20 ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ. ಅವರು ಭೂತ, ಪ್ರೇತಗಳ ಪೂಜೆಯನ್ನೂ ಬಂಗಾರ, ಬೆಳ್ಳಿ, ತಾಮ್ರ, ಕಲ್ಲು, ಮರ ಮೊದಲಾದವುಗಳಿಂದ ಮಾಡಲ್ಪಟ್ಟ ನೋಡಲಾರದೆ, ಕೇಳಲಾರದೆ, ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಉಪದ್ರವಗಳಿಂದ ಸಾಯದೆ ಉಳಿದ ಜನರು ತಾವೇ ಮಾಡಿಕೊಂಡ ವಿಗ್ರಹಗಳನ್ನು ಬಿಟ್ಟು ದೇವರ ಕಡೆಗೆ ತಿರುಗಲಿಲ್ಲ; ಅವರು ದೆವ್ವಗಳ ಪೂಜೆಯನ್ನೂ ಬಂಗಾರ ಬೆಳ್ಳಿ ತಾಮ್ರ ಕಲ್ಲು ಮರ ಇವೇ ಮುಂತಾದವುಗಳಿಂದ ಮಾಡಲ್ಪಟ್ಟು ನೋಡಲಾರದೆ ಕೇಳಲಾರದೆ ನಡೆಯಲಾರದೆ ಇರುವ ವಿಗ್ರಹಗಳ ಪೂಜೆಯನ್ನೂ ಬಿಡಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಜನರು ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳಲಿಲ್ಲ. ತಮ್ಮ ಸ್ವಂತ ಕೈಗಳಿಂದ ನಿರ್ಮಿಸಿದ ವಿಗ್ರಹಗಳನ್ನು ತೊರೆದುಬಿಡಲಿಲ್ಲ. ಅವರು ದೆವ್ವಗಳ ಆರಾಧನೆಯನ್ನು ನಿಲ್ಲಿಸಲಿಲ್ಲ. ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಿಂದ ಮಾಡಲ್ಪಟ್ಟು, ನಡೆಯಲಾರದ, ನೋಡಲಾರದ ಮತ್ತು ಕೇಳಲಾರದ ವಿಗ್ರಹಗಳನ್ನು ಪೂಜಿಸುವುದನ್ನು ಅವರು ನಿಲ್ಲಿಸಲಿಲ್ಲ.
20 ಈ ಉಪದ್ರವಗಳಿಂದ ಸಾಯದೆ ಉಳಿದ ಮನುಷ್ಯರು ಇನ್ನೂ ತಮ್ಮ ದುಷ್ಟಕೃತ್ಯಗಳನ್ನು ಬಿಟ್ಟು ಪಶ್ಚಾತ್ತಾಪ ಪಡಲಿಲ್ಲ. ಅವರು ದೆವ್ವಗಳನ್ನೂ, ನೋಡಲು, ಕೇಳಲು, ನಡೆಯಲು ಆಗದ ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳ ವಿಗ್ರಹಗಳನ್ನು ಆರಾಧಿಸುವುದನ್ನೂ ನಿಲ್ಲಿಸಲಿಲ್ಲ.
ಪರಲೋಕದ ಒಡೆಯನಿಗೆ ವಿರುದ್ಧವಾಗಿ ನಿಮ್ಮನ್ನೆ ಹೆಚ್ಚಿಸಿಕೊಂಡಿದ್ದೀರಿ. ದೇವಾಲಯದಿಂದ ಪವಿತ್ರ ಪೂಜಾಪಾತ್ರೆಗಳನ್ನು ಇಲ್ಲಿಗೆ ತಂದಿದ್ದೀರಿ. ನೀವೂ ನಿಮ್ಮ ರಾಜ್ಯದ ಪ್ರಮುಖರೂ ಪತ್ನಿ-ಉಪಪತ್ನಿಯರೂ ಅವುಗಳಲ್ಲಿ ದ್ರಾಕ್ಷಾರಸವನ್ನೂ ಕುಡಿದಿದ್ದೀರಿ. ಬುದ್ಧಿ, ಕಣ್ಣು, ಕಿವಿ ಇಲ್ಲದೆ ಬೆಳ್ಳಿಬಂಗಾರಗಳ, ಕಂಚುಕಬ್ಬಿಣಗಳ, ಮರ ಕಲ್ಲುಗಳ ದೇವರುಗಳನ್ನೂ ಆರಾಧಿಸಿದ್ದೀರಿ. ನಿಮ್ಮ ಪ್ರಾಣ ಯಾರ ಕೈಯಲ್ಲಿದೆಯೋ ನಿಮ್ಮ ಸ್ಥಿತಿಗತಿಗಳು ಯಾರ ಅಧೀನದಲ್ಲಿದೆಯೋ ಆ ದೇವರನ್ನು ಮಾತ್ರ ಗೌರವಿಸದೆ ಇದ್ದೀರಿ.
ನಾನು ಹೋದ ಮೇಲೆ, ನೀವು ದ್ರೋಹಿಗಳಾಗಿ, ನಾನು ಬೋಧಿಸಿದ ಮಾರ್ಗವನ್ನು ತಪ್ಪಿಹೋಗುವಿರಿ; ಅನಂತರ ನೀವು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡೆಸಿ, ದುರಾಚಾರಿಗಳಾಗುವಿರಿ; ಅವರನ್ನು ಕೋಪಗೊಳಿಸುವುದರಿಂದ ನಿಮಗೆ ಆಪತ್ತುಗಳು ಬಂದೊದಗುವುದೆಂದು ನಾನು ಬಲ್ಲೆ,” ಎಂದು ಹೇಳಿದನು.
ಪೌಲ ಎಂಬವನು ಏನು ಮಾಡುತ್ತಿರುವನೆಂದು ನೀವು ನೋಡಿದ್ದೀರಿ ಹಾಗೂ ಕೇಳಿದ್ದೀರಿ; ಕೈಯಿಂದ ಮಾಡಿದ ಆಕೃತಿಗಳು ದೇವರೇ ಅಲ್ಲವೆಂದು ಇಲ್ಲಿ ಎಫೆಸದಲ್ಲೂ ಹೆಚ್ಚುಕಡಿಮೆ ಇಡೀ ಏಷ್ಯದಲ್ಲೂ ಪ್ರಚಾರಮಾಡುತ್ತಿದ್ದಾನೆ; ಮಾತ್ರವಲ್ಲ, ಅನೇಕ ಜನರನ್ನು ಮನವೊಲಿಸಿ ಮಾರ್ಪಡಿಸಿಬಿಟ್ಟಿದ್ದಾನೆ.
ನನ್ನ ಸ್ವಜನರು ನನ್ನನ್ನೆ ತೊರೆದುಬಿಟ್ಟು, ಅನ್ಯದೇವತೆಗಳಿಗೆ ಬಲಿಯರ್ಪಿಸಿ, ತಮ್ಮ ಕೈಯಿಂದ ನಿರ್ಮಿಸಿದ ಮೂರ್ತಿಗಳಿಗೆ ಆರಾಧನೆ ಮಾಡುತ್ತಿದ್ದಾರೆ; ಇಂಥ ಅಧರ್ಮಕ್ಕೆಲ್ಲ ನಾನು ಅವರಿಗೆ ವಿಧಿಸುವ ದಂಡನೆಗಳನ್ನು ತಿಳಿಸುವೆನು, ಕೇಳು :
ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.
ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.
ಸ್ನಾನಿಕ ಯೊವಾನ್ನನು ಧರ್ಮಮಾರ್ಗವನ್ನು ತೋರಿಸಲು ಬಂದನು. ನೀವು ಆತನನ್ನು ನಂಬಲಿಲ್ಲ. ಆದರೆ ಸುಂಕದವರೂ ವೇಶ್ಯೆಯರೂ ಆತನನ್ನು ನಂಬಿದರು. ಇದನ್ನು ಕಂಡ ಮೇಲೂ ನೀವು ಪಶ್ಚಾತ್ತಾಪಪಡಲಿಲ್ಲ, ಯೊವಾನ್ನನನ್ನು ನಂಬಲೂ ಇಲ್ಲ.
ಪ್ರವಾಸಿಗಳಾಗಿ ನೀವು ಬಂದಿರುವ ಈಜಿಪ್ಟಿನಲ್ಲಿ ಅನ್ಯದೇವತೆಗಳಿಗೆ ಧೂಪಾರತಿ ಎತ್ತುವ ದುಷ್ಕೃತ್ಯವನ್ನು ನಡೆಸುತ್ತಾ ನನ್ನನ್ನು ಕೆಣಕುತ್ತಿದ್ದೀರಿ. ಆದ್ದರಿಂದ ನೀವೂ ನಿರ್ಮೂಲರಾಗಿ ಎಲ್ಲ ಭೂರಾಜ್ಯಗಳ ಶಾಪ, ನಿಂದೆ, ದೂಷಣೆಗಳಿಗೆ ಗುರಿಯಾಗುವಿರಿ.
ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.
ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿಯೆತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ. ಆದ್ದರಿಂದ ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯಹತ್ತಿ ಆರಿಹೋಗುವುದೇ ಇಲ್ಲ,’ ಎನ್ನುತ್ತಾರೆ ಸರ್ವೇಶ್ವರ.
ಸ್ವರ್ಗದಲ್ಲಿ ಮತ್ತೊಂದು ಚಿಹ್ನೆಯನ್ನು ಕಂಡೆ. ಅದು ಅತ್ಯಾಶ್ಚರ್ಯಕರವಾಗಿ ಇತ್ತು. ಏಳು ದೇವದೂತರ ಕೈಯಲ್ಲಿ ಏಳು ವಿಪತ್ತುಗಳು ಇದ್ದವು. ಇವು ಅಂತಿಮವಾಗಿ ಬಂದೆರಗುವ ವಿಪತ್ತುಗಳು. ಏಕೆಂದರೆ, ಅವುಗಳೊಡನೆ ದೇವರ ಕೋಪಾಗ್ನಿ ಪೂರ್ತಿಯಾಗಿ ಬಂದೆರಗುವುದು.