Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:12 - ಕನ್ನಡ ಸತ್ಯವೇದವು C.L. Bible (BSI)

12 ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿ ರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಹಾದುಹೋಗುವವರೇ, ನಿಮ್ಮಲ್ಲಿ ಯಾರಿಗೂ ನನ್ನ ಚಿಂತೆ ಇಲ್ಲವೋ? ಯೆಹೋವನು ಅತಿರೋಷಗೊಂಡು ನನ್ನನ್ನು ಬಾಧಿಸಿ ನನಗೆ ಉಂಟುಮಾಡಿದ ವ್ಯಥೆಯನ್ನು ನೀವು ನೋಡಿ ಇಂಥಾ ವ್ಯಥೆಯು ಇನ್ನೆಲ್ಲಾದರೂ ಉಂಟೋ ಯೋಚಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ರಸ್ತೆಯಲ್ಲಿ ಹಾದುಹೋಗುವ ಜನರೇ, ನೀವು ನನ್ನ ಬಗ್ಗೆ ಯೋಚಿಸುವುದಿಲ್ಲವೆಂದು ತೋರುತ್ತದೆ. ನನ್ನ ಕಡೆಗೆ ಗಮನ ಕೊಡಿ. ನನ್ನ ನೋವಿನಂಥ ನೋವು ಮತ್ತೊಂದು ಇದೆಯೇ? ನನಗೆ ಬಂದಂಥ ನೋವು ಇನ್ನಾವುದಾದರೂ ಇದೆಯೇ? ದಂಡನೆಯಾಗಿ ಯೆಹೋವನು ನನಗೆ ಕೊಟ್ಟ ನೋವಿನಂಥ ನೋವು ಮತ್ತೊಂದು ಇದೆಯೇ? ಆತನು ತನ್ನ ಮಹಾಕೋಪದ ದಿನದಂದು ನನ್ನನ್ನು ದಂಡಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಹಾದು ಹೋಗುವವರೇ, ಇದು ನಿಮಗೆ ಏನೂ ಇಲ್ಲವೋ? ಸುತ್ತಲೂ ದೃಷ್ಟಿಸಿ ನೋಡಿರಿ. ಯೆಹೋವ ದೇವರ ಉಗ್ರಕೋಪದ ದಿನದಲ್ಲಿ ನನ್ನನ್ನು ಸಂಕಟ ಪಡಿಸಿದ ಇಂಥಾ ದುಃಖವು, ಯಾರಿಗಾದರೂ ಉಂಟೋ ನೋಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:12
18 ತಿಳಿವುಗಳ ಹೋಲಿಕೆ  

ನಮ್ಮ ದೇವರು ನಮ್ಮ ಮೇಲೆ ದೊಡ್ಡ ಕೇಡನ್ನು ಬರಮಾಡಿದ್ದಾರೆ. ನಮ್ಮನ್ನೂ ನಮ್ಮನ್ನಾಳುವ ಅಧಿಪತಿಗಳನ್ನೂ ಖಂಡಿಸಿ ಹೇಳಿದ ಮಾತುಗಳನ್ನು ನೆರವೇರಿಸಿದ್ದಾರೆ. ಜೆರುಸಲೇಮಿಗೆ ಆದಂಥ ಕೇಡು ವಿಶ್ವದಲ್ಲಿ ಎಂದೂ ಆಗಲಿಲ್ಲ.


ಆತನ ಮನದಾಲೋಚನೆಗಳನ್ನು ನಡೆಸಿ ನೆರವೇರಿಸುವ ತನಕ ಹಿಂದಿರುಗದು ಆತನ ರೋಷವೆಂಬಾ ಬಿರುಗಾಳಿ, ಇದನ್ನು ನೀವು ಗ್ರಹಿಸುವಿರಿ ಕಟ್ಟಕಡೆಯ ದಿನಗಳಲ್ಲಿ.


ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಏಕೆಂದರೆ ಆಗ ಬರಲಿರುವ ಸಂಕಷ್ಟಗಳು ಸೃಷ್ಟಿಯ ಆದಿಯಿಂದ ಇಂದಿನವರೆಗೂ ಇರಲಿಲ್ಲ; ಇನ್ನು ಮುಂದಕ್ಕೂ ಇರುವುದಿಲ್ಲ.


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಸೇನಾಧೀಶ್ವರ ಸರ್ವೇಶ್ವರನು ಕೋಪೋದ್ರೇಕದಿಂದ ರೋಷಾವೇಶದಿಂದ ಕೆರಳುವ ದಿನದಂದು ಆಕಾಶಮಂಡಲ ನಡುಗುವುದು, ಭೂಮಂಡಲ ಸ್ಥಳಪಲ್ಲಟಗೊಳ್ಳುವುದು.


ನನ್ನನು ಆವರಿಸಿಕೊಂಡಿದೆ ನಿನ್ನ ಕಡುಕೋಪಾಗ್ನಿಯು I ನನ್ನ ಹಾಳುಮಾಡುತ್ತಿದೆ ನಿನ್ನ ಭಯಂಕರ ದಾಳಿಯು II


ಈ ನಿಮಿತ್ತ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ, ಅತ್ತುಗೋಳಾಡಿರಿ. ಸರ್ವೇಶ್ವರ ಸ್ವಾಮಿಯ ಕೋಪ ಅಗ್ನಿಯು ಜುದೇಯವನ್ನು ಬಿಟ್ಟುಹೋಗಿಲ್ಲ.


ಹೌದು, ಭಯಂಕರವಾದ ದಿನ ಬರಲಿದೆ, ಅದಕ್ಕಿರದು ಎಣೆ! ಅದು ಇಕ್ಕಟ್ಟಿನ ದಿನ, ಆದರೂ ಅದರಿಂದ ಯಕೋಬ್ಯರಿಗಿದೆ ಬಿಡುಗಡೆ.”


ಇಗೋ, ಹೊರಟಿದೆ ಬಡಿದುಕೊಂಡು ಹೋಗುವ ಗಾಳಿ ಸರ್ವೇಶ್ವರನ ರೋಷವೆಂಬ ಬಿರುಗಾಳಿ ದುರುಳರ ತಲೆಯ ಮೇಲೆ ಬಡಿದೋಡುವ ಸುಂಟರ ಗಾಳಿ!


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಅದು ಕಾರಿರುಳಿನ ಕರಾಳ ದಿನ, ಕಾರ್ಮುಗಿಲ ಕಾರ್ಗತ್ತಲ ದಿನ. ಮುಂಬೆಳಕು ಗುಡ್ಡದಿಂದ ಗುಡ್ಡಕ್ಕೆ ಹರಡುವಂತೆ ಪ್ರಬಲವಾದ ದೊಡ್ಡಸೈನ್ಯವೊಂದು ಬರುತ್ತಿದೆ; ಇಂಥ ಸೈನ್ಯ ಹಿಂದೆಂದೂ ಬಂದಿಲ್ಲ, ತಲತಲಾಂತರಕ್ಕೂ ಬರುವಂತಿಲ್ಲ.


ಜೆರುಸಲೇಮಿನ ಗೋಳು : “ಅಯ್ಯೋ ನಾನು ಗಾಯಗೊಂಡೆ ನನಗೆ ಬಿದ್ದ ಪೆಟ್ಟು ಗಡಸು. ತಗಲಿದೆ ವ್ಯಾಧಿ, ಸಹಿಸಲೇಬೇಕಾದ ಕಾಯಿಲೆ.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು