Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 9:21 - ಕನ್ನಡ ಸತ್ಯವೇದವು C.L. Bible (BSI)

21 ಇಷ್ಟೇ ಅಲ್ಲದೆ ತಮ್ಮ ಕೊಲೆಗಡುಕತನ, ಮಾಟಮಂತ್ರ, ಹಾದರ ಮತ್ತು ಕಳ್ಳತನಗಳನ್ನು ತೊರೆದು ಮನಸ್ಸಾಂತರಗೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಇದಲ್ಲದೆ ತಾವು ನಡೆಸುತ್ತಿದ್ದ ಕೊಲೆ, ಮಾಟ, ಜಾರತ್ವ, ಕಳ್ಳತನ ಇವುಗಳೊಳಗೆ ಒಂದನ್ನೂ ಬಿಡದೆ ಮಾನಸಾಂತರಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಇದಲ್ಲದೆ ತಾವು ನಡಿಸುತ್ತಿದ್ದ ಕೊಲೆ ಮಾಟ ಜಾರತ್ವ ಕಳ್ಳತನ ಇವುಗಳೊಳಗೆ ಒಂದನ್ನೂ ಬಿಟ್ಟು ಮಾನಸಾಂತರ ಮಾಡಿಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಜನರು ತಮ್ಮ ಹೃದಯಗಳನ್ನು ಮತ್ತು ಜೀವಿತಗಳನ್ನು ಪರಿವರ್ತಿಸಿಕೊಳ್ಳಲಿಲ್ಲ ಮತ್ತು ಇತರರನ್ನು ಕೊಲ್ಲುವುದನ್ನು ಬಿಟ್ಟುಬಿಡಲಿಲ್ಲ. ಅವರು ತಾವು ನಡೆಸುತ್ತಿದ್ದ ಮಾಟಮಂತ್ರಗಳನ್ನು, ಲೈಂಗಿಕ ಪಾಪಗಳನ್ನು ಮತ್ತು ಕಳ್ಳತನವನ್ನು ತೊರೆದುಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಇದಲ್ಲದೆ ಅವರು ಕೊಲೆ, ಮಾಟ, ಜಾರತ್ವ ಮತ್ತು ಕಳ್ಳತನಗಳಿಗಾಗಿಯೂ ಪಶ್ಚಾತ್ತಾಪ ಪಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ತೆನಿ ಲೊಕಾಕ್ನಿ ಜಿವಾನಿ ಮಾರ್‍ತಲ್ಯಾತ್ನಾ ಹೊಂವ್ದಿ, ಜಾದು ಕರ್‍ತಲ್ಯಾತ್ನಾ ಹೊಂವ್ದಿತ್, ತೆಂಚ್ಯಾ ಬುರ್ಶ್ಯಾ ಆಂಗಾಚ್ಯಾ ಸಮಂದಾತ್ನಾ ಹೊಂವ್ದಿ, ನಾಹೊಲ್ಯಾರ್ ಚೊರ್ತಲ್ಯಾತ್ನಾ ಮನ್ ಬದ್ಲುಕ್ ನತ್ತ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 9:21
24 ತಿಳಿವುಗಳ ಹೋಲಿಕೆ  

ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಅವಳ ಹಣೆಯ ಮೇಲೆ : ಬಾಬಿಲೋನ್ ಮಹಾನಗರಿ ವೇಶ್ಯೆಯರ ಮಹಾತಾಯಿ ಜಗತ್ತಿನ ದುರ್ನಡತೆಗಳ ಜನನಿ,” ಎಂಬ ನಿಗೂಢವಾದ ಹೆಸರಿತ್ತು.


ಹಿಂದೆ ಪಾಪಮಾಡಿದವರಲ್ಲಿ ಹಲವರು ತಮ್ಮ ಅಶುದ್ಧ, ಅನೈತಿಕ, ಕಾಮುಕ ನಡತೆಗೆ ಪಶ್ಚಾತ್ತಾಪಪಡದೆ ಇದ್ದಾರೋ ಏನೋ, ನಾನು ಅವರಿಗಾಗಿ ಪರಿತಪಿಸಬೇಕಾದೀತೋ ಏನೋ, ನಿಮ್ಮ ನಿಮಿತ್ತ ನಾನು ತಲೆತಗ್ಗಿಸುವಂತೆ ದೇವರು ಮಾಡುತ್ತಾರೋ ಏನೋ, ಎಂಬ ಭಯವೂ ನನಗಿದೆ.


ಭೂರಾಜರು ಅವಳೊಂದಿಗೆ ಹಾದರ ಮಾಡಿದರು. ಭೂನಿವಾಸಿಗಳು ಅವಳ ಹಾದರವೆಂಬ ಮದ್ಯಸೇವಿಸಿ ಮತ್ತರಾದರು,” ಎಂದು ಹೇಳಿದನು.


ಕುಡಿಸಿದಳು ನಾಡುನಾಡುಗಳಿಗೆ ತನ್ನ ಹಾದರವೆಂಬ ಮದ್ಯವನು. ವ್ಯಭಿಚಾರಗೈದರು ಅವಳೊಡನೆ ಭೂರಾಜರು ಅವಳ ಭೋಗವಿಲಾಸದಿಂದ ಧನಿಕರಾದರು ಇಳೆಯ ವರ್ತಕರು.”


ಒಂದೇ ದಿನದೊಳಗೆ, ಒಂದೇ ಕ್ಷಣದೊಳಗೆ ಪುತ್ರಶೋಕ, ವೈಧವ್ಯ - ಇವೆರಡು ಒದಗುವುವು ನಿನಗೆ. ಎಷ್ಟೇ ಮಂತ್ರತಂತ್ರಗಳನು ನಡೆಸಿದರೂ ಅನುಭವಿಸುವೆ ನೀ ಪೂರ್ತಿಯಾಗಿ ಇವುಗಳನು.


ದೇವಜನರ, ಪೂಜ್ಯಪ್ರವಾದಿಗಳ ರಕ್ತಪಾತಕರಿಗೆ ಕುಡಿಯಲು ನೀನಿತ್ತೆ ಆ ರಕ್ತವ ನೇ ಅವರ ಕೃತ್ಯಕ್ಕದುವೇ ತಕ್ಕ ಸಂಭಾವನೆ,” ಎಂದು ಹಾಡುವುದನ್ನು ನಾನು ಕೇಳಿಸಿಕೊಂಡೆ.


ಅನಂತರ ಎರಡನೆಯ ದೇವದೂತನು ಬಂದನು. ಆತನು, “ಪತನ ಹೊಂದಿದಳು, ಪತನ ಹೊಂದಿದಳು ಬಾಬಿಲೋನ್ ಮಹಾನಗರಿ; ಹಾದರವೆಂಬ ಕಾಮೋದ್ರೇಕದ ಮದ್ಯವನು ಸಕಲರಿಗೂ ಕುಡಿಸಿದ ನಗರಿ ಪತನವಾದಳು,” ಎಂದು ಹೇಳಿದನು.


ವಿಗ್ರಹಾರಾಧನೆ, ಮಾಟಮಂತ್ರ, ಹಗೆತನ, ಜಗಳ, ಹೊಟ್ಟೆಕಿಚ್ಚು, ಕ್ರೋಧ, ಸ್ವಾರ್ಥಭೇದ, ಪಕ್ಷಪಾತ, ಮತ್ಸರ, ಕುಡಿಕತನ, ದುಂದೌತಣ - ಇತ್ಯಾದಿಗಳು.


ಹೃದಯದಿಂದ ದುರಾಲೋಚನೆ, ಕೊಲೆ, ವ್ಯಭಿಚಾರ, ಅನೈತಿಕತೆ, ಕಳ್ಳತನ, ಸುಳ್ಳುಸಾಕ್ಷಿ, ಅಪದೂರು, ಇವು ಹೊರಬರುತ್ತವೆ.


ಮಾಟಗಾತಿಯ ಮಕ್ಕಳೇ, ವೇಶ್ಯೆ ವ್ಯಭಿಚಾರಿಗಳ ಸಂತಾನದವರೇ, ಬನ್ನಿ ಇಲ್ಲಿಗೆ.


ಪ್ರಯೋಗಿಸಿ ನೋಡು ನಿನ್ನ ಅಗಣಿತ ಮಂತ್ರತಂತ್ರಗಳನು ಬಾಲ್ಯಾರಭ್ಯ ನೀ ಕಲಿತ ಮಾಯಮಾಟಗಳನು ಪ್ರಾಯಶಃ ನಿನಗವು ಪ್ರಯೋಜನವಾದಾವು ಬಹುಶಃ ನಿನಗವು ಭಯಹುಟ್ಟಿಸಿಯಾವು.


ಆತನ ನ್ಯಾಯತೀರ್ಪು ಸತ್ಯವಾದುದು, ನೀತಿಬದ್ಧವಾದುದು. ಇತ್ತಿರುವನಾತ ತೀರ್ಪನು ಮಹಾ ವೇಶ್ಯೆಯ ವಿರುದ್ಧ ಪೃಥ್ವಿಯನೇ ಹೊಲಸೆಬ್ಬಿಸಿದ ವ್ಯಭಿಚಾರಿಯ ವಿರುದ್ಧ ತನ್ನ ದಾಸರ ರಕ್ತಪಾತದ ಸೇಡನು ತೀರಿಸಿಹನಾತ,” ಎಂದು ಜನಸಮೂಹವು ಘೋಷಿಸಿತು.


ಆ ಮೃಗದ ವಿಗ್ರಹಕ್ಕೆ ಜೀವಶ್ವಾಸವನ್ನೂದಿ ಮಾತಾಡುವಂತೆಯೂ ಆ ವಿಗ್ರಹವನ್ನು ಆರಾಧಿಸದವರನ್ನು ಕೊಲ್ಲುವಂತೆಯೂ ಎರಡನೆಯ ಮೃಗಕ್ಕೆ ಅನುಮತಿಯನ್ನು ಕೊಡಲಾಯಿತು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಜನರಲ್ಲಿನ ಬುದ್ಧಿವಂತ ನಾಯಕರು ಅನೇಕರಿಗೆ ಬುದ್ಧಿಹೇಳುವರು. ಕೆಲಕಾಲ ಅವರು ಕತ್ತಿ-ಬೆಂಕಿ-ಸೆರೆ-ಸೂರೆಗಳಿಗೆ ತುತ್ತಾಗುವರು.


ಎರಡನೆಯ ಮೃಗವು ದೊಡ್ಡ ದೊಡ್ಡ ಪವಾಡಗಳನ್ನೆಸಗಿತು. ಜನರ ಮುಂದೆಯೇ ಬೆಂಕಿ ಆಕಾಶದಿಂದ ಹೊರಟು ಭೂಮಿಗೆ ಬೀಳುವಂತೆ ಮಾಡಿತು.


ಇದಲ್ಲದೆ, ದೇವಜನರ ವಿರುದ್ಧ ಯುದ್ಧಮಾಡಿ, ಜಯಗಳಿಸುವಂತೆ ಅದಕ್ಕೆ ಅವಕಾಶವನ್ನು ಕೊಡಲಾಯಿತು. ಸಕಲ ದೇಶ, ಭಾಷೆ, ಕುಲ, ಗೋತ್ರಗಳ ಮೇಲೆ ಅದಕ್ಕೆ ಅಧಿಕಾರವನ್ನು ನೀಡಲಾಯಿತು.


ಆ ವಿಪತ್ತುಗಳಿಂದ ಸಾಯದೆ ಬದುಕಿದ್ದ ಜನರು ತಮ್ಮ ದುಷ್ಕೃತ್ಯಗಳನ್ನು ಬಿಟ್ಟು ದೇವರಿಗೆ ಅಭಿಮುಖರಾಗಲೇ ಇಲ್ಲ; ದೆವ್ವಾರಾಧನೆಯನ್ನು ತ್ಯಜಿಸಲಿಲ್ಲ; ನೋಡಲಾರದ, ಕೇಳಿಸಿಕೊಳ್ಳಲಾರದ ಮತ್ತು ನಡೆಯಲಾರದ ವಿಗ್ರಹಗಳನ್ನು ಚಿನ್ನ, ಬೆಳ್ಳಿ, ತಾಮ್ರ, ಕಲ್ಲು ಮತ್ತು ಮರಗಳಲ್ಲಿ ಮಾಡಿ ಪೂಜಿಸುವುದನ್ನು ಕೈಬಿಡಲಿಲ್ಲ.


ಆ ಸ್ತ್ರೀ ಕೆನ್ನೀಲಿಯ ಹಾಗೂ ಕಡುಗೆಂಪಾದ ಬಟ್ಟೆಯನ್ನು ಧರಿಸಿದ್ದಳು; ಚಿನ್ನ, ಮುತ್ತು, ರತ್ನಾಭರಣಗಳಿಂದ ಅಲಂಕೃತಳಾಗಿದ್ದಳು. ಕೈಯಲ್ಲಿ ಚಿನ್ನದ ಪಾತ್ರೆಯನ್ನೂ ಹಿಡಿದಿದ್ದಳು. ಅವಳ ಹಾದರದ ಅಸಹ್ಯಗಳಿಂದಲೂ ಕಳಂಕಗಳಿಂದಲೂ ಅದು ತುಂಬಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು