Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:11 - ಕನ್ನಡ ಸತ್ಯವೇದವು C.L. Bible (BSI)

11 ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಫಳಾದೆನಲ್ಲಾ [ಎಂದು ಪ್ರಲಾಪಿಸುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಜೆರುಸಲೇಮಿನ ಎಲ್ಲ ಜನರು ನರಳಾಡುತ್ತಿದ್ದಾರೆ. ಅವಳ ಎಲ್ಲ ಜನರು ಆಹಾರಕ್ಕಾಗಿ ಹುಡುಕುತ್ತಿದ್ದಾರೆ. ಅವರು ತಮ್ಮ ಎಲ್ಲ ಒಳ್ಳೆಯ ವಸ್ತುಗಳನ್ನು ಆಹಾರಕ್ಕಾಗಿ ಕೊಟ್ಟುಬಿಡುತ್ತಿದ್ದಾರೆ. ಬದುಕಿರುವ ಸಲುವಾಗಿ ಅವರು ಹೀಗೆ ಮಾಡುತ್ತಿದ್ದಾರೆ. “ಯೆಹೋವನೇ, ನನ್ನ ಕಡೆಗೆ ನೋಡು! ಜನರು ನನ್ನನ್ನು ಹೇಗೆ ದ್ವೇಷಿಸುತ್ತಾರೆ ನೋಡು” ಎಂದು ಜೆರುಸಲೇಮ್ ಬೇಡಿಕೊಂಡಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವಳ ಜನರೆಲ್ಲರು ನರಳಾಡುತ್ತಾರೆ. ಅವರು ರೊಟ್ಟಿ ಹುಡುಕುತ್ತಾರೆ. ಅವರು ಪ್ರಾಣವನ್ನು ಉಳಿಸಿಕೊಳ್ಳಲು, ಅವರು ಆಹಾರಕ್ಕಾಗಿ ತಮ್ಮ ಬೊಕ್ಕಸಗಳನ್ನು ವಿನಿಮಯ ಮಾಡಿಕೊಳ್ಳುತ್ತಾರೆ “ಯೆಹೋವ ದೇವರೇ, ನೋಡು, ಲಕ್ಷಿಸಿ; ಏಕೆಂದರೆ ನಾನು ಭ್ರಷ್ಠಳಾದೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:11
20 ತಿಳಿವುಗಳ ಹೋಲಿಕೆ  

ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆ ಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


“ನನ್ನೊಡೆಯಾ, ಅರಸರೇ, ಈ ಜನರು ಪ್ರವಾದಿ ಯೆರೆಮೀಯನಿಗೆ ಮಾಡಿರುವುದೆಲ್ಲ ದುಷ್ಟಕಾರ್ಯವೇ ಸರಿ. ಅವನನ್ನು ಬಾವಿಯಲ್ಲಿ ಹಾಕಿದ್ದಾರೆ. ಆಹಾರವಿಲ್ಲದೆ ಅವನು ಬಿದ್ದಲ್ಲೇ ಸಾಯುವುದು ಖಚಿತ. ಏಕೆಂದರೆ ನಗರದಲ್ಲಿ ರೊಟ್ಟಿಯೆಲ್ಲಾ ತೀರಿಹೋಗಿದೆ,” ಎಂದು ಅರಿಕೆಮಾಡಿದನು.


‘ಅಮ್ಮಾ ತಿನ್ನಲಿಕ್ಕಿಲ್ಲವೆ? ಕುಡಿಯಲಿಕ್ಕಿಲ್ಲವೆ? ಎನ್ನುತ ಮಕ್ಕಳು ಮೂರ್ಛೆಗೊಂಡಿವೆ. ಗಾಯಗೊಂಡವರಂತೆ ನಗರದ ಚೌಕಗಳೊಳು ಪ್ರಾಣಬಿಡುತ್ತಿವೆಯಲ್ಲಾ ತಾಯಿಯ ಎದೆಯ ಮೇಲೆ ಆ ಹಸುಳೆಗಳು.


ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ಆಗ ಸಮಾರಿಯ ಪಟ್ಟಣದಲ್ಲಿ ಘೋರ ಕ್ಷಾಮವಿತ್ತು. ಮುತ್ತಿಗೆಯ ನಿಮಿತ್ತ ಅದು ಮತ್ತಷ್ಟು ಘೋರವಾಗಿ ಒಂದು ಕತ್ತೆಯ ತಲೆಯನ್ನು ಒಂಬತ್ತು ಬೆಳ್ಳಿ ನಾಣ್ಯಗಳಿಗೂ, ಇನ್ನೂರು ಗ್ರಾಂ ಕಾಡು ಈರುಳ್ಳಿಯನ್ನು ಐದು ಬೆಳ್ಳಿ ನಾಣ್ಯಗಳಿಗೂ ಮಾರಲಾಗುತ್ತಿತ್ತು.


ಅದಕ್ಕೆ ಸರ್ವೇಶ್ವರ : “ನೀನು ನನಗೆ ಅಭಿಮುಖನಾಗಿ ಹಿಂದಿರುಗಿ ಬಂದರೆ ಮರಳಿ ನಿನ್ನನ್ನು ನನ್ನ ಸೇವೆಗೆ ಸೇರಿಸಿಕೊಳ್ಳುವೆನು. ತುಚ್ಛವಾದುದನ್ನು ತೊರೆದು ಅಮೂಲ್ಯವಾದುದನ್ನು ಉಚ್ಚರಿಸುವೆಯಾದರೆ ನೀನು ನನ್ನ ಬಾಯಂತಿರುವೆ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು. ನೀನು ಅವರ ಕಡೆಗೆ ತಿರುಗದಿರುವೆ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ನಿಂದಾಸ್ಪದರಾದೆವು ನೆರೆಹೊರೆಯ ಜನಾಂಗಗಳಿಗೆ I ಗುರಿಯಾದೆವು ಸುತ್ತಣವರ ಹಾಸ್ಯಕುಚೋದ್ಯಗಳಿಗೆ II


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು