Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:8 - ಕನ್ನಡ ಸತ್ಯವೇದವು C.L. Bible (BSI)

8 ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆರೂಸಲೇಮು ಪಾಪಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಮುಖಮುಚ್ಚಿ ದುಃಖಿಸುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆಕೆಯು ಪಾಪಮಾಡಿ ಮಾಡಿ ಅಶುದ್ಧಳಾಗಿದ್ದಾಳೆ; ಮೊದಲು ಆಕೆಯನ್ನು ಸನ್ಮಾನಿಸುತ್ತಿದ್ದವರು ಈಗ ಆಕೆಯ ಮಾನಭಂಗವನ್ನು ಕಂಡು ಹೀನೈಸುತ್ತಾರೆ; ಆಕೆಯು ಬೆನ್ನಮರೆಯಲ್ಲಿ ನರಳಾಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಜೆರುಸಲೇಮ್ ಮಹಾಪಾಪ ಮಾಡಿತು. ಜೆರುಸಲೇಮ್ ಭಯಂಕರ ಪಾಪ ಮಾಡಿದ್ದಕ್ಕಾಗಿ ಅವಳು ಹಾಳುಬಿದ್ದ ನಗರವಾದಳು. ಜನರು ಅವಳನ್ನು ಹೀನೈಸುವಂತಾಗಿದೆ. ಮೊದಲು ಅವಳನ್ನು ಗೌರವಿಸುತ್ತಿದ್ದ ಎಲ್ಲ ಜನ ಈಗ ಅವಳನ್ನು ತಿರಸ್ಕರಿಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆ ದೇಹವನ್ನು ನೋಡಿದರು. ಜೆರುಸಲೇಮ್ ನರಳಾಡುತ್ತಿದ್ದಾಳೆ. ಅವಳು ನಾಚಿಕೆಯಿಂದ ತನ್ನ ಮುಖವನ್ನು ತಗ್ಗಿಸಿಕೊಂಡಿದ್ದಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆರೂಸಲೇಮು ಘೋರ ಪಾಪಮಾಡಿದೆ. ಆದ್ದರಿಂದ ಅವಳು ಅಶುದ್ಧಳಾಗಿದ್ದಾಳೆ. ಅವಳನ್ನು ಸನ್ಮಾನಿಸಿದವರೆಲ್ಲರೂ, ಅವಳನ್ನು ಹೀನೈಸುತ್ತಾರೆ. ಏಕೆಂದರೆ ಅವರು ಅವಳ ಬೆತ್ತಲೆತನವನ್ನು ನೋಡಿದ್ದಾರೆ. ಹೌದು, ಅವಳು ನರಳುತ್ತಾ ಹಿಂದಕ್ಕೆ ತಿರುಗುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:8
33 ತಿಳಿವುಗಳ ಹೋಲಿಕೆ  

ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ನಿನ್ನ ಉಡುಗೆಯನ್ನು ನಿನ್ನ ಕಣ್ಮುಂದೆಯೇ ಕೀಳಿಸುವೆನು. ನೀನು ಅತ್ಯಾಚಾರಕ್ಕೆ ಈಡಾಗುವೆ.


ಇವು ನನಗೇಕೆ ಸಂಭವಿಸಿದವು ಎಂದು ಮನದೊಳಗೇ ನೀನು ಅಂದುಕೊಳ್ಳುವೆ. ನೀನು ಮಾಡಿದುದು ಮಹಾಪಾಪ ! ಆದ್ದರಿಂದ ನಿನ್ನ ಉಡುಗೆಯನ್ನೇ ಕೀಳಲಾಗುವುದು. ನೀನು ಅತ್ಯಾಚಾರಕ್ಕೆ ಈಡಾಗುವೆ.


ಈಗ ನನ್ನ ಬುದ್ಧಿಮಾತುಗಳನ್ನು ಕೇಳು. ನೀನು ಐಶ್ವರ್ಯವಂತನಾಗುವಂತೆ ಬೆಂಕಿಯಲ್ಲಿ ಪುಟವಿಟ್ಟ ಚಿನ್ನವನ್ನು ನನ್ನಿಂದ ಕೊಂಡುಕೋ. ಲಜ್ಜಾಸ್ಪದವಾದ ನಿನ್ನ ಬೆತ್ತಲೆಯನ್ನು ಮುಚ್ಚಿಕೊಳ್ಳಲು ಶ್ವೇತವಸ್ತ್ರಗಳನ್ನು ನನ್ನಿಂದ ಕ್ರಯಕ್ಕೆ ಕೊಂಡುಕೊಂಡು ಅವುಗಳನ್ನು ಧರಿಸಿಕೋ. ನಿನಗೆ ಕಣ್ಣು ಕಾಣಿಸುವಂತೆ ಲೇಪನವನ್ನು ನನ್ನಿಂದ ಬೆಲೆಗೆ ತೆಗೆದುಕೊಂಡು ನಿನ್ನ ಕಣ್ಣುಗಳಿಗೆ ಹಚ್ಚಿಕೋ.


ಅವಳ ನಲ್ಲರ ಕಣ್ಣೆದುರಿಗೆ ಅವಳ ಲಜ್ಜೆಗೇಡಿತನವನ್ನು ಬಯಲುಮಾಡುವೆನು. ಅವಳನ್ನು ನನ್ನ ಕೈಯಿಂದ ಯಾರೂ ಬಿಡಿಸರು.


ಇಲ್ಲವಾದರೆ ಅವಳನ್ನು ನಗ್ನವಾಗಿಸಿ (ಹುಟ್ಟಿದಾಗ ಇದ್ದಂತೆ) ಬೆತ್ತಲೆಯಾಗಿ ನಿಲ್ಲಿಸುವೆನು. ಅವಳನ್ನು ಬೆಂಗಾಡನ್ನಾಗಿ ಮಾಡಿ, ಮರುಭೂಮಿಯಂತೆ ಮಾರ್ಪಡಿಸಿ, ನೀರಡಿಕೆಯಿಂದ ಸಾಯುವಂತೆ ಮಾಡುವೆನು.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ನಾನು ಈ ಹೆಂಗಸರ ದಂಡನೆಗಾಗಿ ಸಭೆಯನ್ನು ಸೇರಿಸುವೆನು. ಇವರನ್ನು ಸೂರೆಗೆ ಒಳಗಾಗಿಸಿ ಎಲ್ಲರಿಗೂ ಭಯಾಸ್ಪದವಾಗುವಂತೆ ಮಾಡುವೆನು.


ಅವರ ಕೈಗೆ ನಿನ್ನನ್ನು ನಾನು ಒಪ್ಪಿಸುವೆನು. ಅವರು ನಿನ್ನಲ್ಲಿ ಹಗೆ ತೀರಿಸಿಕೊಳ್ಳುವರು. ನೀನು ದುಡಿದದ್ದನ್ನೆಲ್ಲಾ ಅಪಹರಿಸಿ, ನಿನ್ನನ್ನು ಬಟ್ಟಬರಿದುಮಾಡಿ ಬಿಟ್ಟುಬಿಡುವರು; ಹೀಗೆ ನಾಚಿಕೆಗೀಡಾದ ನಿನ್ನ ಹಾದರವು, ಹೌದು, ನಿನ್ನ ಲಂಪಟತನ ಹಾಗು ಸೂಳೆತನ ಬಯಲಿಗೆ ಬರುವುವು.


‘ಊಚ’ ಮತ್ತು ‘ಎದೋಮ್’ ನಾರೀಮಣಿಗಳೇ, ಸಂತೋಷಿಸಿ ಉಲ್ಲಾಸಿಸುತ್ತಿರುವಿರಿ ಅಲ್ಲವೇ? ಆದರೆ ಖಂಡಿತ ಬರುವುದು ಕಹಿಪಾನದ ಪಾತ್ರೆ ನಿಮ್ಮ ಪಾಲಿಗೆ ಅಮಲೇರಿ ಬೆತ್ತಲೆಯಾಗುವ ಗತಿ ಬಂದೇಬರುವುದು ನಿಮಗೆ!


ತಲೆಯ ಮೇಲೆ ಧೂಳನ್ನು ತೂರಿಕೊಂಡು ಗೋಣಿತಟ್ಟನ್ನು ಸೊಂಟಕ್ಕೆ ಸುತ್ತಿಕೊಂಡು ಕುಕ್ಕರಿಸಿಹರು ಸಿಯೋನ್ ನಗರಿಯ ಪ್ರಮುಖರು ತಲೆ ತಗ್ಗಿಸಿಹರು ಜೆರುಸಲೇಮಿನ ಯುವತಿಯರು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದು ಇದು - ನೀವು ನನ್ನ ಮಾತನ್ನು ಕೇಳಲಿಲ್ಲ, ನಿಮ್ಮ ಸಹೋದರರಿಗೂ ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ. ಇಗೋ ಸರ್ವೇಶ್ವರನಾದ ನನ್ನ ನುಡಿ: ಖಡ್ಗ-ವ್ಯಾಧಿ-ಕ್ಷಾಮ ಇವುಗಳಿಗೆ ನೀವು ಗುರಿ ಆಗುವಂತೆ ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ. ಲೋಕದ ಸಮಸ್ತ ರಾಜ್ಯಗಳ ಕಣ್ಣಿಗೆ ನೀವು ಭಯಾಸ್ಪದವಾಗುವಂತೆ ಮಾಡುವೆನು.


ಅವರ ಕೇಡಿಗಾಗಿ ನಾನು ಅವರನ್ನು ಜಗದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗುವ ಸ್ಥಳಗಳಲ್ಲೆಲ್ಲ ಅವರು ಕಟ್ಟುಗಾದೆಗೆ, ನಿಂದೆ ಪರಿಹಾಸ್ಯಕ್ಕೆ, ಶಾಪತಾಪಕ್ಕೆ ಗುರಿಯಾಗುವರು.


ಈ ಜನರನ್ನು ಜಗದ ರಾಜ್ಯಗಳೆಲ್ಲವು ಭಯೋತ್ಪಾದಕರೆಂದು ಭಾವಿಸುವಂತೆ ಮಾಡುವೆನು. ಹಿಜ್ಕೀಯನ ಮಗನು ಹಾಗು ಜುದೇಯದ ಅರಸನು ಆದ ಮನಸ್ಸೆಯು ಜೆರುಸಲೇಮಿನಲ್ಲಿ ನಡೆಸಿದ ದುಷ್ಕೃತ್ಯಕ್ಕೆ ಇದು ಪ್ರತೀಕಾರವಾಗಿರುವುದು.”


ಅವರೆಲ್ಲರು ಕೇವಲ ದ್ರೋಹಿಗಳು, ಚಾಡಿ ಹೇಳುತ್ತಾ ತಿರುಗಾಡುವವರು. ತಾಮ್ರ, ಕಬ್ಬಿಣಕ್ಕೆ ಸಮಾನರು, ಎಲ್ಲರೂ ಕೇಡಿಗರು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ಮುಯ್ಯಿ ತೀರಿಸುವೆನು ಯಾರನ್ನೂ ಕರುಣಿಸದೆ ಬೀದಿಪಾಲಾಗುವೆ ನೀನು ಲಜ್ಜೆಗೆಟ್ಟು, ಮಾನವಿಲ್ಲದೆ.”


ಆಗ ಅವರಿಗೆ, ‘ಈ ನಾಡಿನವರು ತಮ್ಮ ಪೂರ್ವಜರನ್ನು ಈಜಿಪ್ಟಿನಿಂದ ಬರಮಾಡಿದ ದೇವರಾದ ಸರ್ವೇಶ್ವರನನ್ನು ಬಿಟ್ಟು ಅನ್ಯದೇವತೆಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಆರಾಧಿಸಿದ್ದರಿಂದಲೇ ಸರ್ವೇಶ್ವರ ಈ ಎಲ್ಲಾ ಆಪತ್ತು-ವಿಪತ್ತುಗಳನ್ನು ಬರಮಾಡಿದ್ದಾರೆ’ ಎಂಬ ಉತ್ತರಸಿಕ್ಕುವುದು,” ಎಂದರು.


ನಿನ್ನ ಗೋತ್ರದವರೂ ಸಂತಾನದವರೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಯೇಲರ ದೇವರಾದ ಸರ್ವೇಶ್ವರನೆಂಬ ನಾನು ಈಗ ತಿಳಿಸುವುದನ್ನು ಕೇಳು: ಇನ್ನು ಇದೆಲ್ಲ ನನ್ನಿಂದ ದೂರ ತೊಲಗಲಿ; ನನ್ನನ್ನು ಸನ್ಮಾನಿಸುವವನನ್ನು ನಾನು ಸನ್ಮಾನಿಸುವೆನು; ನನ್ನನ್ನು ಉಪೇಕ್ಷಿಸುವವನನ್ನು ನಾನು ತಿರಸ್ಕರಿಸುವೆನು.


ನಾನು ಕೊಟ್ಟ ನಾಡಿನಿಂದ ಇಸ್ರಯೇಲರನ್ನು ತೆಗೆದುಹಾಕುವೆನು; ನನ್ನ ಹೆಸರಿಗಾಗಿ ಪ್ರತಿಷ್ಠಿಸಿಕೊಂಡ ಆಲಯವನ್ನು ನಿರಾಕರಿಸಿಬಿಡುವೆನು. ಇಸ್ರಯೇಲರು ಎಲ್ಲಾ ಜನಾಂಗಗಳವರ ಲಾವಣಿಗೂ ನಿಂದೆಪರಿಹಾಸ್ಯಕ್ಕೂ ಗುರಿಯಾಗುವರು.


ಕೂಡಲೆ ಅವರಿಬ್ಬರ ಕಣ್ಣುಗಳು ತೆರೆದವು. ತಾವು ಬೆತ್ತಲೆ ಆಗಿದ್ದೇವೆಂದು ತಿಳಿದು ಅವರು ಅಂಜೂರದ ಎಲೆಗಳನ್ನು ಹೊಲಿದು ಉಟ್ಟುಕೊಂಡರು.


ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ಆದರೆ ನೀವಾಗಲಿ, ನಿಮ್ಮ ಮಕ್ಕಳಾಗಲಿ, ನನ್ನ ಆಜ್ಞಾವಿಧಿಗಳನ್ನು ಕೈಗೊಳ್ಳದೆ, ನನ್ನನ್ನು ಬಿಟ್ಟು ಅನ್ಯದೇವತೆಗಳನ್ನು ಹಿಂಬಾಲಿಸಿ, ಅವುಗಳಿಗೆ ಕೈಮುಗಿದರೆ,


ಅವರು ಈ ನಾಡನ್ನು ಸೇರಿದರು, ಅದನ್ನು ಅನುಭವಿಸಿದರು. ಆದರೆ ನಿಮ್ಮ ಮಾತಿಗೆ ಕಿವಿಗೊಡಲಿಲ್ಲ. ನಿಮ್ಮ ಧರ್ಮಶಾಸ್ತ್ರದ ಅನುಸಾರ ನಡೆಯಲಿಲ್ಲ. ನೀವು ಆಜ್ಞಾಪಿಸಿದವುಗಳಲ್ಲಿ ಒಂದನ್ನೂ ಮಾಡಲಿಲ್ಲ. ಆದಕಾರಣ ನೀವು ಈ ಕೇಡನ್ನೆಲ್ಲ ಅವರ ಮೇಲೆ ಬರಮಾಡಿದ್ದೀರಿ.


ಇದಲ್ಲದೆ, ಇಸ್ರಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿಹೋದರೆಂದು ಮತ್ತು ಅವರು ನನಗೆ ದ್ರೋಹ ಮಾಡಿದ್ದರಿಂದಲೆ ನಾನು ಅವರಿಗೆ ವಿಮುಖನಾಗಿ ಅವರೆಲ್ಲರು ಖಡ್ಗಹತರಾಗುವಂತೆ ಅವರನ್ನು ಶತ್ರುವಶಮಾಡಿದೆನೆಂದು ಜನಾಂಗಗಳಿಗೆ ಗೊತ್ತಾಗುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು