Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:16 - ಕನ್ನಡ ಸತ್ಯವೇದವು C.L. Bible (BSI)

16 “ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಈ ವಿಪತ್ತುಗಳಿಂದ ಗೋಳಾಡುತ್ತಿರುವೆನು, ನನ್ನನ್ನು ಸಂತೈಸಿ ದಣಿವಾರಿಸತಕ್ಕವನು ದೂರವಾಗಿರುವುದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವುದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ವಿಪತ್ತುಗಳಿಂದ ಅಳುವೆನು, ನನ್ನನ್ನು ಸಂತೈಸಿ ದಣುವಾರಿಸತಕ್ಕವನು ದೂರವಾಗಿರುವದರಿಂದ ನನ್ನ ಕಣ್ಣೀರು ಧಾರೆಧಾರೆಯಾಗಿ ಸುರಿಯುವದು. ಶತ್ರುವು ಗೆದ್ದು ನನ್ನ ಮಕ್ಕಳು ಹಾಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ನಾನು ಈ ಎಲ್ಲ ವಿಪತ್ತುಗಳಿಗಾಗಿ ಅಳುತ್ತೇನೆ. ನನ್ನ ಕಣ್ಣುಗಳಿಂದ ಧಾರಾಕಾರವಾಗಿ ನೀರು ಸುರಿಯುತ್ತಿದೆ. ನನ್ನನ್ನು ಸಂತೈಸುವವರು ಯಾರೂ ಸಮೀಪದಲ್ಲಿ ಇಲ್ಲ; ನನ್ನನ್ನು ಪ್ರೋತ್ಸಾಹಿಸುವವರು ಯಾರೂ ಇಲ್ಲ. ನನ್ನ ಮಕ್ಕಳು ಹಾಳುಬಿದ್ದ ಭೂಮಿಯಂತಿದ್ದಾರೆ. ಶತ್ರುವು ಜಯಶಾಲಿಯಾದ ಕಾರಣ ಅವರು ಹಾಗಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇವುಗಳ ನಿಮಿತ್ತ ನಾನು ಅಳುತ್ತೇನೆ. ನನ್ನ ಕಣ್ಣೀರು ಕಣ್ಣಿನಿಂದ ತುಂಬಿ ಹರಿಯುತ್ತದೆ. ಏಕೆಂದರೆ ನನ್ನನ್ನು ಆದರಿಸುವವರೂ, ನನ್ನ ಪ್ರಾಣವನ್ನು ಬದುಕಿಸುವ ಆದರಿಕರೂ ನನ್ನಿಂದ ದೂರವಾಗಿದ್ದಾರೆ. ನನ್ನ ಮಕ್ಕಳು ಹಾಳಾಗಿದ್ದಾರೆ. ಏಕೆಂದರೆ ನನ್ನ ಶತ್ರುವು ಜಯಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:16
23 ತಿಳಿವುಗಳ ಹೋಲಿಕೆ  

ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಒಂದು ವೇಳೆ ಮಕ್ಕಳನ್ನು ಹೆತ್ತು ಸಾಕಿದರೂ ಅವರಾರೂ ಉಳಿಯದಂತೆ ಅವರಿಗೆ ನಿರಂತರವಾಗಿ ಪುತ್ರಶೋಕವನ್ನುಂಟುಮಾಡುವೆನು. ನಾನು ಅವರಿಗೆ ವಿಮುಖನಾಗುವೆನು. ಅವರ ಗತಿ ಹೇಳತೀರದಂತಾಗುವುದು.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ನಾನು : ಪರ್ವತಗಳಿಗಾಗಿ ಅತ್ತು ಗೋಳಾಡುವೆನು ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು ಅವು ಸುಟ್ಟುಹೋಗಿವೆ, ಯಾರೂ ಅಲ್ಲಿ ಹಾದುಹೋಗರು. ದನಕರುಗಳ ಸದ್ದೂ ಕಿವಿಗೆ ಬೀಳದು ತೊಲಗಿಹೋಗಿವೆ ಮೃಗಪಕ್ಷಿಗಳೂ !


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಗುರಿಯಾದರು ಶತ್ರುಶೋಷಣೆಗೆ I ಕುಗ್ಗಿಹೋದವರು ಅವರ ಕೈಕೆಳಗೆ II


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


“ಜೆರುಸಲೇಮೆ, ನಿನಗೆ ಕರುಣೆ ತೋರುವವರಾರು? ನಿನ್ನ ಪರಿಸ್ಥಿತಿಯನ್ನು ಕಂಡು ಪ್ರಲಾಪಿಸುವವರಾರು? ತಿರುಗಿ ನೋಡಿ ನಿನ್ನ ಕ್ಷೇಮವನ್ನು ವಿಚಾರಿಸುವವರಾರು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು