Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:11 - ಕನ್ನಡ ಸತ್ಯವೇದವು C.L. Bible (BSI)

11 ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಕಣ್ಣೀರು ಸುರಿಸಿ ಸುರಿಸಿ ನನ್ನ ಕಣ್ಣು ಇಂಗಿ ಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಕನ್ಯೆಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದುದರಿಂದ ನನ್ನ ಕರುಳು ಕರಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀರು ಸುರಿದು ಸುರಿದು ನನ್ನ ಕಣ್ಣು ಇಂಗಿಹೋಗಿದೆ, ನನ್ನ ಕರುಳು ಕುದಿಯುತ್ತದೆ, ನನ್ನ ಜನವೆಂಬ ಯುವತಿಯು ಹಾಳಾಗಿ ಮಕ್ಕಳುಮರಿಗಳು ಪಟ್ಟಣದ ಚೌಕಗಳಲ್ಲಿ ಮೂರ್ಛೆ ಹೋದದರಿಂದ ನನ್ನ ಕರುಳು ಕರಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಕಂಬನಿ ಸುರಿದು ನನ್ನ ಕಣ್ಣುಗಳು ಇಂಗಿಹೋಗಿವೆ. ನನ್ನ ಕರುಳು ತಳಮಳಗೊಂಡಿದೆ. ನನ್ನ ಹೃದಯವನ್ನು ನೆಲಕ್ಕೆ ಚೆಲ್ಲಲಾಗಿದೆ ಎಂದೆನಿಸುತ್ತಿದೆ. ನನ್ನ ಜನರ ವಿನಾಶದಿಂದ ನನಗೆ ಹೀಗಾಗಿದೆ. ಮಕ್ಕಳು ಮತ್ತು ಶಿಶುಗಳು ಮೂರ್ಛೆ ಹೋಗುತ್ತಿದ್ದಾರೆ. ಅವರು ನಗರದ ಕೇಂದ್ರ ಸ್ಥಳಗಳಲ್ಲಿ (ಚೌಕಗಳಲ್ಲಿ) ಮೂರ್ಛೆಹೋಗುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಕಣ್ಣುಗಳು ಕಣ್ಣೀರಿನಿಂದ ಕುಂದಿ ಹೋಗುತ್ತವೆ. ನನ್ನ ಆತ್ಮವು ಕಳವಳಗೊಂಡಿದೆ. ನನ್ನ ಹೃದಯವು ನೆಲದ ಮೇಲೆ ಹರಡಿದೆ. ಏಕೆಂದರೆ ನನ್ನ ಜನರು ನಾಶವಾಗಿದ್ದಾರೆ. ಮಕ್ಕಳೂ ಶಿಶುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:11
26 ತಿಳಿವುಗಳ ಹೋಲಿಕೆ  

“ಹೇ, ಸರ್ವೇಶ್ವರಾ, ಕಟಾಕ್ಷಿಸು; ನಾ ಇಕ್ಕಟ್ಟಿಗೆ ಸಿಕ್ಕಿಕೊಂಡಿರುವೆ. ಕರುಳು ಕುದಿಯುತ್ತಿದೆ, ಹೃದಯ ವಿಮುಖವಾಗಿದೆ ನಾ ಗೈದ ದ್ರೋಹಕ್ಕೆ, ಕತ್ತಿಗೆ ತುತ್ತಾಗುತ್ತಿರುವೆ ಹೊರಗೆ ಪ್ರಾಣಸಂಕಟಕ್ಕೆ ಗುರಿಯಾಗಿರುವೆ ಒಳಗೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ಮುತ್ತಿಕೊಂಡಿವೆ ನನ್ನನು ಆತನ ಬಾಣಗಳು ನಿರ್ದಯೆಯಿಂದ ಅಂತರಂಗವನ್ನು ಇರಿಯುತ್ತಿಹನು ನೆಲದ ಮೇಲೆ ನನ್ನ ಪಿತ್ತವನು ಸುರಿಸುತ್ತಿಹನು.


ಅಯ್ಯೋ, ನನ್ನ ಕರುಳು ಯಾತನೆಯಿಂದ ಕಿತ್ತುಬರುವಂತಿದೆ. ಅಕಟಾ ! ನನ್ನ ಗುಂಡಿಗೆಯ ಪಕ್ಕೆಗಳು ಸೀಳುವಂತಿದೆ, ಹೃದಯ ತಳಮಳಗೊಂಡಿದೆ ! ಇನ್ನು ಬಾಯಿಮುಚ್ಚಿಕೊಂಡಿರಲು ನನ್ನಿಂದಾಗದು; ನನ್ನ ಮನವೇ, ಕಾಳಗದ ಕಹಳೆಯನ್ನೂ ಯುದ್ಧದ ಕೋಲಾಹಲವನ್ನೂ ಕೇಳುತ್ತಿರುವೆ, ಅಲ್ಲವೆ?


“ಆದ್ದರಿಂದ ನನ್ನ ಕಡೆ ನೋಡಬೇಡಿ. ನನ್ನನ್ನು ಸಂತೈಸಲು ಪ್ರಯತ್ನಿಸಬೇಡಿ. ಸತ್ತುಹೋದ ನನ್ನ ಜನರಿಗಾಗಿ ಕಣ್ಣೀರು ಸುರಿಸುತ್ತಿರುವೆನು” ಎಂದೆ ನಾನು.


ಕ್ಷಯಿಸುತ್ತಿರುವೆ ನಾ ಚೆಲ್ಲಿದ ನೀರಿನಂತೆ I ಎಲುಬುಗಳು ಅಲುಗಿವೆ, ಎದೆ ಕರಗಿದೆ ಮೇಣದಂತೆ II


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ಕಾಲವೊಂದು ಬರುವುದು; ಆಗ ಜನರು, ‘ಬಂಜೆಯರೇ ಭಾಗ್ಯವಂತರು! ಹೆರದವಳೇ, ಹಾಲೂಡಿಸದವಳೇ ಧನ್ಯಳು!’ ಎನ್ನುವರು.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ಇದೋ, ದೂರ ನಾಡಿನಿಂದ ಕೇಳಿಬರುತ್ತಿದೆ ನನ್ನ ಪ್ರಜೆಯೆಂಬಾಕೆಯ ಈ ಮೊರೆ : “ಸಿಯೋನಿನಲ್ಲಿ ಇನ್ನು ಸರ್ವೇಶ್ವರನಿಲ್ಲವೊ? ಅದರ ರಾಜನು ಅಲ್ಲಿ ವಾಸವಾಗಿಲ್ಲವೊ?” ಅದಕ್ಕೆ ಸರ್ವೇಶ್ವರ : “ಇವರು ತಮ್ಮ ವಿಗ್ರಹಾರಾಧನೆಯಿಂದ ಅನ್ಯದೇವತೆಗಳ ಶೂನ್ಯರೂಪಗಳಿಂದ ನನ್ನನ್ನು ಕೆಣಕಿದ್ದೇಕೆ?”


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II


ದುಃಖ ತಾಳಲಾಗದೆ ದೀರ್ಘಕಾಲ ಅತ್ತು ಗೋಳಾಡಿದರು.


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಕರುಳು ಕುದಿಯುತ್ತಿದೆ ಅಶಾಂತಿಯಿಂದ ಬಂದೊದಗಿದೆ ನನಗೆ ಬಾಧೆಯ ದಿನ.


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ನಿನ್ನ ವಾಗ್ದಾನದ ನಿರೀಕ್ಷೆಯಲೆ ನನ್ನ ಕಣ್ಣು ಸೊರಗಿವೆ I “ನನಗೆಂದು ನೀಡುವೆ ಸಾಂತ್ವನ?” ಎಂದು ನಾ ಕೇಳುತ್ತಿರುವೆ II


ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.


ನಿನ್ನ ಮಕ್ಕಳು ಬಿದ್ದರು ಬೀದಿ ಚೌಕಗಳಲಿ ಬಲೆಗೆ ಬಿದ್ದ ಜಿಂಕೆಮರಿಯಂತಿಹರು ಪ್ರಜ್ಞೆತಪ್ಪಿ. ನಿನ್ನ ದೇವರನು ಮೂದಲಿಸಿಹರು ಸರ್ವೇಶ್ವರನ ರೋಷವನ್ನನುಭವಿಸಿಹರು.


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು