಆಜ್ಞೆಮಾಡಬೇಡಿ,” ಎಂದು ಯೇಸುವನ್ನು ಬೇಡಿಕೊಂಡವು.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.


ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ರಹಸ್ಯವಿಷ್ಟೆ: ಆ ಏಳು ನಕ್ಷತ್ರಗಳು ಏಳು ಸಭೆಗಳ ದೂತರನ್ನು ಸೂಚಿಸುತ್ತವೆ. ಆ ಏಳು ಚಿನ್ನದ ದೀಪಸ್ತಂಭಗಳು ಏಳು ಸಭೆಗಳನ್ನು ಸೂಚಿಸುತ್ತವೆ,” ಎಂದರು.


ಅದಕ್ಕೆ ಯೇಸು, “ಸೈತಾನನು ಆಕಾಶದಿಂದ ಸಿಡಿಲಿನಂತೆ ಬೀಳುವುದನ್ನು ಕಂಡೆನು.


ಮುಂಜಾನೆಯ ನಕ್ಷತ್ರವೆ, ಉದಯ ಕುಮಾರನೆ, ಆಗಸದಿಂದ ಹೇಗೆ ಬಿದ್ದೆ? ರಾಷ್ಟ್ರಗಳನ್ನು ಗೆದ್ದ ನೀನು, ನೆಲಕ್ಕೆ ಅದು ಹೇಗೆ ಉರುಳಿದೆ?


ಬಿರುಗಾಳಿಯಿಂದ ಅಂಜೂರ ಮರದ ಕಾಯಿಗಳು ಉದುರಿಬೀಳುವಂತೆ ನಕ್ಷತ್ರಗಳು ಆಕಾಶದಿಂದ ಭೂಮಿಗೆ ಬಿದ್ದವು.


ಇವರ ಸಾಕ್ಷ್ಯನೀಡಿಕೆ ಮುಗಿದ ನಂತರ ಪಾತಾಳಕೂಪದಿಂದ ಮೃಗವೊಂದು ಮೇಲೇರಿಬರುತ್ತದೆ; ಅದು ಇವರೊಡನೆ ಯುದ್ಧಮಾಡಿ, ಜಯಗಳಿಸಿ ಇವರನ್ನು ಕೊಂದುಹಾಕುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು