ಪ್ರಲಾಪಗಳು 1:1 - ಕನ್ನಡ ಸತ್ಯವೇದವು C.L. Bible (BSI)1 ಅಯ್ಯೋ, ಅಂದು ಜನಭರಿತವಾಗಿದ್ದ ನಗರಿ ಇಂದು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ ! ರಾಷ್ಟ್ರಗಳಲ್ಲೆಲ್ಲಾ ಅತಿ ಶ್ರೇಷ್ಠಳಾಗಿದ್ದವಳು ವಿಧವೆ ಆಗಿಬಿಟ್ಟಳಲ್ಲಾ ! ಪ್ರಾಂತ್ಯಗಳಲ್ಲೆಲ್ಲಾ ಬಹಳ ಪ್ರವೀಣಳಾಗಿದ್ದವಳು ದಾಸಿಯಂತೆ ಆಗಿಬಿಟ್ಟಿರುವಳಲ್ಲಾ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕುಳಿತುಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಗುಲಾಮಳಾದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಒಂದು ಕಾಲದಲ್ಲಿ ಜೆರುಸಲೇಮ್ ಜನಭರಿತವಾದ ನಗರವಾಗಿತ್ತು. ಆದರೆ ಈಗ ಆ ನಗರವು ಹಾಳುಬಿದ್ದಿದೆ. ಒಂದು ಕಾಲದಲ್ಲಿ ಜೆರುಸಲೇಮ್ ಅತ್ಯಂತ ದೊಡ್ಡನಗರಗಳಲ್ಲಿ ಒಂದಾಗಿತ್ತು. ಆದರೆ ಈಗ ಅದು ವಿಧವೆಯಂತೆ ಆಗಿದೆ. ಒಂದು ಕಾಲದಲ್ಲಿ ಅವಳು ಎಲ್ಲ ನಗರಗಳ ನಡುವೆ ರಾಜಕುಮಾರಿಯಂತೆ ಇದ್ದಳು. ಆದರೆ ಈಗ ಅವಳನ್ನು ದಾಸಿಯನ್ನಾಗಿ ಮಾಡಲಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ! ಅಧ್ಯಾಯವನ್ನು ನೋಡಿ |