Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 2:6 - ಕನ್ನಡ ಸತ್ಯವೇದವು C.L. Bible (BSI)

6 ತನ್ನ ಗರ್ಭಗುಡಿಯನ್ನೂ ಉತ್ಸವಸ್ಥಾನವನ್ನೂ ಹಾಳುಮಾಡಿದ ತೋಟದ ಗುಡಿಸಲನ್ನೋ ಎಂಬಂತೆ. ಮಹೋತ್ಸವಗಳನ್ನೂ ಸಬ್ಬತ್‍ದಿನಗಳನ್ನೂ ಅಳಿಸಿಬಿಟ್ಟ ನೆನಪಿಗೂ ಬಾರದಂತೆ. ರಾಜರನ್ನೂ ಯಾಜಕರನ್ನೂ ಸರ್ವೇಶ್ವರ ಧಿಕ್ಕರಿಸಿದ ಅತಿ ರೋಷಾವೇಷಗೊಂಡವನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ, ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಮತ್ತು ಯಾಜಕರನ್ನೂ ಧಿಕ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ತನ್ನ ಸಾನ್ನಿಧ್ಯದ ಗುಡಾರವನ್ನು ತೋಟದ ಗುಡಿಸಲನ್ನೋ ಎಂಬಂತೆ ಹಾಳುಮಾಡಿ ತನ್ನ ಉತ್ಸವಸ್ಥಾನವನ್ನು ನಾಶಪಡಿಸಿದ್ದಾನೆ; ಮಹೋತ್ಸವಗಳು ಮತ್ತು ಸಬ್ಬತ್ ದಿನಗಳು ಚೀಯೋನಿನಲ್ಲಿ ಯಾರ ನೆನಪಿಗೂ ಬಾರದಂತೆ ಮಾಡಿ ಯೆಹೋವನು ಅತಿರೋಷಗೊಂಡು ರಾಜನನ್ನೂ ಯಾಜಕನನ್ನೂ ಧಿಕ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯೆಹೋವನು ತನ್ನ ಸ್ವಂತ ಗುಡಾರವನ್ನು ಒಂದು ತೋಟವೋ ಎಂಬಂತೆ ಹಾಳುಮಾಡಿದ್ದಾನೆ. ಜನರು ಆತನನ್ನು ಆರಾಧಿಸಲು ಸೇರಿಬರುತ್ತಿದ್ದ ಸ್ಥಳವನ್ನು ನಾಶಪಡಿಸಿದ್ದಾನೆ. ಚೀಯೋನಿನಲ್ಲಿ ಜನರು ಮಹೋತ್ಸವಗಳನ್ನು ಮತ್ತು ವಿಶೇಷ ವಿಶ್ರಾಂತಿ ದಿನಗಳನ್ನು ಮರೆಯುವಂತೆ ಯೆಹೋವನು ಮಾಡಿದ್ದಾನೆ. ಯೆಹೋವನು ರಾಜನನ್ನು ಮತ್ತು ಯಾಜಕರನ್ನು ತಿರಸ್ಕರಿಸಿದ್ದಾನೆ. ಆತನು ತನ್ನ ಕಡುಕೋಪದಿಂದ ಅವರನ್ನು ತಿರಸ್ಕರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 2:6
25 ತಿಳಿವುಗಳ ಹೋಲಿಕೆ  

ತಡೆದುಬಿಡುವನು ಸರ್ವವಿನಾಶವನು ದೂರಮಾಡುವನು ನಿನ್ನಿಂದ ನಿಂದೆ ಅಪಮಾನವನು.


ಬಿಕೋ ಎನ್ನುತ್ತಿವೆ ಸಿಯೋನಿಗೆ ತೆರಳುವ ಮಾರ್ಗಗಳು ಮಹೋತ್ಸವಕ್ಕೆ ಇನ್ನು ಬರುತ್ತಿಲ್ಲ ಯಾತ್ರಿಕರಾರು ಪಾಳುಬಿದ್ದಿವೆ ಅದರ ಬಾಗಿಲುಗಳು ನಿಟ್ಟುಸಿರಿಡುತ್ತಿರುವರು ಅದರ ಯಾಜಕರು ವ್ಯಥೆಪಡುತ್ತಿರುವರು ಅದರ ಯುವತಿಯರು ನಗರಕ್ಕೆ ನಗರವೇ ದುಃಖದಲ್ಲಿ ಮುಳುಗಿರುವುದು.


ಸರ್ವೇಶ್ವರನ ದೃಷ್ಟಿ ಅವರನ್ನು ಚದರಿಸಿದೆ ಇನ್ನು ಆತ ತೋರನು ಅವರಿಗೆ ಕರುಣೆ. ಯಾಜಕರಾದರೂ ಅವರಿಗೆ ಮರ್ಯಾದೆ ತಪ್ಪಿಹೋಗಿದೆ ಹಿರಿಯರಾದರೂ ಅವರಿಗೆ ಆದರಣೆ ಇಲ್ಲದಿದೆ.


“ನೀವು ನನ್ನ ಮಾರ್ಗವನ್ನು ಅನುಸರಿಸಲಿಲ್ಲ. ಧರ್ಮಶಾಸ್ತ್ರವನ್ನು ಬೋಧಿಸುವಾಗ ಪಕ್ಷಪಾತಮಾಡಿದ್ದೀರಿ. ಆದ್ದರಿಂದ ಎಲ್ಲ ಜನರು ನಿಮ್ಮನ್ನು ಹೀಯಾಳಿಸಿ ಕೀಳಾಗಿ ಕಾಣುವಂತೆ ಮಾಡುವೆನು.


ಏಕೆಂದರೆ ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಪ್ಪಂದವನ್ನೂ ಮೀರಿದನಲ್ಲವೇ? ಕೈಯ ಮೇಲೆ ಕೈಯಿಟ್ಟು ಭಾಷೆಮಾಡಿ ಪ್ರಯೋಜನವೇನು? ಅದನ್ನೆಲ್ಲಾ ಮುರಿದುಬಿಟ್ಟನಲ್ಲವೇ? ಇವನು ನನ್ನಿಂದ ಪಾರಾಗನು.


ನಮ್ಮ ನಾಯಕರ ಕೈಗಳನ್ನು ನೇತುಹಾಕಿದ್ದಾರೆ ಗಲ್ಲಿಗೆ ನಮ್ಮ ಹಿರಿಯರನ್ನು ಗುರಿಪಡಿಸಿದ್ದಾರೆ ಮಾನಭಂಗಕ್ಕೆ.


ಯಾವನನ್ನು ಕುರಿತು ನಾವು: “ನಮ್ಮ ಬಾಳಿನ ಉಸಿರು, ದೇವರಿಂದ ಅಭಿಷಿಕ್ತನು, ಇವನ ಆಶ್ರಯದಿಂದಲೆ ರಾಷ್ಟ್ರಗಳ ನಡುವೆ ನಮಗೆ ಉಳಿವು” ಎಂದುಕೊಂಡೆವೋ ಅಂಥವನೇ ಸಿಕ್ಕಿಬಿದ್ದಿದ್ದಾನೆ ಹಗೆಗಳು ತೋಡಿದ ಗುಳಿಯೊಳಗೆ!


ನಮ್ಮ ಪಿತೃಗಳು ನಿಮ್ಮನ್ನು ಕೀರ್ತಿಸುತ್ತಿದ್ದ ಆ ಸ್ಥಳವೇ, ಆ ನಮ್ಮ ಚೆಲುವ ಪವಿತ್ರಾಲಯವೇ, ಬೆಂಕಿಯ ಪಾಲಾಗಿದೆ. ನಮ್ಮ ಅಮೂಲ್ಯ ವಸ್ತುಗಳೆಲ್ಲ ನಾಶವಾಗಿವೆ.


ನಿಮ್ಮ ಸ್ವಕೀಯ ಜನರು ಸ್ವಲ್ಪಕಾಲ ಮಾತ್ರ ಅನುಭವಿಸಿದಾ ನಿಮ್ಮ ಪವಿತ್ರ ಗರ್ಭಗುಡಿಯನ್ನು ನಮ್ಮ ವೈರಿಗಳು ತುಳಿದು ಹಾಳುಮಾಡಿದರಲ್ಲಾ !


ಎಂದೇ ಗುರಿಮಾಡಿದೆ ಯಕೋಬನ್ನು ಶಾಪಕ್ಕೆ ಈಡುಪಡಿಸಿದೆ ಇಸ್ರಯೇಲನ್ನು ನಿಂದೆದೂಷಣೆಗೆ.”


ಕಿತ್ತೆಸೆಯುವೆನು ಅದರ ಬೇಲಿಯನು; ತುತ್ತಾಗುವುದದು ದನಕರುಗಳಿಗೆ. ಕೆಡವಿಹಾಕುವೆನು ಅದರ ಗೋಡೆಯನು; ಈಡಾಗುವುದದು ಪರರ ತುಳಿದಾಟಕ್ಕೆ.


ನಿಮ್ಮ ನೈವೇದ್ಯಗಳನ್ನು ಇನ್ನು ತರಬೇಡಿ, ಅವು ವ್ಯರ್ಥ. ನಿಮ್ಮ ಧೂಪಾರತಿ ನನಗೆ ಅಸಹ್ಯ. ನೀವು ಆಚರಿಸುವ ಹಬ್ಬ ಹುಣ್ಣಿಮೆ, ಸಬ್ಬತ್ ವಿಶ್ರಾಂತಿ, ನಿಮ್ಮ ಸಭೆಕೂಟಗಳು ನನಗೆ ಬೇಡ. ಅಧರ್ಮದಿಂದ ಕೂಡಿದ ಇಂಥ ಸಮಾರಂಭಗಳು ನನಗೆ ಇಷ್ಟವಿಲ್ಲ.


ಸಿಯೋನ್ ನಗರವೊಂದೇ ಮುತ್ತಿಗೆಗೆ ತುತ್ತಾದ ಪಟ್ಟಣದಂತೆ, ದ್ರಾಕ್ಷಾತೋಟದ ಅಟ್ಟಣಿಯಂತೆ, ಸೌತೆ ಹೊಲದ ಗುಡಿಸಿಲಿನಂತೆ ಸುರಕ್ಷತೆಯ ಅವಕಾಶವಿಲ್ಲದೆ ಇದೆ.


ಸೀಳಿಬಿಟ್ಟಿರುವೆ ಅವನಾ ಪೌಳಿಗೋಡೆಗಳನು I ಹಾಳುಮಾಡಿಬಿಟ್ಟಿರುವೆ ಕೋಟೆಕೊತ್ತಲಗಳನು II


ಕಿತ್ತುಹಾಕಿದೆಯೇಕೆ ಅದರ ಬೇಲಿಯನು? I ತರಿದುಬಿಡುವವರಲ್ಲವೆ ದಾರಿಗರು ಅದನು? II


ಆತನ ಬಿಡಾರ ಸಾಲೇಮಿನಲಿ I ಆತನ ನಿವಾಸ ಸಿಯೋನಿನಲಿ II


ಆದರೆ ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಹೊತ್ತು, ಜೆರುಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಗೊಳ್ಳದೆ, ಆ ಸಬ್ಬತ್ ದಿನವನ್ನು ಪವಿತ್ರ ದಿನ ಎಂದು ಆಚರಿಸದೆಹೋದರೆ, ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು. ಅದು ಜೆರುಸಲೇಮಿನ ಅರಮನೆಗಳನ್ನು ದಹಿಸಿಬಿಡುವುದು, ಆ ಬೆಂಕಿ ಆರುವುದೇ ಇಲ್ಲ.”


“ಇಗೋ, ಬಾಬಿಲೋನಿನಿಂದ ತಪ್ಪಿಸಿಕೊಂಡು ಓಡಿಹೋಗುವವರ ಶಬ್ದ! ನಮ್ಮ ದೇವರಾದ ಸರ್ವೇಶ್ವರನು ತನ್ನ ಆಲಯವನ್ನುನಾಶಮಾಡಿದವರಿಗೆ ಮುಯ್ಯಿತೀರಿಸಿದ್ದಾರೆ ಎಂಬ ಸಮಾಚಾರವನ್ನು ಸಿಯೋನಿನಲ್ಲಿ ಸಾರಲು ಧಾವಿಸುತ್ತಿದ್ದಾರೆ ಆ ಜನ.


ನಿಮ್ಮ ಪಟ್ಟಣಗಳನ್ನು ಹಾಳುಮಾಡುವೆನು; ನಿಮ್ಮ ದೇವಸ್ಥಾನಗಳನ್ನು ನೆಲಸಮ ಮಾಡುವೆನು; ನೀವು ಸಮರ್ಪಿಸುವ ಸುಗಂಧದ್ರವ್ಯಗಳ ಸುವಾಸನೆಯನ್ನು ನಾನು ಮೂಸಿಯೂ ನೋಡುವುದಿಲ್ಲ.


ಅಗ್ನಿಗಾಹುತಿ ಮಾಡಿಹರು ನಿನ್ನ ನಾಮದ ಮಂದಿರವನು I ಹೊಲಸುಮಾಡಿ, ನೆಲಸಮಮಾಡಿಹರಿದೊ ನಿನ್ನ ದೇಗುಲವನು II


ಬಂಜರು ಭೂಮಿಯಾಗಿಸುವೆನು ಅದನ್ನು; ಕುಡಿಕತ್ತರಿಸುವರಾರೂ ಇರರು ಅದಕ್ಕೆ. ಮುಳ್ಳುಕಳೆ ಬೆಳೆಯುವುದು ಅದರೊಳಗೆ. ನೀಡುವೆನು ಆಣತಿಯೊಂದನು ಮೋಡಗಳಿಗೆ; ಸುರಿಸವು ತುಂತುರು ಮಳೆಯನ್ನೂ ಅದಕ್ಕೆ.


“ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಇಂತೆನ್ನುತ್ತಾರೆ: ‘ನನ್ನ ರೌದ್ರ ಕೋಪಾಗ್ನಿಯು ಜೆರುಸಲೇಮಿನ ಮೇಲೆ ಹೇಗೆ ಸುರಿಯಿತೋ ಹಾಗೆಯೆ ನೀವು ಈಜಿಪ್ಟಿನಲ್ಲಿ ಕಾಲಿಟ್ಟ ಕೂಡಲೆ ನನ್ನ ಕೋಪಾಗ್ನಿ ನಿಮ್ಮ ಮೇಲೆಯೂ ಸುರಿಯುವುದು. ನೀವು ಅಪವಾದ, ಅಪಹಾಸ್ಯಕ್ಕೂ, ಶಾಪ, ನಿಂದೆ, ದೂಷಣೆಗಳಿಗೂ ಗುರಿಯಾಗುವಿರಿ. ಈ ನಾಡನ್ನು ನೀವು ಮತ್ತೆ ನೋಡಲಾರಿರಿ.’


“ಸರ್ವೇಶ್ವರನ ಈ ವಾಣಿಯನ್ನು ಕೇಳು: ‘ನೋಡು, ನಾನು ಕಟ್ಟಿದ್ದನ್ನು ನಾನೇ ಕೆಡವುತ್ತೇನೆ. ನಾನು ನೆಟ್ಟಿದ್ದನ್ನು ನಾನೇ ಕಿತ್ತುಹಾಕುತ್ತೇನೆ. ಹೌದು ಜಗದಲ್ಲೆಲ್ಲ ಹಾಗೆ ಮಾಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು