Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:18 - ಕನ್ನಡ ಸತ್ಯವೇದವು C.L. Bible (BSI)

18 ಅವುಗಳ ಬಾಯಿಂದ ಬರುತ್ತಿದ್ದ ಇವುಗಳು ಮೂರು ವಿಪತ್ತುಗಳಾಗಿದ್ದವು. ಇವುಗಳಿಂದ ಮಾನವಜನಾಂಗದ ಮೂರನೆಯ ಒಂದು ಭಾಗ ಹತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಅವುಗಳ ಬಾಯಿಂದ ಹೊರಟ ಆ ಬೆಂಕಿ, ಹೊಗೆ, ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರೊಳಗೆ ಮೂರರಲ್ಲಿ ಒಂದು ಭಾಗವು ಹತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಅವುಗಳ ಬಾಯಿಂದ ಬೆಂಕಿ ಹೊಗೆ ಗಂಧಕ ಇವುಗಳು ಹೊರಡುತ್ತಿದ್ದವು. ಅವುಗಳ ಬಾಯಿಂದ ಹೊರಟ ಆ ಬೆಂಕಿ ಹೊಗೆ ಗಂಧಕ ಎಂಬ ಮೂರು ಉಪದ್ರವಗಳಿಂದ ಮನುಷ್ಯರಲ್ಲಿ ಮೂರನೆಯ ಭಾಗವು ಹತವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಭೂಮಿಯ ಮೇಲಿನ ಜನರಲ್ಲಿ ಮೂರನೆಯ ಒಂದು ಭಾಗವು ಕುದುರೆಗಳ ಬಾಯಿಂದ ಹೊರಬಂದ ಬೆಂಕಿ, ಹೊಗೆ ಮತ್ತು ಗಂಧಕಗಳ ಉಪದ್ರವಗಳಿಂದ ಕೊಲ್ಲಲ್ಪಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವುಗಳ ಬಾಯೊಳಗಿಂದ ಬಂದ ಬೆಂಕಿ ಹೊಗೆ ಮತ್ತು ಗಂಧಕಗಳೆಂಬ ಮೂರು ಉಪದ್ರವಗಳಿಂದ ಮಾನವಕುಲದ ಮೂರರಲ್ಲೊಂದು ಭಾಗದ ಜನರು ಹತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ತೆಂಚ್ಯಾ ತೊಂಡಾನಿತ್ನಾ ಭಾಯ್ರ್ ಯೆತಲ್ಯಾ ಆಗಿನ್, ಡುಕ್ಟಾನ್, ಅನಿ ಗಂಧಕಾನ್ ಮಾನ್ಸಾನಿತ್ಲ್ಯಾ ಹ್ಯಾ ತಿನಾತ್ಲ್ಯಾ ಎಕ್ ಭಾಗಾ ಪಿಡಾ ಎವ್ಡ್ಯಾ ಮಾನ್ಸಾಕ್ನಿ ಜಿವಾನಿ ಮಾರುನ್ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:18
9 ತಿಳಿವುಗಳ ಹೋಲಿಕೆ  

ಹೀಗೆ ಕುದುರೆಗಳನ್ನೂ ಅವುಗಳ ಮೇಲೆ ಕುಳಿತ ಸವಾರರನ್ನೂ ನಾನು ದರ್ಶನದಲ್ಲಿ ಕಂಡೆ. ಆ ಸವಾರರು ಬೆಂಕಿಯ, ನೀಲಮಣಿಯ ಹಾಗೂ ಗಂಧಕ ವರ್ಣಗಳ ಕವಚಗಳನ್ನು ಧರಿಸಿದ್ದರು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತೆ ಇದ್ದವು. ಅವುಗಳ ಬಾಯಿಂದ ಬೆಂಕಿ, ಹೊಗೆ ಮತ್ತು ಗಂಧಕ ಹೊರಬರುತ್ತಿದ್ದವು.


ಮಾನವ ಜನಾಂಗದ ಮೂರನೆಯ ಒಂದು ಭಾಗವನ್ನು ಸಂಹರಿಸುವುದಕ್ಕಾಗಿ ಗಂಟೆ, ದಿನ, ತಿಂಗಳು, ವರ್ಷ ಎಲ್ಲವನ್ನೂ ನಿಗದಿಮಾಡಲಾಗಿತ್ತು. ಅದಕ್ಕೆ ಸಿದ್ಧರಾಗಿ ನಿಂತಿದ್ದ ಆ ನಾಲ್ಕು ದೇವದೂತರನ್ನು ಬಂಧಮುಕ್ತರನ್ನಾಗಿ ಮಾಡಲಾಯಿತು.


ಮೊದಲನೆಯ ದೇವದೂತನು ತುತೂರಿಯನ್ನು ಊದಿದನು. ಭೂಮಿಯ ಮೇಲೆ ರಕ್ತಮಿಶ್ರಿತವಾದ ಆಲಿಕಲ್ಲಿನ ಮತ್ತು ಬೆಂಕಿಯ ಸುರಿಮಳೆಯಾಯಿತು. ಪರಿಣಾಮವಾಗಿ, ಭೂಮಿಯ ಮೂರನೆಯ ಒಂದು ಭಾಗ ಸುಟ್ಟುಹೋಯಿತು. ಮರಗಳಲ್ಲಿ ಮೂರನೆಯ ಒಂದು ಭಾಗ ಭಸ್ಮವಾಯಿತು. ಹಸಿರು ಹುಲ್ಲೆಲ್ಲಾ ಉರಿದುಹೋಯಿತು.


ಎರಡನೆಯ ದೇವದೂತನು ತುತೂರಿಯನ್ನು ಊದಿದನು. ಬೆಂಕಿ ಹತ್ತಿ ಉರಿಯುತ್ತಿರುವ ಪರ್ವತವೋ ಎಂಬಂತಿದ್ದ ವಸ್ತುವೊಂದನ್ನು ಸಮುದ್ರಕ್ಕೆ ಎಸೆಯಲಾಯಿತು. ಸಮುದ್ರದಲ್ಲಿ ಮೂರನೆಯ ಒಂದು ಭಾಗ ರಕ್ತವಾಗಿ ಮಾರ್ಪಟ್ಟಿತು.


ಸಮುದ್ರದಲ್ಲಿದ್ದ ಜಲಜಂತುಗಳಲ್ಲಿ ಮೂರನೆಯ ಒಂದು ಭಾಗ ಸತ್ತುಹೋಯಿತು. ಹಡಗುಗಳಲ್ಲಿ ಮೂರನೆಯ ಒಂದು ಭಾಗ ನಾಶವಾಯಿತು.


ಮೂರನೆಯ ದೇವದೂತನು ತುತೂರಿಯನ್ನು ಊದಿದನು. ಪಂಜಿನಂತೆ ಉರಿಯುತ್ತಿದ್ದ ದೊಡ್ಡ ನಕ್ಷತ್ರವೊಂದು ಆಕಾಶದಿಂದ ಕೆಳಕ್ಕೆ ಬಿತ್ತು. ಅದು ನದಿಗಳಲ್ಲಿ ಮೂರನೆಯ ಒಂದು ಭಾಗದ ಮೇಲೂ ನೀರಿನ ಒರತೆಗಳ ಮೇಲೂ ಬಿತ್ತು.


ಆ ನಕ್ಷತ್ರದ ಹೆಸರು ‘ವಿಷಕನ್ಯೆ'. ನೀರಿನಲ್ಲಿ ಮೂರನೆಯ ಒಂದು ಭಾಗ ವಿಷವಾಯಿತು; ಇದರಿಂದಾಗಿ ಅನೇಕರು ನೀರನ್ನು ಕುಡಿದು ಸತ್ತರು.


ನಾಲ್ಕನೆಯ ದೇವದೂತನು ತುತೂರಿಯನ್ನು ಊದಿದನು. ಸೂರ್ಯಚಂದ್ರ ನಕ್ಷತ್ರಗಳಲ್ಲಿ ಮೂರನೆಯ ಒಂದು ಭಾಗಕ್ಕೆ ಧಕ್ಕೆ ಉಂಟಾಯಿತು. ಅವುಗಳ ಮೂರನೆಯ ಒಂದು ಭಾಗ ಕಾಂತಿಹೀನವಾಯಿತು. ಇದರಿಂದಾಗಿ ಹಗಲಿನಲ್ಲೂ ರಾತ್ರಿಯಲ್ಲೂ ಮೂರನೆಯ ಒಂದು ಭಾಗದಷ್ಟು ಬೆಳಕು ಕಡಿಮೆಯಾಯಿತು.


ಕುದುರೆಗಳ ಶಕ್ತಿಯು ಅವುಗಳ ಬಾಯಲ್ಲೂ ಬಾಲಗಳಲ್ಲೂ ಅಡಗಿತ್ತು. ಆ ಬಾಲಗಳು ಸರ್ಪಗಳ ತಲೆಯಂತೆ ಇದ್ದವು ಮತ್ತು ಗಾಯಗೊಳಿಸುವ ಶಕ್ತಿ ಅವಕ್ಕಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು