Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:18 - ಕನ್ನಡ ಸತ್ಯವೇದವು C.L. Bible (BSI)

18 “ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯೆಹೋವನು ನೀತಿಸ್ವರೂಪನು, ನಾನಾದರೋ ಆತನ ಆಜ್ಞೆಗಳನ್ನು ಮೀರಿದ ದ್ರೋಹಿ; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಕನ್ಯೆಯರು ಮತ್ತು ಯುವಕರು ಸೆರೆಹೋಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಯೆಹೋವನು ನ್ಯಾಯಸ್ವರೂಪನು, ನಾನಾದರೋ ಆತನ ಆಜ್ಞೆಯನ್ನು ಮೀರಿದವಳು; ಜನಾಂಗಗಳೇ, ನೀವೆಲ್ಲರೂ ಕಿವಿಗೊಡಿರಿ, ನನ್ನ ವ್ಯಥೆಯನ್ನು ನೋಡಿರಿ; ನನ್ನ ಯುವತೀ ಯುವಕರು ಸೆರೆ ಹೋಗಿದ್ದಾರಲ್ಲಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅವಳು ಹೇಳಿದಳು, “ಯೆಹೋವನು ಮಾಡಿದ್ದು ನ್ಯಾಯವಾಗಿಯೇ ಇದೆ. ಏಕೆಂದರೆ ನಾನು ಆತನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಎಲ್ಲಾ ಜನಗಳೇ, ನನ್ನ ಮಾತುಗಳನ್ನು ಕೇಳಿರಿ. ನನ್ನ ವ್ಯಥೆಯನ್ನು ನೋಡಿರಿ. ನನ್ನ ತರುಣತರುಣಿಯರು ಸೆರೆ ಒಯ್ಯಲ್ಪಟ್ಟಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಯೆಹೋವ ದೇವರು ನೀತಿವಂತನು. ಏಕೆಂದರೆ ನಾನು ಆತನ ಆಜ್ಞೆಗೆ ವಿರುದ್ಧವಾಗಿ ತಿರುಗಿ ಬಿದ್ದಿದ್ದೇನೆ. ಎಲ್ಲಾ ಜನರೇ ಕೇಳಿರಿ, ನಾನು ನಿಮ್ಮನ್ನು ಕೇಳಿಕೊಳ್ಳುತ್ತೇನೆ. ನನ್ನ ದುಃಖವನ್ನು ನೋಡಿರಿ. ನನ್ನ ಕನ್ಯೆಯರೂ, ನನ್ನ ಯೌವನಸ್ಥರೂ ಸೆರೆಗೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:18
38 ತಿಳಿವುಗಳ ಹೋಲಿಕೆ  

ಆದರೆ ಅದರ ಮಧ್ಯೆಯಿರುವ ಸರ್ವೇಶ್ವರ ನ್ಯಾಯಸ್ವರೂಪಿ, ಎಂದಿಗೂ ಅನ್ಯಾಯ ಮಾಡುವುದಿಲ್ಲ. ದಿನದಿನವೂ ತಪ್ಪದೆ ನ್ಯಾಯ ದೊರಕಿಸುತ್ತಾರೆ. ಅವರಿಗೆ ಗುಟ್ಟಾಗಿರುವುದು ಯಾವುದೂ ಇಲ್ಲ. ಅನ್ಯಾಯಮಾಡುವವನಿಗಾದರೋ ನಾಚಿಕೆ ಎಂಬುದೇ ಇಲ್ಲ.


ನಾ ಬಲ್ಲೆ ಪ್ರಭು, ನಿನ್ನ ವಿಧಿಗಳು ನೀತಿಯುತವೆಂದು I ಕಷ್ಟಕೆ ನನ್ನನು ಗುರಿಪಡಿಸಿರುವುದು ಉಚಿತವೆಂದು II


ಹಾದುಹೋಗುವವರೇ, ನಿಮಗಿಲ್ಲವೆ ನನ್ನ ಚಿಂತೆ? ಸರ್ವೇಶ್ವರ ಸಿಟ್ಟುಗೊಂಡು ನನಗಿತ್ತಿರುವನು ಈ ವ್ಯಥೆ ! ಈ ಪರಿ ಸಂಕಟವನ್ನು ನೀವೆಲ್ಲಾದರು ನೋಡಿದ್ದುಂಟೆ?”


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಿಮ್ಮೊಡನೆ ವ್ಯಾಜ್ಯ ನನಗೆ ಅಸಾಧ್ಯ. ಆದರೂ ನಿಮ್ಮೊಡನೆ ಚರ್ಚಿಸಬೇಕೆಂದಿರುವೆ ಈ ನ್ಯಾಯ : ದುರುಳರ ಬಾಳು ಬೆಳಗುತ್ತಿರುವುದು ಏಕೆ? ದ್ರೋಹಿಗಳೆಲ್ಲರು ನೆಮ್ಮದಿಯಾಗಿರುವುದು ಏಕೆ?


“ನಾವು ಅವಿಧೇಯರಾಗಿ ಪಾಪಮಾಡಿದೆವು ನೀನು ಕ್ಷಮಿಸಲಿಲ್ಲ ನಮ್ಮನ್ನು.


ಕುಳಿತಿದ್ದರವರು ಕತ್ತಲಲಿ, ಕಗ್ಗತ್ತಲಲಿ I ನರಳುತ್ತಿದ್ದರು ಬಂಧಿತರಾಗಿ ಬೇಡಿಗಳಲಿ II


ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು!


ಧರ್ಮಶಾಸ್ತ್ರದ ನೇಮನಿಯಮಗಳು ಆ ಶಾಸ್ತ್ರಕ್ಕೆ ಅಧೀನರಾದವರಿಗೆ ಮಾತ್ರ ಅನ್ವಯಿಸುತ್ತವೆಂದು ನಾವು ಬಲ್ಲೆವು. ಆದ್ದರಿಂದ ಯಾರೂ ಯಾವ ನೆಪವನ್ನು ಹೇಳಲೂ ಬಾಯಿ ತೆರೆಯುವಂತಿಲ್ಲ. ಜಗತ್ತೆಲ್ಲವೂ ದೇವರ ನ್ಯಾಯತೀರ್ಪಿಗೆ ಗುರಿಯಾಗಿದೆ.


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಸರ್ವೇಶ್ವರಾ, ನೀವು ಸತ್ಯಸ್ವರೂಪಿ. ನಾವೋ ಲಜ್ಜೆಗೆಟ್ಟವರು. ಹೌದು, ಯೆಹೂದ್ಯರು ಹಾಗು ಜೆರುಸಲೇಮಿನ ನಿವಾಸಿಗಳು ಈಗಾಗಲೆ ನಿಮಗೆ ವಿರುದ್ಧ ಮಾಡಿದ ದ್ರೋಹದ ನಿಮಿತ್ತ ನಿಮ್ಮಿಂದ ದೇಶವಿದೇಶಗಳಿಗೆ ತಳ್ಳಲ್ಪಟ್ಟಿದ್ದಾರೆ. ದೂರದ ದೇಶಗಳಿಗೂ ಹತ್ತಿರದ ನಾಡುಗಳಿಗೂ ಚದರಿಹೋಗಿರುವ ಎಲ್ಲ ಇಸ್ರಯೇಲರು ನಾಚಿಕೆಗೆ ಈಡಾಗಿದ್ದಾರೆ.


ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


ಬಳಿಕ ಅವಿಧೇಯರಾದರು, ನಿಮಗೆ ವಿರುದ್ಧ ದಂಗೆ ಎದ್ದರು; ನಿಮ್ಮ ಉಪದೇಶವನು ಉಲ್ಲಂಘಿಸಿದರು, ನಿಮ್ಮ ಪ್ರವಾದಿಗಳನು ಕೊಂದರು; ಹೌದು, ನಿಮಗೆ ಅಭಿಮುಖರಾಗಲು ಎಚ್ಚರಿಸಿದವರನೆ ಕೊಂದರು. ಕಡೆಗೆ ನಿಮ್ಮನ್ನೇ ಅಸಡ್ಡೆಮಾಡಿ, ಘೋರ ಅಪರಾಧಿಗಳಾದರು.


ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


ಅವನು ಜುದೇಯ ನಾಡಿನ ಆ ದೈವಭಕ್ತನಿಗೆ, “ನಿನ್ನ ದೇವರಾದ ಸರ್ವೇಶ್ವರ ನಿನಗೆ ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದು ಆಜ್ಞಾಪಿಸಿದರೂ ನೀನು ಅವರ ಆಜ್ಞೆಯನ್ನು ಮೀರಿ, ಅವಿಧೇಯನಾಗಿ


ತಂತ್ರಮಂತ್ರಗಳಷ್ಟೇ ಕೆಟ್ಟದು ಪ್ರತಿಭಟನೆ ಕಳ್ಳಭಕ್ತಿಗೂ ವಿಗ್ರಹಾರಾಧನೆಗೂ ಸಮಾನ ಹಟಮಾರಿತನ. ನೀ ತಳ್ಳಿಬಿಟ್ಟೆ ಸರ್ವೇಶ್ವರನ ಆದೇಶವನ್ನು; ತಳ್ಳಿಬಿಟ್ಟರವರು ನಿನ್ನ ಅರಸುತನವನ್ನು,” ಎಂದು ನುಡಿದನು.


ಆಗ ಅದೋನೀಬೆಜೆಕನು, “ಎಪ್ಪತ್ತು ಮಂದಿ ಅರಸರ ಕೈಕಾಲುಗಳ ಹೆಬ್ಬೆರಳುಗಳನ್ನು ನಾನು ಕತ್ತರಿಸಿದೆ; ನನ್ನ ಊಟದ ಮೇಜಿನ ಕೆಳಗೆ ಬೀಳುತ್ತಿದ್ದ ಚೂರುಪಾರುಗಳನ್ನು ಅವರು ತಿನ್ನುತ್ತಿದ್ದರು; ನಾನು ಅವರಿಗೆ ಮಾಡಿದಂತೆಯೇ ದೇವರು ನನಗೆ ಮಾಡಿದ್ದಾರೆ,” ಎಂದನು. ಅವನನ್ನು ಜೆರುಸಲೇಮಿಗೆ ಕರೆತರಲು ಅವನು ಅಲ್ಲೇ ನಿಧನನಾದನು.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ಆಗ ಫರೋಹನು ಮೋಶೆ ಮತ್ತು ಆರೋನರನ್ನು ಕರೆಯಿಸಿ, ಅವರಿಗೆ, “ನಾನು ಅಪರಾಧಿಯೆಂದು ಈಗ ಒಪ್ಪಿಕೊಳ್ಳುತ್ತೇನೆ. ಸರ್ವೇಶ್ವರನು ಸತ್ಯವಂತನು; ನಾನೂ ನನ್ನ ಜನರೂ ತಪ್ಪಿತಸ್ಥರು.


ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II


ಹೊಲ ಕಾಯುವವರಂತೆ ಅದನ್ನು ಸುತ್ತುಗಟ್ಟುವರು. ಏಕೆಂದರೆ ಅದರ ಜನರು ಸರ್ವೇಶ್ವರ ಸ್ವಾಮಿಗೇ ತಿರುಗಿಬಿದ್ದಿದ್ದಾರೆ. ಇದು ಆ ಸ್ವಾಮಿಯ ನುಡಿ.


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ಆದರೂ ನನ್ನ ದಾಸರಾದ ಪ್ರವಾದಿಗಳಿಗೆ ನಾನು ಕೊಟ್ಟ ಆಜ್ಞೆಗಳು, ವಿಧಿನಿಯಮಗಳು ನಿಮ್ಮ ಪಿತೃಗಳ ಮರಣದ ನಂತರವೂ ಶಾಶ್ವತವಾಗಿ ಉಳಿದಿವೆಯಲ್ಲವೆ? ಅವರು ಪಶ್ಚಾತ್ತಾಪಪಟ್ಟು, ‘ಸೇನಾಧೀಶ್ವರ ಸರ್ವೇಶ್ವರ ನಮ್ಮ ದುರ್ಮಾರ್ಗ ಹಾಗೂ ದುಷ್ಕೃತ್ಯಗಳಿಗೆ ತಕ್ಕಂತೆ ಏನು ಮಾಡಬೇಕೆಂದು ಸಂಕಲ್ಪಿಸಿದ್ದರೋ, ಅದನ್ನು ನಮಗೆ ಮಾಡಿಯೇ ಮಾಡಿದ್ದಾರೆ’ ಎಂದು ಹೇಳಿಕೊಂಡರಲ್ಲವೆ?”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು