Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:18 - ಕನ್ನಡ ಸತ್ಯವೇದವು C.L. Bible (BSI)

18 ನಿನ್ನ ಜನರು ಮೊರೆಯಿಡಲಿ ಮನಃಪೂರ್ವಕವಾಗಿ ಸಿಯೋನ್ ನಗರದ ಕೋಟೆಗೆ ಕೋಟೆಯೇ ಕಣ್ಣೀರಿಡಲಿ. ಹಗಲಿರುಳು ಕಂಬನಿ ಹರಿಯಲಿ ತೊರೆಯಂತೆ ನಿಮ್ಮ ನೇತ್ರಗಳಿಂದ ಸುರಿಯಲಿ ಒಂದೇ ಸಮನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; ಚೀಯೋನ್‍ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಜೆರುಸಲೇಮ್ ನಗರದ ಗೋಡೆಯೇ, ಮನಃಪೂರ್ವಕವಾಗಿ ಯೆಹೋವನಲ್ಲಿ ಮೊರೆಯಿಡು. ನಿನ್ನ ಕಣ್ಣೀರು ಹಗಲಿರುಳು ನದಿಯಂತೆ ಹರಿಯಲಿ, ನಿಲ್ಲಿಸಬೇಡ. ನಿನ್ನ ಕಣ್ಣುಗಳಿಗೆ ವಿರಾಮ ಸಿಗುವುದು ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರ ಹೃದಯವು ಕರ್ತದೇವರ ಕಡೆಗೆ ಕೂಗಿ, ಚೀಯೋನಿನ ಗೋಡೆಯೇ, ರಾತ್ರಿ ಹಗಲೂ ನಿನ್ನ ಕಣ್ಣೀರು ನದಿಯಂತೆ ಹರಿದು ಹೋಗಲಿ, ನಿನಗೆ ವಿಶ್ರಾಂತಿ ಬೇಡ, ನಿನ್ನ ಕಣ್ಣ ರೆಪ್ಪೆಯನ್ನು ಮುಚ್ಚಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:18
14 ತಿಳಿವುಗಳ ಹೋಲಿಕೆ  

ಸದುತ್ತರಿಸು ಮನಪೂರ್ವಕವಾಗಿ ಮೊರೆಯಿಡುವೆ I ನಿನ್ನ ನಿಬಂಧನೆಗಳನು ಪ್ರಭು, ಅನುಸರಿಸುವೆ II


ಸಿಯೋನ್ ನಗರಿಯ ಕೋಟೆಯನ್ನು ನಾಶಪಡಿಸಲೆಂದು ಎಳೆದಿರುವನಲ್ಲಾ ಸರ್ವೇಶ್ವರ ಅಳತೆನೂಲನ್ನು ! ಹಾಳುಮಾಡುವ ತನ್ನ ಕೈಯನ್ನು ಹಿಂದೆಗೆಯದೆ ಬಿರುಕುಗೊಳಿಸಿದ್ದಾನೆ ಪೌಳಿಗೋಡೆಯನ್ನೇ, ಕೋಟೆಯನ್ನೇ, ಅವುಗಳೆರಡೂ, ಕುಸಿದು ಬಿದ್ದುಹೋಗಿವೆ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ನನ್ನ ತಲೆ ಒಂದು ಚಿಲುಮೆಯಾಗಿರಬಾರದಿತ್ತೆ? ನನ್ನ ಕಣ್ಣು ಒಂದು ಒರತೆಯಾಗಿರಬಾರದಿತ್ತೆ? ಆಗ ನನ್ನ ಜನರಲ್ಲಿ ಹತರಾದವರಿಗಾಗಿ ಹಗಲಿರುಳು ಅಳುತ್ತಿದ್ದೆ.


ನಿನ್ನ ಶಾಸ್ತ್ರವನು ಜನ ಪಾಲಿಸದ ಕಾರಣ I ಹರಿಯುತ್ತಿದೆ ಧಾರೆಯಾಗಿ ನನ್ನ ಕಣ್ಕಣ II


ಗೋಡೆಯಲ್ಲಿ ಇರುವ ಕಲ್ಲುಗಳೇ ನಿನಗೆ ವಿರುದ್ಧವಾಗಿ ಕೂಗುವುವು. ಚಾವಣಿಯ ತೊಲೆಗಳು ಸಹ ಅದಕ್ಕೆ ಮಾರ್ದನಿ ಕೂಡಿಸುವುವು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


“ನೀನು ನಿನ್ನ ದುಃಖವನ್ನು ಅವರಿಗೆ ಹೀಗೆಂದು ವ್ಯಕ್ತಪಡಿಸು - ‘ರಾತ್ರಿಹಗಲು ನನ್ನ ಕಣ್ಣೀರು ಸುರಿಯಲಿ ನಿರಂತರವಾಗಿ ಏಕೆಂದರೆ ನನ್ನ ಜನವೆಂಬ ಯುವತಿ ಗಾಯಗೊಂಡಿದ್ದಾಳೆ ತೀವ್ರವಾಗಿ, ಹೌದು, ಅವಳಿಗೆ ಪೆಟ್ಟುಬಿದ್ದಿದೆ ಗಡುಸಾಗಿ.


ನೀವು ಕಿವಿಗೊಡದಿದ್ದರೆ ನಿಮ್ಮ ಗರ್ವದ ನಿಮಿತ್ತ ನನ್ನ ಮನ ಗೋಳಾಡುವುದು ಗುಟ್ಟಾಗಿ. ನೀವು ಸೆರೆಯಾಗಿ ಹೋಗುವುದರಿಂದ ಅಳುವೆನು ಸರ್ವೇಶ್ವರನ ಮುಂದೆ ಬಹಳವಾಗಿ. ನನ್ನ ಕಣ್ಣುಗಳಿಂದ ಕಂಬನಿ ಹರಿವುದು ಧಾರಾಕಾರವಾಗಿ.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು