Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:20 - ಕನ್ನಡ ಸತ್ಯವೇದವು C.L. Bible (BSI)

20 ಹೇ, ಸರ್ವೇಶ್ವರಾ ಕಟಾಕ್ಷಿಸು ! ಇಷ್ಟೆಲ್ಲಾ ನೀ ಮಾಡಿದ್ದು ಯಾರಿಗೆಂದು ಯೋಚಿಸು ! ತಾಯಂದಿರು ತಿನ್ನಬೇಕೆ ತಾವು ಆರೈಕೆ ಮಾಡಿದ ತಮ್ಮ ಕರುಳ ಕುಡಿಯನ್ನೇ? ಹತರಾಗಬೇಕೆ ಯಾಜಕರೂ ಪ್ರವಾದಿಗಳೂ ಸ್ವಾಮಿಯ ಪವಿತ್ರಾಲಯದಲ್ಲೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬುವುದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಾವೇ ಕೊಂದು ತಿನ್ನುವುದು ಘೋರವಾದ ಪಾಪವಲ್ಲವೇ! ಯಾಜಕರೂ ಮತ್ತು ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಯೆಹೋವನೇ, ಕಟಾಕ್ಷಿಸು; ನೀನು ಇಷ್ಟೆಲ್ಲಾ ಮಾಡಿದ್ದು ಯಾರಿಗೆಂಬದನ್ನು ನೋಡು, ಹೆಂಗಸರು ತಮ್ಮ ಗರ್ಭಫಲವನ್ನು, ತಾವು ನಲಿದಾಡಿಸಿದ ಮಕ್ಕಳನ್ನು ತಿಂದುಕೊಳ್ಳಲೋ? ಯಾಜಕರೂ ಪ್ರವಾದಿಗಳೂ ಕರ್ತನ ಪವಿತ್ರಾಲಯದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ಕಡೆಗೆ ನೋಡು. ನೀನು ಇಷ್ಟೆಲ್ಲ ಮಾಡಿದ್ದು ಯಾರಿಗೆ ಎಂಬುದನ್ನು ನೋಡು. ನಾನು ನಿನಗೆ ಈ ಪ್ರಶ್ನೆಗಳನ್ನು ಕೇಳಬಯಸುತ್ತೇನೆ. ಏನು, ಸ್ತ್ರೀಯರು ತಾವು ಹೆತ್ತ ಮಕ್ಕಳನ್ನೇ ತಿನ್ನಬೇಕೇ? ಸ್ತ್ರೀಯರು ತಾವು ಲಾಲನೆಪಾಲನೆ ಮಾಡಿದ ಮಕ್ಕಳನ್ನೇ ತಿನ್ನಬೇಕೇ? ಯೆಹೋವನ ಪವಿತ್ರ ಆಲಯದಲ್ಲಿಯೇ ಯಾಜಕನನ್ನು ಮತ್ತು ಪ್ರವಾದಿಯನ್ನು ಕೊಲ್ಲಬೇಕೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಯೆಹೋವ ದೇವರೇ, ಕಟಾಕ್ಷಿಸಿ: ನೀವು ಇದನ್ನು ಯಾರಿಗೆ ಮಾಡಿದಿರೋ ಯೋಚಿಸಿರಿ. ಸ್ತ್ರೀಯರು ತಮ್ಮ ಫಲವಾದ ಕೂಸುಗಳನ್ನು ತಿನ್ನಬೇಕೇ? ಯಾಜಕನು ಮತ್ತು ಪ್ರವಾದಿಯು ಕರ್ತದೇವರ ಪರಿಶುದ್ಧ ಸ್ಥಳದಲ್ಲಿ ಹತರಾಗಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:20
24 ತಿಳಿವುಗಳ ಹೋಲಿಕೆ  

ಕರುಣಾಮಯಿಗಳಾದ ಹೆಂಗಳೆಯರು ತಮ್ಮ ಕಂದಮ್ಮಗಳನ್ನು ಸ್ವಂತ ಕೈಯಿಂದ ಬೇಯಿಸಿದರು. ನನ್ನ ಜನರ ಪರಿವಿನಾಶದ ಕಾಲದೊಳು ತಮ್ಮ ತಾಯಿಗಳಿಗೆ ತಿಂಡಿಯಾದರು ಆ ಹಸುಳೆಗಳು.


ಅವರ ಶತ್ರುಗಳು, ಕೊಲೆಗಡುಕರು ಅವರನ್ನು ಮುತ್ತಿ ನಸುಕುವಾಗ ಒಬ್ಬರು ಮತ್ತೊಬ್ಬರನ್ನು ತಿನ್ನುವುದು ಮಾತ್ರವಲ್ಲ, ತಮ್ಮ ಪುತ್ರಪುತ್ರಿಯರ ಮಾಂಸವನ್ನೇ ತಿನ್ನುವರು.’


ಬಲಿಯಾದರವರ ಯಾಜಕರು ಶತ್ರುಕತ್ತಿಗೆ I ವಿಧವೆಯರು ರೋದಿಸಲಿಲ್ಲ ಅವರ ಸಾವಿಗೆ II


ನಗರದ ನಡುವೆಯೇ ಆದ ನೀತಿವಂತರ ರಕ್ತಪಾತದಿಂದ ಯಾಜಕರು, ಪ್ರವಾದಿಗಳು ಎಸಗಿದ ಈ ಪಾಪದೋಷಗಳಿಂದ ಬಂದೊದಗಿತು ಈ ಪರಿತಾಪವೆಲ್ಲ.


ನಾನು ಅವರನ್ನು ಬೇಡಿಕೊಳ್ಳುತ್ತಾ, ‘ಸರ್ವೇಶ್ವರಾ, ದೇವರೇ, ನೀವು ನಿಮ್ಮ ಮಹಿಮೆಯಿಂದ ರಕ್ಷಿಸಿ, ನಿಮ್ಮ ಭುಜಬಲ ಪ್ರಯೋಗಿಸಿ ಈಜಿಪ್ಟಿನಿಂದ ಬಿಡುಗಡೆಮಾಡಿದ ನಿಮ್ಮ ಸ್ವಕೀಯ ಜನರನ್ನು ನಾಶಮಾಡಬೇಡಿ.


ಆಗ ಮೋಶೆ ತನ್ನ ದೇವರಾದ ಸರ್ವೇಶ್ವರನನ್ನು ಹೀಗೆಂದು ಬೇಡಿಕೊಂಡನು: “ಸ್ವಾಮಿ ಸರ್ವೇಶ್ವರಾ, ಮಹಾಶಕ್ತಿಯಿಂದಲೂ ಭುಜಬಲದಿಂದಲೂ ತಾವೇ ಈಜಿಪ್ಟಿನಿಂದ ಬಿಡಿಸಿದ ತಮ್ಮ ಪ್ರಜೆಯ ಮೇಲೆ ಕೋಪಾಗ್ನಿ ಕಾರಬಹುದೆ?


ನಿನ್ನಲ್ಲಿ ತಂದೆಗಳು ಮಕ್ಕಳನ್ನು, ಮಕ್ಕಳು ತಂದೆಗಳನ್ನು ತಿನ್ನುವರು; ನಾನು ನಿನ್ನನ್ನು ದಂಡಿಸಿ ನಿನ್ನಲ್ಲಿ ಉಳಿದ ಸಮಸ್ತರನ್ನು ಎಲ್ಲಾ ಕಡೆಯ ಗಾಳಿಗೂ ತೂರುವೆನು.’


ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.


“ನನ್ನ ಪ್ರಿಯರನ್ನು ಕರೆದೆ; ಅವರೇ ಮೋಸಮಾಡಿದರೆನಗೆ. ನನ್ನ ಯಾಜಕರೂ ಪ್ರಮುಖರೂ ಪಟ್ಟಣದಲ್ಲೇ ಪ್ರಾಣತೆತ್ತರು, ಉಸಿರನ್ನು ಉಳಿಸಿಕೊಳ್ಳಲು ಊಟವನ್ನು ಹುಡುಕುತ್ತಿರಲು.


ಪ್ರವಾದಿಗಳೇ ಸುಳ್ಳು ಪ್ರವಾದನೆಮಾಡುತ್ತಾರೆ. ಯಾಜಕರು ಅಂಥವರಿಂದ ಅಧಿಕಾರ ಪಡೆದು ದೊರೆತನಮಾಡುತ್ತಾರೆ. ನನ್ನ ಜನರಿಗೆ ಚೆನ್ನಾಗಿ ಹಿಡಿಸುವುದು ಇಂಥದ್ದೇ. ಆದರೆ ಅಂತ್ಯ ಬಂದಾಗ ಏನು ಮಾಡುವರು?”


ನೀವು ನಿಮ್ಮ ಗಂಡುಹೆಣ್ಣು ಮಕ್ಕಳ ಮಾಂಸವನ್ನೇ ತಿನ್ನುವಿರಿ.


ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ದೇವರು ಅವರಿಗೆ, “ಹೊರಡಿ, ಪ್ರಾಕಾರಗಳನ್ನು ಶವಗಳಿಂದ ತುಂಬಿಸಿ, ದೇವಾಲಯವನ್ನು ಹೊಲೆಗೆಡಿಸಿ,” ಎಂದು ಅಪ್ಪಣೆಕೊಡಲು ಅವರು ಹೊರಟು ಪಟ್ಟಣದಲ್ಲಿದ್ದವರನ್ನು ಹತಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು