Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 1:9 - ಕನ್ನಡ ಸತ್ಯವೇದವು C.L. Bible (BSI)

9 ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ [ಎಂದು ಮೊರೆಯಿಡುತ್ತಾಳೆ].

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಜೆರುಸಲೇಮಿನ ಲಂಗಗಳು ಮಲಿನವಾಗಿದ್ದವು. ಅವಳಿಗೆ ಮುಂದೆ ಏನಾಗುವದೆಂಬುದರ ಬಗ್ಗೆ ಅವಳು ಯೋಚಿಸಲಿಲ್ಲ. ಅವಳ ಪತನ ವಿಸ್ಮಯಕಾರಿಯಾಗಿತ್ತು. ಅವಳನ್ನು ಸಂತೈಸಲು ಯಾರೂ ಇರಲಿಲ್ಲ. “ಅಯ್ಯೋ, ಯೆಹೋವನೇ, ನನಗೆಷ್ಟು ನೋವಾಗಿದೆ. ನೋಡು! ನನ್ನ ಶತ್ರು ತನ್ನನ್ನು ಎಷ್ಟು ದೊಡ್ಡವನೆಂದು ಭಾವಿಸಿಕೊಂಡಿದ್ದಾನೆ.” ಎಂದು ಆಕೆ ಹೇಳುತ್ತಾಳೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವಳ ಅಶುದ್ಧವು ಅವಳ ನೆರಿಗೆಗೆ ಅಂಟಿಕೊಂಡಿದೆ. ಅವಳು ತನ್ನ ಭವಿಷ್ಯವನ್ನು ಜ್ಞಾಪಕಮಾಡಿಕೊಳ್ಳುವುದಿಲ್ಲ. ಆದ್ದರಿಂದ ಅವಳು ಭಯಂಕರವಾಗಿ ಇಳಿದು ಬಂದಳು. ಅವಳನ್ನು ಆದರಿಸುವವರು ಯಾರೂ ಇಲ್ಲ. “ಓ ಯೆಹೋವ ದೇವರೇ, ನನ್ನ ಸಂಕಟವನ್ನು ನೋಡಿರಿ, ಶತ್ರುವು ಜಯಿಸಿದ್ದಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 1:9
46 ತಿಳಿವುಗಳ ಹೋಲಿಕೆ  

ಜ್ಞಾನವಿದ್ದಿದ್ದರೆ ಗ್ರಹಿಸುತ್ತಿದ್ದರು ಈ ಸಂಗತಿಗಳನು ತಿಳಿಯುತ್ತಿದ್ದರು, ಅಂತ್ಯದೊಳು ತಮಗಾಗುವ ದುರವಸ್ಥೆಯನು.


ನನ್ನ ಜನರ ಹಿಂಸೆಬಾಧೆಗಳನ್ನು ಗಮನಿಸದೆ ಬರಲಿರುವ ಪರಿಣಾಮವನ್ನು ನೆನೆಸಿಕೊಳ್ಳದೆ ನೀನೇ ಶಾಶ್ವತ ರಾಣಿಯೆಂದು ಮೆರೆದೆ.


ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನೋಡೆನ್ನ ಬಾಧೆ ಬವಣೆಗಳನು I ತೊಡೆದು ಹಾಕೆನ್ನ ಪಾಪಗಳನು II


ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ಜನರನ್ನು ದೂಷಿಸಿ ದರ್ಪದ ಮಾತುಗಳನ್ನು ಆಡಿದ್ದರಿಂದಲೆ ಈ ಪ್ರಾಂತ್ಯಗಳ ಗರ್ವಿಷ್ಠ ಜನರಿಗೆ ಶಿಕ್ಷೆಯಾಗುವುದು.


“ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ.


ಇದಲ್ಲದೆ, ನಿರ್ದೋಷಿಗಳಾದ ದೀನದಲಿತರ ಪ್ರಾಣರಕ್ತ ನಿಮ್ಮ ಬಟ್ಟೆಗೆ ಅಂಟಿಕೊಂಡಿದೆ! ‘ಇವರು ಕನ್ನ ಕೊರೆಯುವುದನ್ನು ಕಂಡೆವು’ ಎಂದು ನೀವು ನೆವ ಹೇಳುವಂತಿಲ್ಲ. ನಿಮ್ಮ ಈ ಎಲ್ಲ ದುರಭ್ಯಾಸಗಳ ನಿಮಿತ್ತ ದಂಡಿಸುವೆನು.


ಜೆರುಸಲೇಮ್ ನಗರ ಹಾಳಾಯಿತು. ಜುದೇಯ ನಾಡು ಬಿದ್ದುಹೋಯಿತು. ಜನರ ನಡೆನುಡಿಗಳೆಲ್ಲ ಸ್ವಾಮಿಗೆ ವಿರುದ್ಧವಾದವು. ಸ್ವಾಮಿಯ ಮಹಿಮಾ ಸಾನ್ನಿಧ್ಯಕ್ಕೆ ಪ್ರತೀಕೂಲವಾದವು.


ನನ್ನ ಕಷ್ಟವ ನೋಡಿ ಮುಕ್ತಗೊಳಿಸೆನ್ನನು I ಮರೆತಿಲ್ಲ ನಾನು ನಿನ್ನ ಧರ್ಮಶಾಸ್ತ್ರವನು II


ನ್ಯಾಯತೀರ್ಪಿನ ಕಾಲವು ಬಂದಿದೆ. ಮೊತ್ತಮೊದಲು ದೇವರ ಸ್ವಂತಜನರೇ ಆ ತೀರ್ಪಿಗೆ ಗುರಿಯಾಗುವರು. ದೇವಜನರಾದ ನಾವೇ ಅದಕ್ಕೆ ಮೊದಲು ಒಳಗಾಗುವುದಾದರೆ ದೇವರ ಶುಭಸಂದೇಶದಲ್ಲಿ ವಿಶ್ವಾಸವಿಡದವರ ಗತಿಯಾದರೂ ಏನು?


ಅನೇಕ ಯೆಹೂದ್ಯರು ಮಾರ್ತಳನ್ನೂ ಮರಿಯಳನ್ನೂ ಕಂಡು ಅವರ ಸೋದರನ ಮರಣಕ್ಕಾಗಿ ಸಂತಾಪ ಸೂಚಿಸಲು ಬಂದಿದ್ದರು.


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಅಕಟಕಟಾ! ಎಷ್ಟು ಮಸುಕಾಗಿದೆ ಬಂಗಾರ ಎಷ್ಟು ಕಾಂತಿಹೀನವಾಗಿಬಿಟ್ಟಿವೆ ಅಪ್ಪಟ ಚಿನ್ನ! ಪವಿತ್ರಾಲಯದ ಕಲ್ಲುಗಳೂ ಬಿದ್ದಿವೆ ಚೆಲ್ಲಾಪಿಲ್ಲಿಯಾಗಿ ಬೀದಿಬೀದಿಗಳ ಬದಿಯಲ್ಲಿ ರಾಶಿರಾಶಿಯಾಗಿ!


ಎಲೌ ಜೆರುಸಲೇಮ್ ಯುವತಿಯೇ, ನಿನಗೆ ಏನು ಹೇಳಲಿ? ನಿನ್ನನ್ನು ಯಾವುದಕ್ಕೆ ಹೋಲಿಸಲಿ? ಸಿಯೋನ್ ಕನ್ಯೆಯೇ, ನಿನ್ನನ್ನು ಹೇಗೆ ಸಂತೈಸಲಿ? ಸಂತೈಸುವ ಸಾಮತಿಯನ್ನು ಎಲ್ಲಿಂದ ತರಲಿ? ನಿನಗೊದಗಿರುವ ನಾಶ ಸಾಗರದಂತೆ ಅಪಾರ ನಿನ್ನನ್ನು ಸ್ವಸ್ಥಗೊಳಿಸಲು ಯಾರಿಂದ ತಾನೆ ಸಾಧ್ಯ?


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


“ಬಿಲ್ಲುಬಾಣಗಾರರನ್ನೆಲ್ಲ ಬಾಬಿಲೋನಿಗೆ ಕರೆಯಿರಿ. ಅದರ ಸುತ್ತಲು ದಂಡಿಳಿಸಿರಿ. ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ. ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ. ಏಕೆಂದರೆ ಗರ್ವದಿಂದ ಅದು ಇಸ್ರಯೇಲರ ಪರಮ ಪಾವನನಾದ ಸರ್ವೇಶ್ವರನನ್ನು ಅಸಡ್ಡೆಮಾಡಿದೆ.


ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.


ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಕಾಮುಕತನವನ್ನು, ಕೀಳಾದ ನಿನ್ನ ಸೂಳೆಗಾರಿಕೆಯನ್ನು, ಗುಡ್ಡೆ, ಕಣಿವೆಗಳಲ್ಲಿ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ. ಜೆರುಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲಬೇಕು?”


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


“ಶೋಷಣೆಗೆ, ಬಿರುಗಾಳಿಗೆ, ನಿರ್ಗತಿಗೆ ಗುರಿಯಾದವಳೇ, ನಿರ್ಮಿಸುವೆ ನಿನ್ನನು ವಜ್ರವೈಡೂರ್ಯಗಳಿಂದ ಅಸ್ತಿವಾರ ಹಾಕುವೆ ನಿನಗೆ ನೀಲಮಣಿಗಳಿಂದ.


ಜೆರುಸಲೇಮಿನೊಡನೆ ಪ್ರೀತಿಯಿಂದ ಮಾತನಾಡಿ; ಅದರ ಊಳಿಗತನ ಮುಗಿಯಿತೆನ್ನಿ; ತಕ್ಕ ಪ್ರಾಯಶ್ಚಿತ್ತವಾಗಿದೆ ಅದು ಗೈದ ದೋಷಕೆ ಸರ್ವೇಶ್ವರ ಸ್ವಾಮಿಯಿಂದಲೇ ಅದರ ಎಲ್ಲಾ ಪಾಪಕೃತ್ಯಗಳಿಗೆ ಇಮ್ಮಡಿ ಶಿಕ್ಷೆಯಾಗಿದೆ ಎಂದು ಕೂಗಿ ಹೇಳಿ ಆ ನಗರಿಗೆ.”


ನನ್ನ ವಿರುದ್ಧ, ನಿನಗಿರುವ ಕ್ರೋಧ, ಗರ್ವ ತಿಳಿದಿದೆ ನನಗೆ, ಎಂದೇ ಹಾಕುವೆ ಮೂಗಿಗೆ ದಾರ, ಬಾಯಿಗೆ ಕಡಿವಾಣ. ನೀ ಬಂದ ದಾರಿಯಿಂದಲೇ ಅಟ್ಟುವೆ ನಿನ್ನನ್ನು ಹಿಂದಕ್ಕೆ’.”


ನೀನು ನಿಂದಿಸಿ ದೂಷಿಸುತ್ತಿರುವುದು ಯಾರನ್ನು? ಕಿರಿಚಿ ಹೀಯಾಳಿಸುತ್ತಿರುವುದು ಯಾರನ್ನು? ಗರ್ವದಿಂದ ದುರುಗುಟ್ಟಿ ನೋಡಿದುದು ಯಾರನ್ನು? ಇಸ್ರಯೇಲರ ಪರಮಪಾವನ ಸ್ವಾಮಿಯನ್ನಲ್ಲವೇನು?


ಸರ್ವೇಶ್ವರಾ, ಕಿವಿಗೊಟ್ಟು ಕೇಳಿ; ಸರ್ವೇಶ್ವರಾ, ಕಣ್ಣಿಟ್ಟು ನೋಡಿ. ಸನ್ಹೇರೀಬನು ಜೀವಸ್ವರೂಪ ದೇವರಾದ ನಿಮ್ಮನ್ನು ನಿಂದಿಸುವುದಕ್ಕೋಸ್ಕರ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ಮನಸ್ಸಿಗೆ ತಂದುಕೊಳ್ಳಿ.


ಅಸ್ಸೀರಿಯದ ಅರಸನಿಂದ ಬಂದಿರುವ ಸೇನಾಪತಿ ಆಡಿದ ಮಾತುಗಳನ್ನು ನಿನ್ನ ದೇವರಾದ ಸರ್ವೇಶ್ವರ ಕೇಳಿದ್ದಾರೆ. ಆ ಸೇನಾಪತಿ ತನ್ನ ಒಡೆಯನ ಹೆಸರಿನಲ್ಲಿ ಜೀವಸ್ವರೂಪರಾದ ಆ ದೇವರನ್ನು ದೂಷಿಸಿದ್ದಾನೆ. ಅವನಿಗೆ ತಕ್ಕ ದಂಡನೆಯಾಗಬೇಕು. ಹೀಗಿರಲು ಅಳಿದುಳಿದಿರುವ ಜನರಿಗಾಗಿ ದೇವರನ್ನು ನೀನು ಪ್ರಾರ್ಥನೆ ಮಾಡಬೇಕೆಂದು ಹಿಜ್ಕೀಯ ಕೇಳಿಕೊಂಡಿದ್ದಾನೆ,’ ಎಂದು ತಿಳಿಸಿ.”


ನೆರವೇರಿಸಬೇಡ ದುರುಳರ ಕೋರಿಕೆಯನು I ಕೈಗೂಡಿಸಬೇಡ ಪ್ರಭು, ಅವರ ಕುಯುಕ್ತಿಯನು II


ಓ ನಮ್ಮ ದೇವರೇ, ನೀವು ಮಹೋನ್ನತರು, ಶಕ್ತಿಸಾಮರ್ಥ್ಯರು, ಭಯಭಕ್ತಿಗೆ ಪಾತ್ರರು, ಕೃಪಾವಾಗ್ದಾನಗಳ ನೆರವೇರಿಸುವವರು. ಅಲ್ಪವೆಂದೆಣಿಸಬೇಡಿ - ನಮ್ಮ ರಾಜರು, ರಾಜ್ಯಪಾಲರು. ಯಾಜಕರು, ಪ್ರವಾದಿಗಳು, ಹಿರಿಯರು, ಪ್ರಜೆಗಳು ಸಹಿಸಬೇಕಾಗಿಬಂದಿರುವ ಈ ಕಷ್ಟಕಾರ್ಪಣ್ಯಗಳನು.


“ಇಸ್ರಯೇಲರು ಘೋರಕಷ್ಟವನ್ನು ಅನುಭವಿಸುತ್ತಿರುತ್ತಾರೆ. ಅವರಲ್ಲಿದ್ದ ಸ್ವತಂತ್ರರೂ ಪರತಂತ್ರರೂ ನಾಶವಾಗಿದ್ದಾರೆ, ಅವರನ್ನು ರಕ್ಷಿಸುವವನು ಒಬ್ಬನೂ ಇಲ್ಲ,” ಎಂಬುದನ್ನು ಸರ್ವೇಶ್ವರ ನೋಡಿದರು.


ಬಹುಶಃ ಸರ್ವೇಶ್ವರ ನನ್ನ ಕಷ್ಟವನ್ನು ನೋಡಿ ಈ ದಿನ ಶಾಪಕ್ಕೆ ಬದಲಾಗಿ ನನಗೆ ಶುಭವನ್ನು ಅನುಗ್ರಹಿಸಿಯಾರು,” ಎಂದು ಹೇಳಿದನು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆದರೆ ತಪ್ಪು ತಿಳಿಯುತ್ತಿದ್ದರು ಅವರ ವಿರೋಧಿಗಳು; ‘ಇದಾಯಿತು ನಮ್ಮ ಶಕ್ತಿಯಿಂದ, ಸರ್ವೇಶ್ವರನಿಂದಲ್ಲ’ವೆಂದುಕೊಂಡು ಈ ಕಾರಣ ಹಿಂತೆಗೆದುಕೊಂಡೆನು ನನ್ನ ನಿಗದಿನಿರ್ಣಯವನು.


ಆಗ ನಾವು ನಮ್ಮ ಪಿತೃಗಳ ದೇವರಾದ ಸರ್ವೇಶ್ವರನಿಗೆ ಮೊರೆಯಿಟ್ಟೆವು; ಅವರು ಆಲಿಸಿ ನಮ್ಮ ದುರವಸ್ಥೆಯನ್ನೂ ಕಷ್ಟ ಉಪದ್ರವಗಳನ್ನೂ ನೋಡಿ,


ಸರ್ವೇಶ್ವರ ಸ್ವಾಮಿ ತಮ್ಮನ್ನು ಭೇಟಿಮಾಡಿ ತಮ್ಮ ದುರವಸ್ಥೆಯನ್ನು ಮನಸ್ಸಿಗೆ ತಂದುಕೊಂಡಿದ್ದಾರೆಂದು ತಿಳಿದ ಆ ಇಸ್ರಯೇಲರು ತಲೆಬಾಗಿ ಆರಾಧಿಸಿದರು.


ಈಜಿಪ್ಟಿನಲ್ಲಿ ನಿಮಗುಂಟಾಗಿ ಇರುವ ಸಂಕಷ್ಟಗಳಿಂದ ನಿಮ್ಮನ್ನು ಪಾರುಮಾಡಿ ಹಾಲೂ ಜೇನೂ ಹರಿಯುವ ನಾಡಿಗೆ, ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜೀಯರು, ಹಿವ್ವಿಯರು ಹಾಗು ಯೆಬೂಸಿಯರು ವಾಸವಾಗಿರುವ ನಾಡಿಗೆ ಬರಮಾಡಬೇಕೆಂದು ತೀರ್ಮಾನಿಸಿದ್ದೇನೆ’ ಎಂದು ತಿಳಿಸು.


ಆಗ ಸರ್ವೇಶ್ವರ, “ಈಜಿಪ್ಟಿನಲ್ಲಿರುವ ನನ್ನ ಜನರ ದುರವಸ್ಥೆಯನ್ನು ನಾನು ಕಣ್ಣಾರೆ ನೋಡಿದ್ದೇನೆ. ಬಿಟ್ಟೀ ಕೆಲಸ ಮಾಡಿಸಿಕೊಳ್ಳುವವರ ಬಗ್ಗೆ ಅವರು ಇಟ್ಟ ಮೊರೆ ನನಗೆ ಕೇಳಿಸಿದೆ. ಅವರ ಕಷ್ಟದುಃಖವನ್ನೆಲ್ಲಾ ನಾನು ಬಲ್ಲೆ.


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಬಂದೊದಗಿವೆ ಇಮ್ಮಡಿ ಬಾಧೆ ನಿನಗೆ ಪ್ರಲಾಪಿಸಿ ಗೋಳಿಡುವವರಾರು ನಿನ್ನೊಂದಿಗೆ? ನಾಡು ಹಾಳುಪಾಳಾಗಿದೆ, ತುತ್ತಾಗಿದೆ ಪ್ರಜೆ ಕ್ಷಾಮಕ್ಷೋಭೆಗೆ; ನಿನ್ನನು ಸಂತೈಸುವುದಾದರು ಹೇಗೆ?


ಹೇ, ಸರ್ವೇಶ್ವರಾ, ನಮಗೊದಗಿರುವ ದುರ್ಗತಿಯನ್ನು ನೆನೆಸಿಕೊ ನಾವು ಸಹಿಸುತ್ತಿರುವ ನಿಂದೆ ಅವಮಾನಗಳನ್ನು ಗಮನಕ್ಕೆ ತಂದುಕೋ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು