Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:21 - ಕನ್ನಡ ಸತ್ಯವೇದವು C.L. Bible (BSI)

21 ವಯಸ್ಕರೂ ವೃದ್ಧರೂ ಬಿದ್ದಿದ್ದಾರೆ ಬೀದಿಗಳಲ್ಲೆ ತರುಣತರುಣಿಯರು ತುತ್ತಾಗಿದ್ದಾರೆ ಖಡ್ಗಗಳಿಗೆ. ನಿನ್ನ ಪ್ರಕೋಪದ ದಿನದಂದು ಹತಮಾಡಿದೆಯಲ್ಲಾ ಅವರನ್ನು ಕನಿಕರಿಸದೆ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯುವಕರು ಮತ್ತು ವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣಿಯರು ಹಾಗು ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಸಂಹರಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯುವಕವೃದ್ಧರು ಬೀದಿಗಳಲ್ಲಿ ನೆಲದ ಮೇಲೆ ಬಿದ್ದಿರುತ್ತಾರೆ, ನನ್ನ ತರುಣೀ ತರುಣರು ಖಡ್ಗದಿಂದ ಹತರಾಗಿದ್ದಾರೆ; ನೀನು ಕೋಪತೀರಿಸಿಕೊಳ್ಳುವ ದಿನದಲ್ಲಿ ಅವರನ್ನು ಕೊಂದುಹಾಕಿದಿ, ಕನಿಕರಿಸದೆ ಹತಿಸಿದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಬೀದಿಗಳಲ್ಲಿ ತರುಣರು ಮತ್ತು ವೃದ್ಧರು ನೆಲದ ಮೇಲೆ ಬಿದ್ದಿದ್ದಾರೆ. ನನ್ನ ಯುವತಿಯರು ಮತ್ತು ಯುವಕರು ಖಡ್ಗದಿಂದ ಹತರಾಗಿದ್ದಾರೆ. ಯೆಹೋವನೇ, ನಿನಗೆ ಕೋಪಬಂದ ದಿನ ಅವರನ್ನು ಕೊಂದುಬಿಟ್ಟೆ; ಕರುಣೆ ತೋರದೆ ಅವರನ್ನು ಸಂಹರಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:21
33 ತಿಳಿವುಗಳ ಹೋಲಿಕೆ  

ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


ಸರ್ವೇಶ್ವರಸ್ವಾಮಿಯ ನುಡಿಯಿದು: “ಈ ಲೋಕನಿವಾಸಿಗಳಿಗೆ ನಾನು ಕರುಣೆತೋರಿಸೆನು. ಪ್ರತಿಯೊಬ್ಬನನ್ನು ತನ್ನ ತನ್ನ ನೆರೆಯವನ ಕೈಗೂ ಅರಸನ ಕೈಗೂ ಒಪ್ಪಿಸಿಬಿಡುವೆನು. ಆ ಬಲಿಷ್ಠರು ಲೋಕವನ್ನು ಧ್ವಂಸಮಾಡುವರು. ಅವರ ಕೈಗೆ ಸಿಕ್ಕದವರನ್ನು ನಾನು ರಕ್ಷಿಸೆನು.”


“ರೋಷಭರಿತನಾಗಿ ನೀನು ಬೆನ್ನಟ್ಟಿಬಂದೆ ದಯೆದಾಕ್ಷಿಣ್ಯವಿಲ್ಲದೆ ನಮ್ಮನ್ನು ಹತಿಸಿದೆ.


ಹಿರಿಕಿರಿಯರಾದ ಎಲ್ಲರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ಹಾಗು ನಾಶಮಾಡದೆ ಬಿಡೆನು,’ ಇದು ಸರ್ವೇಶ್ವರನಾದ ನನ್ನ ನುಡಿ.”


ಸರ್ವೇಶ್ವರ ಸಿದ್ಧಿಗೆ ತಂದಿದ್ದಾನೆ ತನ್ನ ಸಂಕಲ್ಪವನ್ನು ಈಡೇರಿಸಿದ್ದಾನೆ ಪುರಾತನ ಕಾಲದಲ್ಲಿ ತಾನು ನುಡಿದುದನ್ನು. ನಿನ್ನನ್ನು ಧ್ವಂಸಮಾಡಿದ್ದಾನೆ ದಯೆದಾಕ್ಷಿಣ್ಯವಿಲ್ಲದೆ. ಆನಂದ ತಂದಿದ್ದಾನೆ ವೈರಿಗಳಿಗೆ ಕೋಡುಮೂಡಿಸಿದ್ದಾನೆ ವಿರೋಧಿಗಳಿಗೆ !


ಸ್ವಾಮಿ ಯಕೋಬಿನ ನಿವಾಸಿಗಳನ್ನು ನಾಶಪಡಿಸಿಹನು, ರೌದ್ರದಿಂದ ಯೆಹೂದ ಕೋಟೆಗಳನ್ನು ನೆಲಸಮವಾಗಿಸಿಹನು, ರಾಜ್ಯವನ್ನೂ ಅದರ ಪಾಲಕರನ್ನೂ ನೀಚಸ್ಥಿತಿಗೆ ಇಳಿಸಿಹನು.


“ಸ್ವಾಮಿ ತೃಣೀಕರಿಸಿದನು ನನ್ನ ಶೂರರನ್ನೆಲ್ಲಾ ನನ್ನ ಕಣ್ಮುಂದೆಯೇ. ಸೈನ್ಯಸಮೂಹವನ್ನೆ ಬರಮಾಡಿದನು ನನ್ನ ಯುವಕರನ್ನು ಸದೆಬಡಿಯಲೆಂದೇ. ಯೆಹೂದಿಯೆಂಬ ಯುವತಿಯನ್ನು ತುಳಿಸಿದನು ತೊಟ್ಟಿಯಲ್ಲಿ ದ್ರಾಕ್ಷಿ ತುಳಿವಂತೆ.


ಆದರೆ ಈಗ ಅವರ ಮಕ್ಕಳು ಕ್ಷಾಮಕ್ಕೆ ಗುರಿಯಾಗಲಿ. ಕತ್ತಿಗೆ ತುತ್ತಾಗಲಿ. ಅವರ ಮಡದಿಯರು ವಿಧವೆಯರಾಗಲಿ, ಮಕ್ಕಳನ್ನು ಕಳೆದುಕೊಳ್ಳಲಿ, ಅವರ ಗಂಡಂದಿರು ಸತ್ತುಬೀಳಲಿ. ಯುವಕರು ಕಾಳಗ-ಕತ್ತಿಗೆ ಬಲಿಯಾಗಲಿ.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಯುವಜನರು ಖಡ್ಗಕ್ಕೆ ತುತ್ತಾಗುವಂತೆ ಮಾಡಿದೆ. ನಿಮ್ಮ ಕುದುರೆಗಳು ಸೂರೆಯಾಗುವಂತೆ ಮಾಡಿದೆ. ನಿಮ್ಮ ದಂಡಿನವರ ಹೆಣಗಳು ಕೊಳೆತು ನಾರುವ ದುರ್ವಾಸನೆ ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರಸ್ವಾಮಿ.


ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.


ಆದಕಾರಣ ನಾನೂ ಕೋಪೋದ್ರೇಕದಿಂದ ವರ್ತಿಸುವೆನು. ಅವರನ್ನು ಕಟಾಕ್ಷಿಸೆನು, ಉಳಿಸೆನು; ಅವರು ನನ್ನ ಕಿವಿಯಲ್ಲಿ ಎಷ್ಟು ಗಟ್ಟಿಯಾಗಿ ಕೂಗಿಕೊಂಡರೂ ನಾನು ಆಲಿಸೆನು.”


ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು. ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಸರ್ವೇಶ್ವರನಾದ ನಾನು ದಂಡಿಸುವವನು ಎಂಬುದು ನಿನಗೆ ಚೆನ್ನಾಗಿ ಗೊತ್ತಾಗುವುದು.


ನಿನ್ನನ್ನು ಕಟಾಕ್ಷಿಸೆನು, ಉಳಿಸೆನು; ನಿನ್ನ ದುರ್ಮಾರ್ಗದ ಫಲವನ್ನು ನಿನಗೆ ತಿನ್ನಿಸುವೆನು; ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವುವು; ಆಗ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು.”


“ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷಮಿಸೆನು.


“ಸರ್ವೇಶ್ವರನು ನ್ಯಾಯಸ್ವರೂಪಿ, ನಾನಾದರೊ ಆತನ ಆಜ್ಞೆ ಮೀರಿದ ದ್ರೋಹಿ. ಜನಾಂಗಗಳೇ, ನೀವೆಲ್ಲರು ಕಿವಿಗೊಡಿ, ನನ್ನ ಸಂಕಟ ನೋಡಿ ! ನನ್ನ ಯುವಕ ಯುವತಿಯರು, ಇಗೋ, ಸೆರೆಹೋಗಿರುವರು ನೋಡಿ.


ರಥವನ್ನೂ ಸಾರಥಿಯನ್ನೂ ಸ್ತ್ರೀಪುರುಷರನ್ನೂ ಬಾಲವೃದ್ಧರನ್ನೂ.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ಅವರ ವಿಷಯವಾಗಿ ಸರ್ವೇಶ್ವರ, “ಇಗೋ ಅವರನ್ನು ನಾನು ದಂಡಿಸಿಯೇ ತೀರುವೆನು. ಅವರ ಯುವಕರು ಕತ್ತಿಗೆ ತುತ್ತಾಗುವರು. ಅವರ ಗಂಡುಹೆಣ್ಣು ಮಕ್ಕಳು ಕ್ಷಾಮದಿಂದ ಸಾಯುವರು.


ಏಕೆಂದರೆ ಮೃತ್ಯು ನಮ್ಮ ಕಿಟಕಿಗಳನ್ನು ಏರಿಬಂದಿದೆ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿಬಿಟ್ಟಿದೆ ಬೀದಿಗಳಲ್ಲಿ ಮಕ್ಕಳೂ ಕಡಿದುಬಿದ್ದರು ಚೌಕಗಳಲ್ಲಿ ಯುವಕರೂ ಇಲ್ಲವಾದರು.


ಆದಕಾರಣವೇ ನಿಮ್ಮ ಕೋಪ ನನ್ನಲ್ಲೂ ತುಂಬಿತುಳುಕುತ್ತಿದೆ. ಅದನ್ನು ತಡೆದು ನನಗೆ ಸಾಕಾಗಿದೆ,” ಎಂದೆನು. ಆಗ ಸರ್ವೇಶ್ವರ ನನಗೆ : “ಹಾಗಾದರೆ ಆ ಕೋಪವನ್ನು ಬೀದಿಯಲ್ಲಿನ ಮಕ್ಕಳ ಮೇಲೂ ಯುವಕರ ಕೂಟ಼ಗಳ ಮೇಲೂ ಕಾರಿಬಿಡು. ಗಂಡಹೆಂಡತಿಯರನ್ನೂ ಮುದುಕರನ್ನೂ ವಯೋವೃದ್ಧರನ್ನೂ ಅಪಹರಿಸಲಾಗುವುದು.


ಮರಗಳ ರೆಂಬೆಕೊಂಬೆಗಳು ಒಣಗಿ ಮುರಿದುಹೋಗಿವೆ. ಹೆಂಗಸರ ಕೈಗೆ ಒಲೆಪಾಲಾಗುವ ಸೌದೆಯಾಗಿವೆ. ಈ ಪ್ರಜೆಗಳು ಮಂದಮತಿಗಳೇ ಸರಿ. ಈ ಕಾರಣ, ಸೃಷ್ಟಿಕರ್ತನು ಇವರನ್ನು ಕರುಣಿಸನು. ನಿರ್ಮಿಸಿದಾತನು ಇವರಿಗೆ ದಯೆ ತೋರಿಸನು.


ಪತ್ರಗಳನ್ನು ಅಂಚೆಯವರ ಮುಖಾಂತರ ಎಲ್ಲಾ ರಾಜಸಂಸ್ಥಾನಗಳಿಗೆ ಕಳಿಸಲಾಯಿತು. ಅವುಗಳಲ್ಲಿ ಈ ರೀತಿ ಬರೆದಿತ್ತು: “ಒಂದೇ ದಿನದಲ್ಲಿ, ಅಂದರೆ, ಹನ್ನೆರಡನೆ ತಿಂಗಳಾದ ಫಾಲ್ಗುಣ ಮಾಸದ ಹದಿಮೂರನೆಯ ದಿನದಲ್ಲಿ ಹಿರಿಯರು, ಕಿರಿಯರು, ಮಕ್ಕಳು, ಮಹಿಳೆಯರೆನ್ನದೆ ನಿಮ್ಮ ಮಧ್ಯೆ ವಾಸಿಸುವ ಎಲ್ಲಾ ಯೆಹೂದ್ಯರನ್ನು ಕೊಂದುಹಾಕಿ, ನಿರ್ಮೂಲಮಾಡಿ, ನಿರ್ನಾಮಗೊಳಿಸಿ.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವುದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನು, ಹೆಂಗಸರನ್ನು, ಮಕ್ಕಳನ್ನು, ಶಿಶುಗಳನ್ನು ಹಾಗು ಎತ್ತು, ಕುರಿ, ಕತ್ತೆ, ಒಂಟೆ ಇವುಗಳನ್ನೂ ಉಳಿಸದೆ ಕೊಂದುಹಾಕು ಎಂದು ಹೇಳುತ್ತಾರೆ ಸೇನಾಧೀಶ್ವರರಾದ ಸರ್ವೇಶ್ವರ,” ಎಂದನು.


ಅಲ್ಲಿದ್ದ ಗಂಡಸರು, ಹೆಂಗಸರು, ಯುವಕರು, ಮುದುಕರು, ದನ ಕುರಿ, ಕತ್ತೆ ಇವುಗಳನ್ನೆಲ್ಲಾ ನಿಶ್ಯೇಷವಾಗಿ ಕತ್ತಿಯಿಂದ ಸಂಹರಿಸಿಬಿಟ್ಟರು.


ಆ ಜನಾಂಗದವರು ಕ್ರೂರಮುಖವುಳ್ಳವರು; ನೀವು ವೃದ್ಧರೆಂದು ಮರ್ಯಾದೆ ತೋರಿಸುವುದಿಲ್ಲ, ಚಿಕ್ಕವರೆಂದು ಕನಿಕರಿಸುವುದಿಲ್ಲ.


ಹೊರಗೆ ಕತ್ತಿ, ಒಳಗೆ ಭಯಭೀತಿ ಇವರಲ್ಲಿರುವುವು. ಯುವಕ ಯುವತಿಯರು, ಮಕ್ಕಳು ಮುದುಕರು ಕತ್ತಿಕಠಾರಿಗಳಿಗೆ ತುತ್ತಾಗುವರು ಇವರೆಲ್ಲರು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಆ ದಿನದಂದು ಗಟ್ಟಿಮುಟ್ಟಾದ ಯುವಕ ಯುವತಿಯರೂ ಬಾಯಾರಿಕೆಯಿಂದ ಮೂರ್ಛೆಹೋಗುವರು.


ಸಿಯೋನ್ ನಗರಿ ಪ್ರಸವವೇದನೆ ಪಡುವವಳಂತೆ ಚೊಚ್ಚಲ ಹೆರಿಗೆಯ ವೇದನೆಯನ್ನು ಅನುಭವಿಸುವವಳಂತೆ ಕಿರಿಚಿಕೊಳ್ಳುವ ಕೂಗನ್ನು ನಾನು ಕೇಳಿದ್ದೇನೆ. ಉಬ್ಬಸಪಡುತ್ತಾ ಎರಡು ಕೈಗಳನ್ನೂ ಚಾಚಿ ‘ಅಯ್ಯೋ ನನಗೆ ಕೇಡು, ಕೊಲೆಗಡುಕನ ಮುಂದೆ ನನ್ನ ಪ್ರಾಣ ಉಡುಗುತ್ತಿದೆ’ ಎಂದು ಅರುಚಿಕೊಳ್ಳುತ್ತಿಹಳು.


ನಾನು : “ಮಹಿಳೆಯರೇ, ಸರ್ವೇಶ್ವರ ಸ್ವಾಮಿಯ ನುಡಿಯನ್ನು ಕೇಳಿರಿ ಅವರ ಬಾಯಿಂದ ಹೊರಟ ಮಾತಿಗೆ ಕಿವಿ ತೆಗೆಯಿರಿ ನಿಮ್ಮ ಹೆಣ್ಣುಮಕ್ಕಳಿಗೂ ಗೋಳಾಟವನ್ನು ಕಲಿಸಿರಿ ಪ್ರತಿಯೊಬ್ಬಳೂ ತನ್ನ ನೆರೆಯವಳಿಗೆ ಶೋಕಗೀತೆಯನ್ನು ಹೇಳಿಕೊಡಲಿ.


ಇಸ್ರಯೇಲ್ ವಂಶದವರಿಗೆ ಹೀಗೆ ಸಾರು - ಹಾ, ನಿಮಗೆ ಮುಖ್ಯಬಲ, ನೇತ್ರಾನಂದ ಹಾಗು ಪ್ರಾಣಪ್ರಿಯ ಆದ ನನ್ನ ಪವಿತ್ರಾಲಯವನ್ನು ನಾನು ಅಪವಿತ್ರಮಾಡಿಸುವೆನು; ನೀವು ಬಿಟ್ಟುಬಂದಿರುವ ನಿಮ್ಮ ಗಂಡು ಹೆಣ್ಣುಮಕ್ಕಳು ಖಡ್ಗಕ್ಕೆ ತುತ್ತಾಗುವರು, ಎಂಬುದಾಗಿ ಸರ್ವೇಶ್ವರನಾದ ದೇವರು ನುಡಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು