Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:20 - ಕನ್ನಡ ಸತ್ಯವೇದವು C.L. Bible (BSI)

20 “ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತಿದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ನನ್ನೊಳಗೆ ಕುಂದಿಹೋಗಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ಕಟಾಕ್ಷಿಸು; ನಾನು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ, ನನ್ನ ಕರುಳು ಕುದಿಯುತ್ತದೆ. ನಾನು ಕೇವಲ ದ್ರೋಹಮಾಡಿದ್ದರಿಂದ ನನ್ನ ಹೃದಯವು ಮಗಚಿಕೊಂಡಿದೆ; ಮನೆಯ ಹೊರಗೆ ಸಂಹಾರ, ಒಳಗೆ ಪ್ರಾಣಸಂಕಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 “ಯೆಹೋವನೇ, ನನ್ನ ಕಡೆ ನೋಡು, ನಾನು ತೊಂದರೆಯಲ್ಲಿದ್ದೇನೆ. ನನ್ನ ಮನಸ್ಸು ಕ್ಷೋಭೆಗೊಂಡಿದೆ. ನನ್ನ ಮನಸ್ಸಿಗೆ ತಲೆ ಕೆಳಗಾದಂತೆ ಭಾಸವಾಗುತ್ತಿದೆ. ನಾನು ದುರಹಂಕಾರಿಯಾಗಿದ್ದುದರಿಂದ ನನ್ನ ಮನಸ್ಸಿಗೆ ಹಾಗೆ ಭಾಸವಾಗುತ್ತಿದೆ. ಕಾರಣವೇನೆಂದರೆ, ನಾನು ದಂಗೆಕೋರಳಾಗಿದ್ದೆ. ಬೀದಿಗಳಲ್ಲಿ ನನ್ನ ಮಕ್ಕಳು ಖಡ್ಗಕ್ಕೆ ಆಹುತಿಯಾದರು. ಮನೆಯಲ್ಲಿಯೂ ಸಹ ಸಾವಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ ನೋಡು, ಏಕೆಂದರೆ ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನನ್ನೊಂದಿಗೆ ತಿರುಗಿಕೊಂಡಿದೆ. ಏಕೆಂದರೆ ನಾನು ಘೋರವಾಗಿ ಬಿದ್ದಿದ್ದೇನೆ. ಹೊರಗೆ ಖಡ್ಗದಿಂದ ಸಂಹಾರ, ಮನೆಯೊಳಗೆ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:20
32 ತಿಳಿವುಗಳ ಹೋಲಿಕೆ  

ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


ಮೋವಾಬಿನ ನಿಮಿತ್ತ ಮಿಡಿಯುತಿದೆಯೆನ್ನ ಮನ ದುಃಖದಿಂದ, ವೀಣೆಯ ತಂತಿಯಂತೆ ತುಡಿಯುತಿದೆಯೆನ್ನ ಅಂತರಂಗ ಕೀರ್ ಹೆರೆಷಿನ ನಿಮಿತ್ತ.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


ಕರುಳು ಕುದಿಯುತ್ತಿದೆ ಅಶಾಂತಿಯಿಂದ ಬಂದೊದಗಿದೆ ನನಗೆ ಬಾಧೆಯ ದಿನ.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


“ಹೇಗೆ ತ್ಯಜಿಸಲಿ ಎಫ್ರಯಿಮೇ, ನಿನ್ನನು ಹೇಗೆ ಕೈಬಿಡಲಿ ಇಸ್ರಯೇಲೇ, ನಿನ್ನನು. ಹೇಗೆ ಈಡುಮಾಡಲಿ ದುರ್ಗತಿಗೆ ನಿನ್ನನು ಅದ್ಮದಂತೆ, ಹೇಗೆ ನಾಶಮಾಡಲಿ ನಿನ್ನನು ಚೆಬೋಯೀಮನಂತೆ?


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.


ಸರ್ವೇಶ್ವರ ಹೀಗೆನ್ನುತ್ತಾರೆ: “ಎಫ್ರಯಿಮ್, ನನಗೆ ಪ್ರಿಯ ಪುತ್ರನಲ್ಲವೆ? ನನ್ನ ಮುದ್ದು ಮಗನಲ್ಲವೆ? ಅವನ ವಿರುದ್ಧ ನಾನು ಪದೇ ಪದೇ ಮಾತಾಡಿದ್ದರೂ ನನ್ನ ಜ್ಞಾಪಕಕ್ಕೆ ಬರುತ್ತಲೇ ಇರುತ್ತಾನೆ. ಅವನಿಗಾಗಿ ನನ್ನ ಕರುಳು ಮರುಗುತ್ತದೆ. ಅವನನ್ನು ನಿಶ್ಚಯವಾಗಿ ಕರುಣಿಸುವೆನು.”


ಊರುಬಿಟ್ಟು ಹೊರಗೆ ಹೋದರೆ ಅಲ್ಲಿ ಕಾಣಿಸುತ್ತಾರೆ ಖಡ್ಗದಿಂದ ಸತ್ತವರು. ಊರ ಒಳಗೆ ಬಂದರೆ ಅಲ್ಲಿ ಕಾಣಿಸುತ್ತಾರೆ ಕ್ಷಾಮದಿಂದ ನರಳುವವರು. ಅಪರಿಚಿತನಾಡಿಗೆ ಗಡೀಪಾರಾಗಿದ್ದಾರೆ ಪ್ರವಾದಿಗಳು ಮತ್ತು ಯಾಜಕರು’.”


ನೀನು ನಿನ್ನ ತಪ್ಪನ್ನು ಮಾತ್ರ ಒಪ್ಪಿಕೊ. ಕಂಡ ಕಡೆಯೆಲ್ಲ ಅಲೆದಾಡಿ, ಹುಲುಸಾಗಿ ಬೆಳೆದ ಪ್ರತಿಯೊಂದು ಮರದ ಕೆಳಗೆ ಅನ್ಯದೇವರುಗಳನ್ನು ಸೇರಿ, ನನ್ನ ಮಾತುಗಳನ್ನು ಕೇಳದೆ, ನಿನ್ನ ದೇವರಾದ ಸರ್ವೇಶ್ವರ ಎಂಬ ನನಗೇ ದ್ರೋಹಮಾಡಿರುವೆ ಎಂಬುದನ್ನು ಒಪ್ಪಿಕೊ.


“ನೀವಾದರೋ, ‘ನಾವು ನಿರ್ದೋಷಿಗಳು, ಸರ್ವೇಶ್ವರನ ಕೋಪ ನಮ್ಮ ಮೇಲಿಂದ ತೊಲಗಿಹೋಗಿದೆ, ಇದು ನಿಶ್ಚಯ’ ಎಂದುಕೊಂಡಿದ್ದೀರಿ. ‘ನಾವು ಪಾಪಮಾಡಿಲ್ಲ’ ಎಂದು ನೀವು ಹೇಳಿದ ಕಾರಣ ನಿಮ್ಮನ್ನು ನ್ಯಾಯತೀರ್ಪಿಗೆ ಗುರಿಮಾಡಿಯೇ ತೀರುವೆನು.


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ಹೇ ಸರ್ವೇಶ್ವರಾ, ಒಪ್ಪಿಕೊಂಡಿದ್ದೇವೆ ನಮ್ಮ ದುಷ್ಟತನವನ್ನು ನಮ್ಮ ಪೂರ್ವಜರು ಎಸಗಿದ ದುರಾಚಾರವನ್ನು ನಾವು ಮಾಡಿದ ಪಾಪ ನಿಮಗೆ ವಿರುದ್ಧವೆಂಬುದನ್ನು.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


“ನಾವು ಪಾಪಾಪರಾಧಗಳನ್ನು ಮಾಡಿ, ಕೆಟ್ಟವರಾಗಿ ನಡೆದಿದ್ದೇವೆ; ನಿಮಗೆ ವಿರುದ್ಧ ತಿರುಗಿಬಿದ್ದು, ನಿಮ್ಮ ಆಜ್ಞಾವಿಧಿಗಳನ್ನು ತೊರೆದುಬಿಟ್ಟಿದ್ದೇವೆ.


ನಮ್ಮ ಕಿರೀಟ ಬಿದ್ದುಹೋಗಿದೆ ತಲೆಮೇಲಿಂದ ಈ ಕೇಡೆಲ್ಲಾ ಬಂದೊದಗಿದೆ ನಮ್ಮ ಪಾಪದ ನಿಮಿತ್ತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು