ಪ್ರಕಟನೆ 9:7 - ಕನ್ನಡ ಸತ್ಯವೇದವು C.L. Bible (BSI)7 ಆ ಮಿಡತೆಗಳು ನೋಡುವುದಕ್ಕೆ ಸಮರಕ್ಕೆ ಸನ್ನದ್ಧರಾಗಿರುವ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟವಿದ್ದಂತೆ ಕಾಣಿಸುತ್ತಿತ್ತು. ಮುಖಗಳು ಮನುಷ್ಯರ ಮುಖಗಳಂತೆ ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆ ಮಿಡತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆಯೂ, ಅವುಗಳ ಮುಖಗಳು ಮನುಷ್ಯರ ಮುಖಗಳಂತೆಯೂ ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ವಿುಡಿತೆಗಳ ರೂಪವು ಯುದ್ಧಕ್ಕೆ ಸನ್ನದ್ಧವಾಗಿರುವ ಕುದುರೆಗಳ ರೂಪದಂತೆ ಇತ್ತು; ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಏನೋ ಇದ್ದವು; ಅವುಗಳ ಮುಖಗಳು ಮನುಷ್ಯರ ಮುಖಗಳ ಹಾಗೆ ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಮಿಡತೆಗಳು ಯುದ್ಧಕ್ಕೆ ಸಿದ್ಧಪಡಿಸಿದ ಕುದುರೆಗಳಂತೆ ಕಾಣುತ್ತಿದ್ದವು. ಅವುಗಳ ತಲೆಯ ಮೇಲೆ ಚಿನ್ನದ ಕಿರೀಟಗಳಂತೆ ಎನೋ ಇದ್ದವು; ಅವುಗಳ ಮುಖಗಳು ಮಾನವರ ಮುಖಗಳಂತಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಮಿಡತೆಗಳು ಯುದ್ಧಕ್ಕೆ ಸನ್ನದ್ಧವಾದ ಕುದುರೆಗಳಂತಿದ್ದವು. ಅವುಗಳ ತಲೆಯ ಮೇಲೆ ಚಿನ್ನದಂತಿರುವ ಕಿರೀಟಗಳಿದ್ದವು. ಅವುಗಳ ಮುಖವು ಮಾನವರ ಮುಖಗಳಂತೆ ಇದ್ದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಿ ಠೊಳಾ ಮಾರಾಮಾರಿಕ್ ತಯಾರ್ ಹೊಲ್ಲ್ಯಾ ಘೊಡ್ಕ್ಯಾಂಚ್ಯಾ ಸರ್ಕಿ ದಿಸಿತ್; ತೆಂಚ್ಯಾ ಟಕ್ಲ್ಯಾ ವೈನಿ ಸೊನ್ಯಾಚ್ಯಾ ಮುಕುಟಾಚ್ಯಾ ಸರ್ಕೆ ಕಾಯ್ಕಿ ಹೊತ್ತೆ, ಅನಿ ತೆಂಚಿ ತೊಂಡಾ ಮಾನ್ಸಾಂಚ್ಯಾ ತೊಡಾಂಚ್ಯಾ ಸರ್ಕೆ ದಿಸಿತ್. ಅಧ್ಯಾಯವನ್ನು ನೋಡಿ |