Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:15 - ಕನ್ನಡ ಸತ್ಯವೇದವು C.L. Bible (BSI)

15 ಹಾದುಹೋಗುವವರೆಲ್ಲ ಕೈ ತಟ್ಟುತ್ತಾರಲ್ಲಾ ನಿನ್ನನ್ನು ನೋಡಿ ಜೆರುಸಲೇಮ್ ನಗರಿಯಾದ ನಿನ್ನನ್ನು ಗುರುತಿಸಿ ! “ಆಹಾ, ನೀನೇನೋ ಸರ್ವಾಂಗ ಸುಂದರಿ, ವಿಶ್ವಾನಂದದಾಯಕಿ !” ಎಂದು ಮೂದಲಿಸುತ್ತಾರಲ್ಲಾ ತಲೆಯಾಡಿಸಿ, ಸಿಳ್ಳುಹಾಕಿ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ, ಯೆರೂಸಲೇಮ್ ನಗರಿಯನ್ನು ಕಂಡು, “ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನ್ನಿಸಿಕೊಳ್ಳುತ್ತಿದ್ದ ಪುರಿಯು ಇದೇ ಏನು? ಛೀ ಛೀ” ಎಂದು ತಲೆಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಹಾದುಹೋಗುವವರೆಲ್ಲರೂ ನಿನ್ನನ್ನು ನೋಡಿ ಚಪ್ಪಾಳೆಹೊಡೆಯುತ್ತಾರೆ. ಯೆರೂಸಲೇಮ್ ನಗರಿಯನ್ನು ಕಂಡು - ಆಹಾ, ಪರಿಪೂರ್ಣಸುಂದರಿ, ಸಮಸ್ತಲೋಕ ಸಂತೋಷಿಣಿ ಎನಿಸಿಕೊಳ್ಳುತ್ತಿದ್ದ ಪುರಿಯು ಇದೇಯೋ? ಛೀ ಛೀ ಎಂದು ತಲೆಯಾಡಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪಕ್ಕದಲ್ಲಿ ದಾರಿ ಹಿಡಿದುಹೋಗುವ ಜನರು ನಿನ್ನನ್ನು ನೋಡಿ ಅಪಹಾಸ್ಯದಿಂದ ಚಪ್ಪಾಳೆ ತಟ್ಟುತ್ತಾರೆ. ಜೆರುಸಲೇಮಿನ ಮಗಳ ಸ್ಥಿತಿಯನ್ನು ನೋಡಿ ಅವರು ಸಿಳ್ಳುಹಾಕುತ್ತಾರೆ ಮತ್ತು ತಲೆಯಾಡಿಸುತ್ತಾರೆ. “ಜನರಿಂದ ‘ಪರಿಪೂರ್ಣ ಸುಂದರ ನಗರ’ ‘ಸಮಸ್ತಲೋಕದ ಸಂತೋಷ’ ಎಂದು ಕರೆಸಿಕೊಂಡದ್ದು ಇದೇ ನಗರವೇ?” ಎಂದು ಅವರು ಕೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:15
38 ತಿಳಿವುಗಳ ಹೋಲಿಕೆ  

ಆದ್ದರಿಂದ ನಾಡನ್ನು ಭಯಾನಕವಾಗಿಸುವರು ಹಾದು ಹೋಗುವವರೆಲ್ಲ ಬೆಬ್ಬೆರಗಾಗಿ ತಲೆದೂಗುವರು, ಸಿಳ್ಳು ಹಾಕಿ ಅದನ್ನು ಪರಿಹಾಸ್ಯ ಮಾಡುವರು.


ಎತ್ತರದಲಿ ಸುಂದರ, ಉತ್ತರದಲಿ ಸಿಯೋನ್ ಶಿಖರ I ಆನಂದದಾಯಕ ರಾಜಾಧಿರಾಜನ ಆ ನಗರ II


“ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಒದೆದು, ಇಸ್ರಯೇಲ್ ನಾಡನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದಕ್ಕೆ ಬಂದ ಗತಿಗೆ ಹಿಗ್ಗಿಕೊಂಡೆ.


ಈ ನಗರವನ್ನು ಭಯಾನಕ ಹಾಗೂ ಹಾಸ್ಯಾಸ್ಪದ ಸ್ಥಳವನ್ನಾಗಿಸುವೆನು. ಹಾದುಹೋಗುವವರೆಲ್ಲರು ಅದಕ್ಕೆ ಒದಗಿದ ವಿಪತ್ತನ್ನು ಕಂಡು ನಿಬ್ಬೆರಗಾಗಿ ಹೀಗಳೆಯುವರು.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


“ಇರುವ ನಗರ ನಾನೇ, ನನ್ನ ಹೊರತು ಇನ್ನಾರೂ ಇಲ್ಲ” ಎಂದು ಕೊಚ್ಚಿಕೊಂಡು ಯಾವ ಚಿಂತೆಯೂ ಇಲ್ಲದೆ, ನೆಮ್ಮದಿಯಿಂದ ಇದ್ದ ನಿನೆವೆಯ ಗತಿ ನೋಡಿ, ಎಂಥ ಹಾಳುಬಿದ್ದ ಊರಾಗಿದೆ! ಕಾಡುಮೃಗಗಳ ಬೀಡಾಗಿದೆ! ಹಾದುಹೋಗುವವರೆಲ್ಲ ಸಿಳ್ಳುಹಾಕಿ ಕೈತೋರಿಸಿ ಪರಿಹಾಸ್ಯಮಾಡುವಷ್ಟು ಕೀಳಾಗಿದೆ!


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


“ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು, ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ನೋಡುವವರೆಲ್ಲಾ ಎನ್ನನಣಕಿಸುತಿಹರು I ತುಟಿಯೋರೆ ಮಾಡಿ ತಲೆಯಾಡಿಸುತಿಹರು II


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ, “ಆಹಾ, ಮಹಾದೇವಾಲಯವನ್ನು ಕೆಡವಿ ಮೂರು ದಿನಗಳಲ್ಲಿ ಅದನ್ನು ಮತ್ತೆ ಕಟ್ಟಬಲ್ಲವನೇ,


ಪಕ್ಕದಲ್ಲಿ ಹಾದುಹೋಗುತ್ತಿದ್ದ ಜನರು ತಲೆಯಾಡಿಸುತ್ತಾ


ನಿನ್ನ ಗಾಯಕ್ಕೆ ಮದ್ದಿಲ್ಲ. ನಿನಗೆ ಬಿದ್ದಿರುವ ಪೆಟ್ಟು ಪ್ರಾಣನಾಶಕ. ನಿನ್ನ ವಿನಾಶದ ಸಮಾಚಾರವನ್ನು ಕೇಳುವವರೆಲ್ಲ ಚಪ್ಪಾಳೆ ಹಾಕುತ್ತಾರೆ. ಏಕೆಂದರೆ ನೀನು ಮಾಡಿರುವ ಕೇಡಿಗೆ ಕೊನೆಯಿಲ್ಲ. ಅದರಿಂದ ತಪ್ಪಿಸಿಕೊಂಡವರು ಯಾರೂ ಇಲ್ಲ.”


“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ನಿನ್ನನ್ನು ನೋಡಿ ಶತ್ರುಗಳೆಲ್ಲರು ಕಟಕಟನೆ ಹಲ್ಲು ಕಡಿಯುತ್ತಾರಲ್ಲಾ ಬಾಯಿ ಕಿಸಿದು ! “ಹಾ, ಆಕೆಯನ್ನು ಕಬಳಿಸಿಬಿಟ್ಟೆವು ಈ ದಿನಕ್ಕಾಗಿಯೆ ನಾವು ಕಾದಿದ್ದೆವು ಈಗ ಅದನ್ನು ಕಣ್ಣಾರೆ ಕಂಡೆವು” ಎಂದು ಕೊಚ್ಚಿಕೊಳ್ಳುತ್ತಾರಲ್ಲಾ !


ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.


ಜೆರುಸಲೇಮ್ ಅಶುದ್ಧಳಾದಳು ಪದೇ ಪದೇ ಪಾಪಮಾಡಿ. ಹೊಗಳುತ್ತಿದ್ದವರೇ ತೆಗಳುವವರಾದರು ಆಕೆಯ ನಗ್ನತೆಯನ್ನು ನೋಡಿ. ಆಕೆಯೋ ನಿಟ್ಟುಸಿರಿಡುತ್ತಿರುವಳು ಮುಖವನ್ನು ಮರೆಮಾಡಿ.


ಆಗ ಬಾಬಿಲೋನ್ ಹಾಳುದಿಬ್ಬ ಆಗುವುದು. ಗುಳ್ಳೆನರಿಗಳ ಬೀಡಾಗುವುದು. ಅದು ಭಯಭೀತಿಗೂ ಸೀಳು ಪರಿಹಾಸ್ಯಕ್ಕೂ ಆಸ್ಪದವಾಗುವುದು.


ಖಡ್ಗ-ಕ್ಷಾಮ-ವ್ಯಾಧಿಗಳಿಂದ ಅವರನ್ನು ಹಿಂದಟ್ಟುತ್ತಾ ಲೋಕದ ಎಲ್ಲ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು. ಅವರನ್ನು ಅಟ್ಟಲಾಗಿರುವ ಎಲ್ಲ ರಾಷ್ಟ್ರಗಳಲ್ಲಿ ಅವರು ಶಾಪ, ಪರಿಹಾಸ್ಯ, ದೂಷಣೆಗಳಿಗೆ ಗುರಿಯಾಗುವಂತೆ ಮಾಡುವೆನು.


ಜೆರುಸಲೇಮಿಗೂ ಜುದೇಯದ ನಗರಗಳಿಗೂ, ಅರಸರುಗಳಿಗೂ ಕುಡಿಸಿದೆ. ಇದರಿಂದ ಅವರು ಹಾಳಾಗಿ ಇಂದು ಪರಿಹಾಸ್ಯಕ್ಕೂ ಶಾಪಕ್ಕೂ ಗುರಿಯಾಗುವಂತಾಯಿತು.


“ನೀವು ನನ್ನ ಮಾತನ್ನು ಕೇಳದ ಕಾರಣ ನಾನು ಉತ್ತರಭಾಗದ ರಾಷ್ಟ್ರಗಳನ್ನೆಲ್ಲ ಕರೆಯಿಸುವೆನು. ಬಾಬಿಲೋನಿನ ಅರಸ ಹಾಗು ನನ್ನ ಸೇವಕನಾದ ನೆಬೂಕದ್ನೆಚ್ಚರನನ್ನೂ ಬರಮಾಡುವೆನು. ಅವರು ಈ ನಾಡಿನ, ಇದರ ನಿವಾಸಿಗಳ, ಮತ್ತು ಸುತ್ತಮುತ್ತಲಿನ ನಾಡುಗಳ ಮೇಲೂ ಬೀಳುವರು. ಹೀಗೆ ಇವುಗಳನ್ನು ತೀರ ಹಾಳುಮಾಡುವೆನು. ನಿರಂತರ ಪರಿಹಾಸ್ಯಕ್ಕೂ ಪರಿವಿನಾಶಕ್ಕೂ ಇವನ್ನು ಗುರಿಪಡಿಸುವೆನು.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹೋಗುವವರು ಇದನ್ನು ನೋಡಿ ವಿಸ್ಮಿತರಾಗಿ, ‘ಸರ್ವೇಶ್ವರ ಈ ನಾಡನ್ನೂ ಈ ಆಲಯವನ್ನೂ ಹೀಗೇಕೆ ಮಾಡಿಬಿಟ್ಟರು?’ ಎಂದು ಕೇಳುವರು.


‘ನಿನ್ನನ್ನು ಪರಿಹಾಸ್ಯಮಾಡಿ ತಿರಸ್ಕರಿಸುತಿಹಳು ಕನ್ಯೆಯಾದ ಸಿಯೋನಿನ ಕುವರಿಯು; ನಿನ್ನ ಹಿಂದೆ ತಲೆಯಾಡಿಸಿ ಮೂದಲಿಸುತಿಹಳು ಜೆರುಸಲೇಮಿನ ಆ ಕುವರಿಯು.


ನಾಲಿಗೆ ನಿಮಿತ್ತ ಅವರು ಅವನತಿಗೀಡಾಗುವರು I ನೋಡುವವರೆಲ್ಲರು ತಲೆಯಾಡಿಸಿ ಅಣಕಿಸುವರು II


ಗುರಿಯಾಗಿರುವೆನು ನಾ ಜನರ ಅಪಹಾಸ್ಯಕ್ಕೆ I ನೋಡುವವರು ತಲೆಯಾಡಿಸಿ ಮಾಡುವ ನಿಂದೆಗೆ II


ಒಮ್ಮೆ ಸರ್ವೇಶ್ವರ ಪೆರಾಚೀಮ್ ಬೆಟ್ಟದ ಮೇಲೆ ಎದ್ದಂತೆ ಏಳುವರು; ಗೊಬ್ಯೋನ್ ಕಣಿವೆಯಲ್ಲಿ ರೋಷಗೊಂಡಂತೆ ರೋಷಗೊಳ್ಳುವರು. ಆಗ ಅಸಾಧಾರಣ ಕಾರ್ಯವೊಂದನ್ನು ನಡೆಸುವರು; ಅಪೂರ್ವವಾದ ತಮ್ಮ ಕೆಲಸವನ್ನು ನೆರವೇರಿಸುವರು;


ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?


ಸಾಂತ್ವನ ತರುವವರಾರೂ ಇಲ್ಲವಲ್ಲಾ ನನಗೆ ! ನನ್ನ ನರಳಾಟದ ಸುದ್ದಿ ಮುಟ್ಟಿದೆ ವೈರಿಗಳ ಕಿವಿಗೆ. ನನಗಾದ ಕೇಡಿಗೆ ನೀನೇ ಕಾರಣನೆಂಬ ಸಂತಸ ಶತ್ರುವಿಗೆ. ನೀ ಮುಂತಿಳಿಸಿದ ಮೇರೆಗೆ ನನಗಾದ ಗತಿ ಬರಲಿ ಅವರಿಗೆ.


ನಾನು ನಿನಗೆ ಅನುಗ್ರಹಿಸಿದ ನಿನ್ನ ವೈಭವದಿಂದ ನಿನ್ನ ಸೌಂದರ್ಯ ಪರಿಪೂರ್ಣವಾಯಿತು; ನಿನ್ನ ಚೆಲುವು ಜನಾಂಗಗಳಲ್ಲಿ ಪ್ರಸಿದ್ಧವಾಯಿತು; ಇದು ಸರ್ವೇಶ್ವರನಾದ ದೇವರ ನುಡಿ.


ಅದರ ಕೋಟೆಕೊತ್ತಲಗಳ ನಡುವೆ ದೇವನು I ತಾನೇ ಸುಭದ್ರ ದುರ್ಗವೆಂದು ತೋರಿಹನು II


ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ಇಳಿಸುವೆನು. ಈ ನಗರವು ವಿಶ್ವದ ಜನರಿಗೆಲ್ಲ ಶಾಪಗ್ರಸ್ತ ನಗರವಾಗುವಂತೆ ಮಾಡುವೆನು.”


“ನಾನು ಕೋಪದಿಂದ, ರೋಷದಿಂದ ಹಾಗು ತೀವ್ರ ಖಂಡನೆಯಿಂದ ನಿನಗೆ ಮಾಡುವ ದಂಡನೆಗಳು ಸುತ್ತಲಿನ ಜನಾಂಗಗಳ ದೂಷಣೆಗೂ ಪರಿಹಾಸ್ಯಗಳಿಗೂ ಬೆರಗು ಬುದ್ಧಿವಾದಗಳಿಗೂ ಆಸ್ಪದವಾಗುವುವು; ಇದು ಸರ್ವೇಶ್ವರನಾದ ನನ್ನ ನುಡಿ.


ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ವಸ್ತ್ರ; ನಿನ್ನ ಆಹಾರವು ಗೋದಿಹಿಟ್ಟು, ಜೇನುತುಪ್ಪ ಮತ್ತು ಎಣ್ಣೆ; ನಿನ್ನ ಲಾವಣ್ಯವು ಅತಿ ಮನೋಹರ; ನೀನು ಹೀಗೆ ವೃದ್ಧಿಗೊಂಡು ರಾಣಿಯಾದೆ.


ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - “ಆಳವೂ ಅಗಲವೂ ಬಹಳ ಹಿಡಿಯುವುದೂ ಆದ ನಿನ್ನ ಅಕ್ಕನ ಪಾತ್ರೆಯಲ್ಲೇ ನೀನೂ ಕುಡಿದು ಹಾಸ್ಯಕ್ಕೂ ಕುಚೋದ್ಯಕ್ಕೂ ಗುರಿಯಾಗುವೆ. ಸಮಾರಿಯಳೆಂಬ ನಿನ್ನ ಅಕ್ಕನು ಕುಡಿದ ಬೆಚ್ಚುಬೆರಗಿನಾ ಕೊಡದಿಂದಲೇ


ಸರ್ವೇಶ್ವರಾ, ನಿಮ್ಮ ಸಮಸ್ತ ಧರ್ಮಕಾರ್ಯಗಳಿಗೆ ಅನುಸಾರವಾಗಿ ನಿಮ್ಮ ನಗರವೂ ನಿಮ್ಮ ಪವಿತ್ರ ಪರ್ವತವೂ ಆದ ಜೆರುಸಲೇಮ್ ಮೇಲೆ ನಿಮಗಿರುವ ಕೋಪವನ್ನೂ ರೋಷಾಗ್ನಿಯನ್ನೂ ದಯಮಾಡಿ ತೊಲಗಿಸಿಬಿಡಿ. ನಮ್ಮ ಮತ್ತು ನಮ್ಮ ಪೂರ್ವಜರ ಪಾಪಾಪರಾಧಗಳ ನಿಮಿತ್ತ ಜೆರುಸಲೇಮ್ ಮತ್ತು ನಿಮ್ಮ ಜನತೆ ನೆರೆಹೊರೆಯವರೆಲ್ಲರ ನಿಂದೆಗೆ ಗುರಿಯಾಗಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು