ಪ್ರಲಾಪಗಳು 1:14 - ಕನ್ನಡ ಸತ್ಯವೇದವು C.L. Bible (BSI)14 “ನನ್ನ ದ್ರೋಹಗಳನ್ನು ನನಗೆ ಬಿಗಿದಿದ್ದಾನೆ ನೊಗದ ಕಣ್ಣುಗಳಂತೆ. ಅವು ಹುರಿಗೊಂಡು, ಸುತ್ತಿಕೊಂಡು ಕುತ್ತಿಗೆಗೆ, ನನ್ನ ಶಕ್ತಿಯನ್ನು ಹೀರುತ್ತಿವೆ. ಸಿಕ್ಕಿಸಿದನಲ್ಲಾ ಸ್ವಾಮಿ, ನನ್ನಿಂದ ಎದುರಿಸಲಾಗದಂಥವರ ಕೈಗೆ ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆತನ ಕೈ, ನನ್ನ ದ್ರೋಹಗಳನ್ನು ನನ್ನ ಮೇಲೆ ನೊಗವು ಇರುವಂತೆ ನನ್ನನ್ನು ಬಿಗಿದಿದೆ. ಆ ದ್ರೋಹಗಳು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಆತನ ಕೈ ನನ್ನ ದ್ರೋಹಗಳನ್ನು ನೊಗದ ಕಣ್ಣಿಗಳನ್ನೋ ಎಂಬಂತೆ ನನಗೆ ಬಿಗಿದಿದೆ. ಅವು ಹುರಿಗೊಂಡು ನನ್ನ ಕುತ್ತಿಗೆಯನ್ನು ಸುತ್ತಿಕೊಂಡಿವೆ; ನನ್ನ ಬಲವನ್ನು ಕುಂದಿಸಿದ್ದಾನೆ; ನಾನು ಎದುರಿಸಲಾರದವರ ಕೈಗೆ ಕರ್ತನು ನನ್ನನ್ನು ಸಿಕ್ಕಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 “ನನ್ನ ಪಾಪಗಳನ್ನೆಲ್ಲ ಒಟ್ಟುಗೂಡಿಸಿ ನೊಗದಂತೆ ಕಟ್ಟಲಾಗಿದೆ. ಯೆಹೋವನು ತನ್ನ ಕೈಗಳಿಂದ ನನ್ನ ಪಾಪಗಳನ್ನು ಒಟ್ಟಿಗೆ ಕಟ್ಟಿದ್ದಾನೆ. ಯೆಹೋವನ ಆ ನೊಗವು ನನ್ನ ಕತ್ತಿನ ಮೇಲೆ ಇದೆ. ಯೆಹೋವನು ನನ್ನನ್ನು ದುರ್ಬಲಗೊಳಿಸಿದ್ದಾನೆ. ನಾನು ಎದುರಿಸಲಾಗದ ಜನರ ಕೈಗೆ ಯೆಹೋವನು ನನ್ನನ್ನು ಒಪ್ಪಿಸಿಕೊಟ್ಟಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನನ್ನ ಪಾಪಗಳು ನನಗೆ ನೊಗವಾಗಿ, ನನ್ನ ಕುತ್ತಿಗೆಯ ಮೇಲೆ ಅವು ಬಂದಿವೆ. ಕರ್ತದೇವರು ನನ್ನ ಶಕ್ತಿಯನ್ನು ಕುಂದಿಸಿದ್ದಾರೆ. ಯೆಹೋವ ದೇವರು ನನ್ನನ್ನು ಅವರ ಕೈಗಳಿಗೆ ಒಪ್ಪಿಸಿ, ಅವರನ್ನು ನಾನು ಎದುರಿಸಲಾರದಂತೆ ಮಾಡಿದ್ದಾರೆ. ಅಧ್ಯಾಯವನ್ನು ನೋಡಿ |