Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:22 - ಕನ್ನಡ ಸತ್ಯವೇದವು C.L. Bible (BSI)

22 ಸುತ್ತಮುತ್ತಲೂ ದಿಗಿಲು ಹುಟ್ಟಿಸುವ ನನ್ನ ಹಗೆಗಳನ್ನೆ ಕರೆಸಿದೆಯಲ್ಲಾ ಹಬ್ಬಕ್ಕೋ ಎಂಬಂತೆ ! ಸರ್ವೇಶ್ವರನ ಪ್ರಕೋಪದ ದಿನದಂದು ತಪ್ಪಿಸಿಕೊಳ್ಳಲಿಲ್ಲ ಯಾರೂ; ಉಳಿಯಲಿಲ್ಲ ಯಾರೂ. ಶತ್ರು ಸಂಹರಿಸಿಬಿಟ್ಟನಲ್ಲಾ ನಾನು ಸಾಕಿ ಆರೈಕೆ ಮಾಡಿದವರನ್ನೂ !

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಮಹೋತ್ಸವಕ್ಕೆ ಕರೆಯಿಸಿದಂತೆ ನನ್ನನ್ನು ಹೆದರಿಸುವ ದಿಗಿಲುಗಳನ್ನು ನನ್ನ ಸುತ್ತುಮುತ್ತಲು ಕರೆಯಿಸಿದ್ದೀ; ಯೆಹೋವನು ಕೋಪತೀರಿಸಿಕೊಳ್ಳುವ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಿಲ್ಲ, ಯಾರೂ ಉಳಿಯಲಿಲ್ಲ; ನಾನು ನಲಿದಾಡಿಸಿ ಸಾಕಿದವರನ್ನು ನನ್ನ ಶತ್ರುವು ಸಂಹರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಭೀತಿಯು ಸುತ್ತಮುತ್ತಲಿಂದ ನನ್ನ ಕಡೆಗೆ ಬರುವಂತೆ ನೀನು ಆಹ್ವಾನಿಸಿದೆ. ಯೆಹೋವನ ಕೋಪದ ದಿನದಂದು ಯಾರೂ ತಪ್ಪಿಸಿಕೊಳ್ಳಲಿಲ್ಲ. ಯಾರೂ ಉಳಿಯಲಿಲ್ಲ. ನಾನು ಸಾಕಿಸಲಹಿದವರನ್ನು ನನ್ನ ವೈರಿಯು ಸಂಹರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಹಬ್ಬದ ದಿನಕ್ಕೆ ಕರೆಯುವಂತೆಯೇ ನನ್ನ ವಿರುದ್ಧವಾಗಿ ಪ್ರತಿಯೊಂದು ದಿಕ್ಕಿನಲ್ಲಿಯ ವಿರೋಧಿಗಳನ್ನು ಕರೆದಿದ್ದೀರಿ. ಯೆಹೋವ ದೇವರ ಕೋಪದ ದಿನದಲ್ಲಿ ಯಾರೂ ತಪ್ಪಿಸಿಕೊಳ್ಳಲಾರರು, ಉಳಿದುಕೊಳ್ಳಲಾರರು. ನಾನು ಬೆಳೆಸಿ ಸಾಕಿದವರನ್ನು ವೈರಿಯು ನಾಶಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:22
16 ತಿಳಿವುಗಳ ಹೋಲಿಕೆ  

ಊರ ಹೊರಗೆ ಹೋಗುವಂತಿಲ್ಲ, ದಾರಿಯಲ್ಲಿ ನಡೆಯುವಂತಿಲ್ಲ. ಸುತ್ತಮುತ್ತಲೂ ಶತ್ರುವಿನ ಕತ್ತಿ, ಎಲ್ಲೆಲ್ಲೂ ದಿಗಿಲು ಎಂದರೆ ದಿಗಿಲು!”


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಮರುದಿನ ಆ ಪಷ್ಹೂರನು ಯೆರೆಮೀಯನನ್ನು ಸೆರೆಯಿಂದ ಬಿಡಿಸಿದಾಗ ಯೆರೆಮೀಯ ಅವನಿಗೆ ಹೀಗೆಂದು ಹೇಳಿದನು: “ಸರ್ವೇಶ್ವರ ನಿನ್ನ ಹೆಸರನ್ನು ಪಷ್ಹೂರ್ ಎಂದು ಕರೆಯದೆ ‘ಮಾಗೋರ್ ಮಿಸ್ಸಾಬೀಬ್’ ಎಂದು ಕರೆದಿದ್ದಾರೆ.


ನಿಮ್ಮ ಸಂತಾನಗಳಿಗೆ, ವ್ಯವಸಾಯಗಳಿಗೆ, ಹಾಗು ದನಕುರಿಗಳಿಗೆ ಅಶುಭ ಉಂಟಾಗುವುದು.


ಅದು ಹಾದುಹೋಗುವಾಗಲೆಲ್ಲಾ ನಿಮ್ಮನ್ನು ಹಿಡಿದುಬಿಡುವುದು. ಪ್ರತಿದಿನವೂ ಹಗಲೂ ರಾತ್ರಿ ಅದು ಹಾದುಹೋಗುವುದು. ಸರ್ವೇಶ್ವರ ಸ್ವಾಮಿಯ ಈ ಸಂದೇಶವನ್ನು ಅರ್ಥಮಾಡಿಕೊಳ್ಳುವವರಿಗೆ ಭಯಭ್ರಾಂತಿ ಉಂಟಾಗುವುದು.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


“ಹೀಗಿರಲು, ಸೇನಾಧೀಶ್ವರ ಸ್ವಾಮಿಯೂ ಇಸ್ರಯೇಲಿನ ದೇವರೂ ಆದ ಸರ್ವೇಶ್ವರ ಈಗ ಹೇಳುವುದನ್ನು ಕೇಳಿ: ‘ಈ ದೊಡ್ಡ ಕೇಡನ್ನು ನಿಮಗೆ ನೀವೆ ಬರಮಾಡಿಕೊಳ್ಳುವುದು ಸರಿಯೆ? ಈ ದುರಾಚಾರದ ನಿಮಿತ್ತ ಜುದೇಯದ ಗಂಡಸರು, ಹೆಂಗಸರು, ಮಕ್ಕಳು, ಮೊಲೆಕೂಸುಗಳು ನಿರ್ಮೂಲವಾಗುವರು. ನಿಮ್ಮಲ್ಲಿ ಯಾರೂ ಉಳಿಯರು.


ಸರ್ವೇಶ್ವರಸ್ವಾಮಿ ಬಾಬಿಲೋನಿಯದ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೊಪ್ಪಿಸಿದರು. ಅವನು ಅವರ ಯುವ ಯೋಧರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿದನು. ಯುವಕರನ್ನು, ಕನ್ಯೆಯರನ್ನು, ವೃದ್ಧರನ್ನು ಹಾಗು ಅತಿವೃದ್ಧರನ್ನು ಕನಿಕರಿಸದೆ ಎಲ್ಲರನ್ನು ಕೊಲ್ಲಿಸಿದನು.


“ಸ್ವಾಮೀ, ನೀವು ಜುದೇಯವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿರೊ? ಸಿಯೋನಿನ ಬಗ್ಗೆ ನಿಮಗೆ ಮನಃಪೂರ್ವಕವಾದ ಅಸಹ್ಯ ಹುಟ್ಟಿದೆಯೊ? ಗುಣವಾಗದಂಥ ಪೆಟ್ಟನ್ನು ನಮಗೆ ಕೊಟ್ಟಿರುವಿರಿ ಏಕೆ? ಸುಖವನ್ನು ನಿರೀಕ್ಷಿಸಿದೆವು, ಸಿಗಲಿಲ್ಲ ನಮಗೆ ಯಾವ ಫಲ. ಸುಕ್ಷೇಮವನ್ನು ಎದುರು ನೋಡಿದೆವು, ಇಗೋ ಬಂದೊದಗಿದೆ ಸಂಕಟ.


ಬಳಿಕ ನಾನು ಜುದೇಯದ ಅರಸ ಚಿದ್ಕೀಯನನ್ನೂ ಅವನ ಸೇವಕರನ್ನೂ ಹಾಗೂ ವ್ಯಾಧಿ, ಖಡ್ಗ, ಕ್ಷಾಮಗಳಿಂದ ಅಳಿಯದೆ ಉಳಿದ ಪ್ರಜೆಗಳನ್ನೂ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಕೈಗೂ ಅವರ ಪ್ರಾಣವನ್ನು ಹುಡುಕುತ್ತಿರುವ ಅವರ ಶತ್ರುಗಳ ಕೈಗೂ ಬಿಟ್ಟುಬಿಡುವೆನು. ಅವನು ಅವರನ್ನು ಕತ್ತಿಯಿಂದ ಕೊಂದುಹಾಕುವನು. ಅವರನ್ನು ಕರುಣಿಸನು, ಕನಿಕರಿಸನು, ಉಳಿಯಗೊಳಿಸನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು