ಪ್ರಲಾಪಗಳು 2:5 - ಕನ್ನಡ ಸತ್ಯವೇದವು C.L. Bible (BSI)5 ಸ್ವಾಮಿಯೇ ಶತ್ರುವಾಗಿ ಕಬಳಿಸಿದ ಇಸ್ರಯೇಲನ್ನು ನಾಶಮಾಡಿದ ಅದರ ಅರಮನೆಗಳೆಲ್ಲವನ್ನು ನೆಲಸಮಗೊಳಿಸಿದ ಅದರ ಕೋಟೆಕೊತ್ತಲಗಳನ್ನು ಯಥೇಚ್ಛವಾಗಿಸಿದ ಯೆಹೂದ ನಾಡಿನ ಗೋಳಾಟವನ್ನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಪ್ರಲಾಪ ಮತ್ತು ಗೋಳಾಟವನ್ನು ಹೆಚ್ಚಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಕರ್ತನು ವೈರಿಯಾಗಿ ಇಸ್ರಾಯೇಲನ್ನು ನುಂಗಿದ್ದಾನೆ; ಅದರ ಅರಮನೆಗಳನ್ನೆಲ್ಲಾ ತಿಂದುಬಿಟ್ಟು ಅದರ ಕೋಟೆಕೊತ್ತಲಗಳನ್ನು ನಾಶಮಾಡಿದ್ದಾನೆ; ಯೆಹೂದ ಸೀಮೆಯಲ್ಲಿ ಅರಿಚಾಟಕಿರಿಚಾಟವನ್ನು ಹೆಚ್ಚಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆತನು ಒಬ್ಬ ಶತ್ರುವಿನಂತಾಗಿದ್ದಾನೆ. ಆತನು ಇಸ್ರೇಲನ್ನು ನಾಶಮಾಡಿದನು. ಆತನು ಅವಳ ಎಲ್ಲ ಅರಮನೆಗಳನ್ನು ನುಂಗಿಬಿಟ್ಟನು. ಆತನು ಅವಳ ಎಲ್ಲ ಕೋಟೆಗಳನ್ನು ನುಂಗಿಬಿಟ್ಟನು. ಯೆಹೂದ ಜನಾಂಗದಲ್ಲಿ ಆತನು ಹೆಚ್ಚಿನ ದುಃಖವನ್ನು ಉಂಟುಮಾಡಿ ಶೋಕವನ್ನು ಹರಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಕರ್ತದೇವರು ಶತ್ರುವಿನಂತೆ ಆಗಿ, ಇಸ್ರಾಯೇಲನ್ನು ನುಂಗಿಬಿಟ್ಟಿದ್ದಾರೆ. ಕರ್ತದೇವರು ಅವನ ಭದ್ರವಾದ ಸ್ಥಾನಗಳನ್ನೆಲ್ಲಾ ನಾಶಮಾಡಿದ್ದಾರೆ. ಯೆಹೂದದ ದುಃಖವನ್ನೂ, ಪ್ರಲಾಪವನ್ನೂ ಹೆಚ್ಚಿಸಿದ್ದಾರೆ. ಅಧ್ಯಾಯವನ್ನು ನೋಡಿ |