ಪ್ರಲಾಪಗಳು 2:9 - ಕನ್ನಡ ಸತ್ಯವೇದವು C.L. Bible (BSI)9 ಹೂತುಹೋಗಿವೆ ಸಿಯೋನ್ ಹೆಬ್ಬಾಗಿಲುಗಳು ಚೂರುಚೂರಾಗಿ ಬಿದ್ದಿವೆ ಅದರ ಅಗುಳಿಗಳು. ಅರಸರೂ ಪಾಲಕರೂ ಸೇರಿಹೋದರು ಅನ್ಯಜನಾಂಗಗಳೊಳು. ನಿಂತುಹೋಗಿವೆ ಧರ್ಮಶಾಸ್ತ್ರ ಬೋಧನೆಗಳು. ಸರ್ವೇಶ್ವರನಿಂದ ಪ್ರವಾದಿಗಳಿಗೆ ಆಗುತ್ತಿದ್ದ ದಿವ್ಯದರ್ಶನಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಮತ್ತು ಸರದಾರರೂ ಮೋಶೆಯ ಧರ್ಮೋಪದೇಶವನ್ನು ಬೋಧಿಸದ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಅದರ ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಚೀಯೋನಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಕೊಂಡಿವೆ; ಅದರ ಅಗುಳಿಗಳನ್ನು ಮುರಿದು ಚೂರು ಚೂರು ಮಾಡಿದ್ದಾನೆ; ಅದರ ಅರಸನೂ ಸರದಾರರೂ ಅನ್ಯಜನಾಂಗಗಳೊಳಗೆ ಸೇರಿಕೊಂಡಿದ್ದಾರೆ; ಧರ್ಮೋಪದೇಶವೇ ಕಾಣೆ; ಅದರ ಪ್ರವಾದಿಗಳಿಗೆ ಕೂಡಾ ಯೆಹೋವನಿಂದ ಯಾವ ದರ್ಶನವೂ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಜೆರುಸಲೇಮಿನ ಹೆಬ್ಬಾಗಿಲುಗಳು ನೆಲದಲ್ಲಿ ಹೂತುಹೋಗಿವೆ. ಆತನು ಹೆಬ್ಬಾಗಿಲುಗಳ ಸರಳುಗಳನ್ನು ಮುರಿದು ಚೂರುಚೂರು ಮಾಡಿದ್ದಾನೆ. ಅವಳ ರಾಜನು ಮತ್ತು ರಾಜಕುಮಾರರು ಅನ್ಯಜನಾಂಗಗಳ ಮಧ್ಯದಲ್ಲಿದ್ದಾರೆ. ಆ ಜನರಿಗೆ ಉಪದೇಶ ಮಾಡಲು ಯಾರೂ ಇಲ್ಲ. ಪ್ರವಾದಿಗಳಿಗೆ ಯೆಹೋವನಿಂದ ಯಾವ ದರ್ಶನಗಳೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ. ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಅವಳ ಪ್ರಭುಗಳು ಇತರ ಜನಾಂಗಗಳ ಮಧ್ಯೆ ಇರುವರು. ಇನ್ನು ದೈವನಿಯಮವು ನಿಂತುಹೋಗಿವೆ. ಆಕೆಯ ಪ್ರವಾದಿಗಳು ಸಹ ಯೆಹೋವ ದೇವರಿಂದ ದರ್ಶನವನ್ನು ಕಂಡುಕೊಳ್ಳುವುದಿಲ್ಲ. ಅಧ್ಯಾಯವನ್ನು ನೋಡಿ |