Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:14 - ಕನ್ನಡ ಸತ್ಯವೇದವು C.L. Bible (BSI)

14 ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ ಅದು, “ಯೂಫ್ರೆಟಿಸ್ ಮಹಾನದಿಯ ಬಳಿ ಕಟ್ಟಲಾಗಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಆಜ್ಞಾಪಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಅದು ತುತ್ತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ, “ಯೂಫ್ರೆಟಿಸ್ ಎಂಬ ಮಹಾ ನದಿಯ ಬಳಿಯಲ್ಲಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಅದು ತುತೂರಿಯನ್ನು ಹಿಡಿದಿದ್ದ ಆರನೆಯ ದೇವದೂತನಿಗೆ - ಯೂಫ್ರೇಟೀಸ್ ಎಂಬ ಮಹಾನದಿಯ ಬಳಿಯಲ್ಲಿ ಕಟ್ಟಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆ ಧ್ವನಿಯು ತುತೂರಿಯಿದ್ದ ಆರನೆಯ ದೇವದೂತನಿಗೆ, “ಯೂಫ್ರಟಿಸ್ ಎಂಬ ಮಹಾನದಿಯ ಬಳಿ ಕಟ್ಟಿಹಾಕಿರುವ ನಾಲ್ಕು ಮಂದಿ ದೇವದೂತರನ್ನು ಬಿಚ್ಚಿಬಿಡು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಅದು ತುತೂರಿಯನ್ನು ಹೊಂದಿರುವ ಆರನೆಯ ದೇವದೂತನಿಗೆ, “ಯೂಫ್ರೇಟೀಸ್ ಮಹಾನದಿಯ ಬಳಿ ಕಟ್ಟಿರುವ ನಾಲ್ಕು ದೇವದೂತರನ್ನು ಬಿಚ್ಚಿಬಿಡು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತ್ಯಾ ಧನಾನ್ ಪಂವೆ ಧರಲ್ಲ್ಯಾ ಸಾವೆಚ್ಯಾ ದೆವಾಚ್ಯಾ ದುತಾಕ್,“ಯುಪ್ರೆಟಿಸ್ ನ್ಹಯ್‍ಕ್ಡೆ ಭಾಂದಲ್ಲ್ಯಾ ಚಾರ್ ದೆವ್‍ದುತಾಕ್ನಿ ಸೊಡ್!” ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:14
12 ತಿಳಿವುಗಳ ಹೋಲಿಕೆ  

ಆರನೆಯ ದೇವದೂತನು ತನ್ನ ಪಾತ್ರೆಯಲ್ಲಿದ್ದುದನ್ನು ಯೂಫ್ರೆಟಿಸ್ ಎಂಬ ಮಹಾನದಿಯ ಮೇಲೆ ಸುರಿದನು. ಕೂಡಲೇ ಅದರ ನೀರು ಬತ್ತಿಹೋಯಿತು. ಇದರ ಪರಿಣಾಮವಾಗಿ ಪೂರ್ವದೇಶದ ರಾಜರು ಬರುವುದಕ್ಕೆ ಮಾರ್ಗವಾಯಿತು.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ಈ ಸುರುಳಿಯನ್ನು ಓದಿ ಮುಗಿಸಿದ ಮೇಲೆ ಇದಕ್ಕೆ ಕಲ್ಲುಕಟ್ಟಿ ಯೂಫ್ರೆಟಿಸ್ ನದಿಯ ಮಧ್ಯೆ ಎಸೆದುಬಿಡು.


ಬಳಿಕ ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ದಾವೀದನು ಪರಾಭವಗೊಳಿಸಿದನು.


ಮೂರನೇ ನದಿಯ ಹೆಸರು ಟೈಗ್ರಿಸ್. ಇದು ಅಸ್ಸೀರಿಯಾ ದೇಶದ ಪೂರ್ವಕ್ಕೆ ಹರಿಯುತ್ತದೆ. ನಾಲ್ಕನೆಯದು ಯೂಫ್ರೆಟಿಸ್ ನದಿ.


ಏಳು ತುತೂರಿಗಳನ್ನು ಹಿಡಿದಿದ್ದ ಏಳುಮಂದಿ ದೇವದೂತರು ತಮ್ಮ ತಮ್ಮ ತುತೂರಿಗಳನ್ನು ಊದಲು ಸಿದ್ಧರಾದರು.


ಇದಾದ ಬಳಿಕ ನಾನು ಮತ್ತೊಂದು ದಿವ್ಯದರ್ಶನವನ್ನು ಕಂಡೆ; ನಾಲ್ಕುಮಂದಿ ದೇವದೂತರು ಭೂಮಿಯ ನಾಲ್ಕು ದಿಕ್ಕುಗಳಲ್ಲಿ ನಿಂತಿದ್ದರು. ಭೂಮಿಯ ಮೇಲಾಗಲಿ, ಸಮುದ್ರದ ಮೇಲಾಗಲಿ, ಮರಗಳ ಮೇಲಾಗಲಿ ಗಾಳಿಬೀಸದಂತೆ ಭೂಮಿಯ ನಾಲ್ಕು ದಿಕ್ಕಿನ ಗಾಳಿಯನ್ನು ಅವರು ತಡೆಹಿಡಿದಿದ್ದರು.


ಬಳಿಕ ನಾನು, ದೇವರ ಸಾನ್ನಿಧ್ಯದಲ್ಲಿ ನಿಂತಿದ್ದ ಏಳು ದೇವದೂತರನ್ನು ಕಂಡೆ. ಅವರಿಗೆ ಏಳು ತುತೂರಿಗಳನ್ನು ಕೊಡಲಾಗಿತ್ತು.


ಸರ್ವೇಶ್ವರ ಅಂದೇ ಅಬ್ರಾಮನ ಸಂಗಡ ಒಂದು ಒಡಂಬಡಿಕೆಯನ್ನು ಮಾಡಿಕೊಂಡರು: ”ಈಜಿಪ್ಟಿನ ನದಿಯಿಂದ ಯೂಫ್ರೆಟಿಸ್ ಮಹಾನದಿಯವರೆಗೆ, ಕೊಡುವೆನು ಈ ನಾಡೆಲ್ಲವನ್ನು ನಿನ್ನ ಸಂತತಿಯವರಿಗೆ,”


ಈಗ ಹಿಂದಿರುಗಿ ಅಮೋರಿಯರು ಇರುವ ಮಲೆನಾಡಿಗೂ ಅದರ ಸುತ್ತಮುತ್ತಲಿನ ಪ್ರದೇಶಕ್ಕೂ ಪ್ರಯಾಣಮಾಡಿರಿ. ಅಲ್ಲಿನ ಕಣಿವೆ, ತಪ್ಪಲು, ಇಳಕಲು ಪ್ರದೇಶಗಳಿಗೂ ದಕ್ಷಿಣಸೀಮೆ, ಸಮುದ್ರತೀರ ಎಂಬ ನಾಡುಗಳಿಗೂ ಕಾನಾನ್ಯರ ನಾಡು, ಲೆಬನೋನ್ ಪರ್ವತ ಮತ್ತು ಯೂಫ್ರೆಟಿಸ್ ಮಹಾನದಿಯವರೆಗೆ ವಿಸ್ತರಿಸಿಕೊಂಡಿರುವ ಪ್ರದೇಶಗಳಿಗೂ ತೆರಳಿರಿ.


ಬೆಂಗಾಡು ಹಾಗೂ ಲೆಬನೋನ್ ಪರ್ವತದಿಂದ ಯೂಫ್ರೆಟಿಸ್ ಮಹಾನದಿಯ ವರೆಗಿರುವ ಹಿತ್ತಿಯರ ನಾಡೆಲ್ಲ ನಿಮ್ಮದಾಗುವುದು. ನಿಮ್ಮ ಸೀಮೆ ಪಶ್ಚಿಮ ದಿಕ್ಕಿನ ಮಹಾಸಾಗರದ ವರೆಗೆ ವಿಸ್ತರಿಸಿಕೊಳ್ಳುವುದು.


ಆಗ ಪೂರ್ವದಿಕ್ಕಿನಿಂದ ಮತ್ತೊಬ್ಬ ದೇವದೂತನು ಏರಿಬಂದನು. ಅವನು ಜೀವಸ್ವರೂಪಿಯಾದ ದೇವರ ಮುದ್ರೆಯನ್ನು ಕೈಯಲ್ಲಿ ಹಿಡಿದಿದ್ದನು. ಅವನು ಭೂಮಿಗೂ ಸಮುದ್ರಕ್ಕೂ ಕೇಡನ್ನು ಮಾಡುವ ಅಧಿಕಾರವನ್ನು ಪಡೆದಿದ್ದ ನಾಲ್ಕು ಮಂದಿ ದೇವದೂತರಿಗೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು