Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:2 - ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ, ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ, ರಾಜ್ಯವನ್ನೂ ಮತ್ತು ಅಲ್ಲಿನ ಸರದಾರರನ್ನೂ ಹೀನಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ಯಾಕೋಬನ ಮನೆಗಳನ್ನು ನಾಶಪಡಿಸಿದನು. ಆತನು ಕನಿಕರವಿಲ್ಲದೆ ಅವುಗಳನ್ನು ನುಂಗಿಬಿಟ್ಟನು. ತನ್ನ ಕೋಪದಲ್ಲಿ ಆತನು ಯೆಹೂದದ ಮಗಳ ಕೋಟೆಗಳನ್ನು ನಾಶಪಡಿಸಿದನು. ಯೆಹೋವನು ಯೆಹೂದ ರಾಜ್ಯವನ್ನೂ ಮತ್ತು ಅದರ ಅಧಿಪತಿಗಳನ್ನೂ ನೆಲಕ್ಕೆ ಅಪ್ಪಳಿಸಿದನು. ಆತನು ಯೆಹೂದ ರಾಜ್ಯಕ್ಕೆ ಅವಮಾನ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕರ್ತದೇವರು ಯಾಕೋಬಿನ ಎಲ್ಲಾ ನಿವಾಸಿಗಳನ್ನು ಕನಿಕರಿಸದೆ ನುಂಗಿದ್ದಾರೆ. ಯೆಹೂದದ ಪುತ್ರಿಯ ಭದ್ರವಾದ ಸ್ಥಾನಗಳನ್ನು ತನ್ನ ರೋಷದಲ್ಲಿ ಕೆಡವಿ ಹಾಕಿದ್ದಾರೆ. ಅವರು ಅವುಗಳನ್ನು ನೆಲಸಮ ಮಾಡಿದ್ದಾರೆ. ಅವರು ಆಕೆಯ ರಾಜ್ಯವನ್ನೂ, ಪ್ರಭುಗಳನ್ನೂ ಅಗೌರವಿಸಿ ನೆಲಕ್ಕೆ ದಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:2
32 ತಿಳಿವುಗಳ ಹೋಲಿಕೆ  

“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ದುರ್ಗದಂತೆ ಎತ್ತರವಾಗಿರುವ ಅದರ ಕೋಟೆಕೊತ್ತಲಗಳನ್ನು ಕೆಳಕ್ಕೆ ಕೆಡವಿ ನೆಲಸಮಮಾಡುವರು. ಅದು ಧೂಳು ಪಾಲಾಗುವುದು.


ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !


ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು.


ತಗ್ಗಿಸುವನಾತ ಎತ್ತರದಲಿ ವಾಸಿಸುವವರನು, ಕೆಡವಿ, ನೆಲಸಮಮಾಡಿ, ಧೂಳಾಗಿಸುವನು ಅವರು ವಾಸಮಾಡುವಾ ಉನ್ನತ ನಗರವನು.


ನಾವು ಬಳಸುವ ಆಯುಧಗಳು ಮಾನವ ನಿರ್ಮಿತವಾದುವಲ್ಲ, ದೇವರ ಶಕ್ತಿಯಿಂದ ಕೂಡಿದುವು; ಕೋಟೆಕೊತ್ತಲಗಳನ್ನು ಕೆಡವಬಲ್ಲವು. ಅವುಗಳಿಂದ ನಾವು ಎಲ್ಲ ಕುತರ್ಕಗಳನ್ನು ನಿರ್ಮೂಲಮಾಡಬಲ್ಲೆವು.


ನಾನು ನಿನಗೆ ದಯೆತೋರಿಸಿದಂತೆ ನೀನೂ ನಿನ್ನ ಜೊತೆಗಾರನಿಗೆ ದಯೆತೋರಿಸಬೇಕಿತ್ತು ಅಲ್ಲವೇ?’ ಎಂದು ಸಿಟ್ಟುಗೊಂಡ.


ಏಸಾವನ ವಂಶದವರಾದ ಎದೋಮ್ಯರು, “ನಮ್ಮ ನಾಡು ಹಾಳಾಯಿತು; ಆದರೆ ಹಾಳುಬಿದ್ದದ್ದನ್ನು ಮರಳಿ ಕಟ್ಟುವೆವು,” ಎನ್ನಬಹುದು. ಅದಕ್ಕೆ ಸೇನಾಧೀಶ್ವರ ಸರ್ವೇಶ್ವರ ಕೊಡುವ ಉತ್ತರ ಇದು: “ಅವರು ಕಟ್ಟಲಿ; ನಾನು ಅವುಗಳನ್ನು ಕೆಡವಿಹಾಕುವೆ. ‘ಅವರು ಕೇಡಿಗರು. ಸರ್ವೇಶ್ವರಸ್ವಾಮಿಯ ಕೋಪಕ್ಕೆ ಗುರಿಯಾದವರು’ ಎಂದು ಜನರೇ ಆಡಿಕೊಳ್ಳುವರು.”


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಆಕ್ರಮಣಕಾರರಿಗೆ ಕರೆ; ಸಿಯೋನೆಂಬ ದ್ರಾಕ್ಷಾತೋಟದ ಸಾಲುಗಿಡಗಳನ್ನು ಹಾಳುಮಾಡಿ. ಆದರೆ ಅದನ್ನು ನಿರ್ಮೂಲಮಾಡಬೇಡಿ. ಅದರ ರೆಂಬೆಗಳನ್ನು ಕಿತ್ತುಹಾಕಿ. ಅವು ಸರ್ವೇಶ್ವರನಾದ ನನಗೆ ಸೇರಿದವುಗಳಲ್ಲ.


“ನಾ ರೋಷಗೊಂಡು ನನ್ನ ಜನರನ್ನೇ ನಿನ್ನ ಕೈವಶಮಾಡಿದೆ ನನಗೆ ಸ್ವಂತವಾದವರನ್ನೇ ಈ ಪರಿ ಹೊಲೆಗೆಡಿಸಿದೆ. ನೀನಾದರೋ ಕರುಣೆ ತೋರಿಸದೆಹೋದೆ ಮುದುಕರ ಮೇಲೂ ತೂಕದ ನೊಗವನು ಹೊರಿಸಿದೆ.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಇದು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಸಂಕಲ್ಪವೇ ಸರಿ. ಗರ್ವಿಗಳ ಸಕಲ ದರ್ಪವನ್ನು ದಮನಮಾಡಲು, ವಿಶ್ವವಿಖ್ಯಾತರನ್ನು ಅವಮಾನಗೊಳಿಸಲು ಸೇನಾಧೀಶ್ವರ ಸರ್ವೇಶ್ವರ ಮಾಡಿದ ಯೋಜನೆಯಿದು.


ಆಗ ಸರ್ವೇಶ್ವರ ಅವನಿಗೆ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ನಿಷ್ಕಾರಣವಾಗಿ ಆತನನ್ನು ನಾಶಮಾಡಲು ಬಿಡಬೇಕೆಂದು ನೀನು ನನ್ನನ್ನು ಪೀಡಿಸಿದೆ. ಆದರೂ ಆತನು ತನ್ನ ಸತ್ಯಸಂಧತೆಯನ್ನು ಬಿಡದೆ ಇದ್ದಾನೆ ನೋಡು,” ಎಂದರು.


ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II


ಸೇನಾಧೀಶ್ವರ ಸರ್ವೇಶ್ವರ ಸ್ವಾಮಿ ಕಳುಹಿಸಿರುವ ದಿನವಿದು - ದಿವ್ಯದರ್ಶನದ ಕಣಿವೆಯ ದಿನ, ಗಲಿಬಿಲಿಯ ದಿನ, ತುಳಿದಾಟದ ದಿನ, ಭಯಭ್ರಾಂತಿಯ ದಿನ, ಕೋಟೆಕೊತ್ತಲಗಳನ್ನು ಹೊಡೆದುರುಳಿಸುವ ದಿನ. ಕೂಗಾಟವು ಬೆಟ್ಟದಲ್ಲಿ ಮಾರ್ದನಿಸುವ ದಿನ !


ನಿನ್ನ ಆಶೇರಾ ದೇವತೆಯ ವಿಗ್ರಹಗಳನ್ನು ಕಿತ್ತೊಗೆದು, ನಿನ್ನ ಪಟ್ಟಣಗಳನ್ನು ನೆಲಸಮ ಮಾಡುವೆನು.


ನಿಮ್ಮ ದೇವರಾದ ಸರ್ವೇಶ್ವರ ನಿಮಗೆ ಕೊಟ್ಟಿರುವ ನಾಡಿನ ಪಟ್ಟಣಗಳಿಗೆಲ್ಲಾ ಅವರು ಮುತ್ತಿಗೆ ಹಾಕುವರು; ನೀವು ನೆಚ್ಚಿಕೊಳ್ಳುವ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


“ಇಸ್ರಯೇಲರ ದೇವರೂ ಸರ್ವಶಕ್ತರೂ ಆದ ಸರ್ವೇಶ್ವರ ಹೀಗೆನ್ನುತ್ತಾರೆ - ಈ ನಗರದವರೂ ಇದರ ಸುತ್ತಮುತ್ತಿನ ಊರಿನವರೂ ನನ್ನ ಮಾತನ್ನು ಕೇಳದೆಹೋದರು. ತಮ್ಮ ಮನಸ್ಸನ್ನು ಕಲ್ಲಾಗಿಸಿಕೊಂಡರು. ಆದುದರಿಂದ ನಾನು ಈ ನಗರಕ್ಕೆ ಶಾಪ ಹಾಕಿದ ಕೇಡನ್ನೆಲ್ಲಾ ಅವರಿಗೆ ಬರಮಾಡುವೆನು,” ಎಂದು ಎಲ್ಲ ಜನರಿಗೆ ಸಾರಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು