Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:13 - ಕನ್ನಡ ಸತ್ಯವೇದವು C.L. Bible (BSI)

13 “ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ಮೇಲಣ ಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳನೆಲ್ಲಾ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ಮೇಲಣಲೋಕದಿಂದ ಬೆಂಕಿಯನ್ನು ಕಳುಹಿಸಿದ್ದಾನೆ, ಅದು ನನ್ನ ಎಲುಬುಗಳಲ್ಲಿ ವ್ಯಾಪಿಸಿದೆ; ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ, ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾನೆ, ನಾನು ಹಾಳುಬಿದ್ದು ಸದಾ ಬಳಲುವಂತೆ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನು ಮೇಲಿನಿಂದ ಬೆಂಕಿಯನ್ನು ಕಳಿಸಿದ್ದಾನೆ. ಆ ಬೆಂಕಿ ನನ್ನ ಎಲುಬುಗಳ ಆಳಕ್ಕೆ ಇಳಿದುಹೋಗಿದೆ. ಆತನು ನನ್ನ ಪಾದಗಳಿಗೆ ಬಲೆಯನ್ನು ಒಡ್ಡಿದ್ದಾನೆ. ಆತನು ನನ್ನನ್ನು ಸುತ್ತಲು ತಿರುಗಿಸಿದ್ದಾನೆ. ಆತನು ನನ್ನನ್ನು ಹಾಳುಭೂಮಿಯನ್ನಾಗಿ ಮಾಡಿದ್ದಾನೆ. ನಾನು ಸದಾ ಬಳಲುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಆತನು ಮೇಲಿನಿಂದ ನನ್ನ ಎಲುಬುಗಳಿಗೆ ಬೆಂಕಿಯನ್ನು ಕಳುಹಿಸಿದ್ದಾನೆ. ಆತನು ನನ್ನ ಪಾದದ ಮೇಲೆ ಒಂದು ಬಲೆಯನ್ನು ಬೀಸಿ, ಆತನು ನನ್ನನ್ನು ಹಿಂದಕ್ಕೆ ತಿರುಗಿಸಿದ್ದಾರೆ. ಆತನು ನನ್ನನ್ನು ದಿನವೆಲ್ಲಾ ಹಾಳಾಗಿಯೂ, ಮೂರ್ಛೆ ಹೋಗುವಂತೆಯೂ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:13
31 ತಿಳಿವುಗಳ ಹೋಲಿಕೆ  

ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು; ನಾನು ಹಾಕಿದ ಉರುಳಿನಲ್ಲಿ ಸಿಕ್ಕಿಬೀಳುವನು. ಅವನನ್ನು ಬಾಬಿಲೋನಿಗೆ ತಂದು, ಅಲ್ಲೇ ಅವನೊಂದಿಗೆ ವಾದಿಸಿ, ಅವನು ನನಗೆ ಮಾಡಿದ ಅಪರಾಧವನ್ನು ಅವನ ಮೇಲೆ ಹೊರಿಸುವೆನು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ನನಗೆ ಅನ್ಯಾಯವಾಗಿರುವುದು ದೇವರಿಂದಲೇ ನನ್ನ ಸುತ್ತಲು ಬಲೆಯೊಡ್ಡಿರುವವನು ಆತನೇ! ನಾನು ಹೇಳುವ ಈ ಮಾತು ತಿಳಿದಿರಲಿ ನಿಮಗೆ:


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಯಾರು ತಡೆದಾರು ಆತನ ಸಿಟ್ಟಿಗೆ? ಯಾರು ನಿಂತಾರು ಆತನ ರೋಷಾಗ್ನಿಗೆ? ಆತನ ರೌದ್ರ ಜ್ವಾಲಾಪ್ರವಾಹದಂತೆ ಬಂಡೆಗಳು ಪುಡಿಪುಡಿ ಆತನ ಮುಂದೆ.


ನಾನು ಅವನಿಗೆ ನನ್ನ ಬಲೆಯೊಡ್ಡುವೆನು, ನಾನು ಹಾಕಿದ ಉರುಲಿನಲ್ಲಿ ಸಿಕ್ಕಿಬೀಳುವನು: ಬಾಬಿಲೋನಿಯಾ ದೇಶದ ಬಾಬಿಲೋನ್ ನಗರಕ್ಕೆ ಅವನನ್ನು ಒಯ್ಯುವೆನು; ಅಲ್ಲೇ ಇದ್ದು ಸಾಯುವನು, ಆದರೂ ಆ ದೇಶವನ್ನು ನೋಡನು.


ಉರುಲು ಬಲೆಗೆ ನಮ್ಮನು ಸಿಕ್ಕಿಸಿದೆ I ಭಾರಿ ಹೊರೆಯನು ಬೆನ್ನಿಗೆ ಹೊರಿಸಿದೆ II


ಅವರು ಹೋಗುವಾಗ ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳಂತೆ ಅವರನ್ನು ಕೆಳಕ್ಕೆ ಎಳೆದುಬಿಡುವೆನು. ಅವರ ದುಷ್ಕೃತ್ಯಗಳಿಗನುಸಾರ ಅವರನ್ನು ದಂಡಿಸುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: “ಗುಂಪಾಗಿ ಕೂಡಿದ ಬಹುಜನಾಂಗಗಳ ಕೈಯಿಂದ, ನಾ ನಿನ್ನ ಮೇಲೆ ಬೀಸುವೆ ಬಲೆಯೊಂದ.


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


ಆದಕಾರಣ, ನನ್ನ ರೌದ್ರಕೋಪಾಗ್ನಿ ಸುರಿದು ಜುದೇಯದ ಊರುಗಳಲ್ಲೂ ಜೆರುಸಲೇಮಿನ ಬೀದಿಗಳಲ್ಲೂ ಧಗಧಗಿಸಿತು. ಅವು ಈಗಲೂ ಹಾಳುಪಾಳಾಗಿವೆ.’


ಆದರೆ, ಕೆತ್ತಿದ ವಿಗ್ರಹಗಳಲ್ಲಿ ಭರವಸೆಯಿಡುವವರು : “ನೀವೇ ನಮ್ಮ ದೇವರು"ಗಳು ಎಂದು ಎರಕದ ಬೊಂಬೆಗಳಿಗೆ ಅರಿಕೆಮಾಡುವವರು; ಅವಮಾನಕ್ಕೆ ಈಡಾಗುವರು ಹಿಂಜರಿದು.


ಸಿಯೋನನ್ನು ದ್ವೇಷಿಸುವ ಜನ I ಹಿಂದಿರುಗಲಿ ಪಡೆದು ಅಪಮಾನ II


ನನ್ನ ಕೊಲೆಗೆ ಯತ್ನಿಸುವವನು ತಲೆ ತಗ್ಗಿಸಲಿ ನಿರಾಶೆಗೊಂಡು I ನನಗೆ ಕೇಡನು ಮಾಡುವವರು ಓಡಿಹೋಗಲಿ ಗಲಿಬಿಲಿಗೊಂಡು II


ಕರಗುತ್ತಿದೆ ಬದುಕು ತಾಪದಲಿ; ಕುಂದುತ್ತಿದೆ ಶಕ್ತಿ ಪಾಪದಲಿ I ಸವೆದು ಹೋಗುತ್ತಿವೆ ನನ್ನ ದೇಹದೆಲುಬುಗಳು ಕಾಲ ಚಕ್ರದಲಿ II


ಅವನನ್ನು ಅವನ ಕಾಲುಗಳೆ ಬಲೆಗೆ ಬೀಳಿಸುವುವು ಅವನನ್ನು ಪಾಳುಗುಂಡಿಯ ಮೇಲೆ ನಡೆಸುವುವು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ಒಡ್ಡಿದರು ಗರ್ವಿಗಳು ಗುಪ್ತವಾಗಿ I ಉರುಲನು, ಪಾಶಗಳನು ನನಗಾಗಿ I ಬಲೆಹಾಸಿದರು ದಾರಿಗೆ ಅಡ್ಡವಾಗಿ II


ಅದನ್ನು ಹಸಿಯಾಗಿಯೋ ಅಥವಾ ನೀರಿನಲ್ಲಿ ಬೇಯಿಸಿಯೋ ತಿನ್ನಕೂಡದು. ಅದನ್ನೆಲ್ಲಾ, ತಲೆ, ಕಾಲು, ಒಳ ಭಾಗಗಳ ಸಹಿತವಾಗಿ, ಬೆಂಕಿಯಲ್ಲಿ ಸುಟ್ಟೇ ತಿನ್ನಬೇಕು.


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು