Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:10 - ಕನ್ನಡ ಸತ್ಯವೇದವು C.L. Bible (BSI)

10 ನನಗಾಗಿ ಆತ ಹೊಂಚುಹಾಕುತ್ತಿರುವನು ಕರಡಿಯಂತೆ ಗುಹೆಯಲ್ಲಿ ಅಡಗಿಕೊಂಡಿರುವನು ಸಿಂಹದಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆತನು ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನಗೆ ಹೊಂಚುಹಾಕುತ್ತಿರುವ ಕರಡಿಯಂತಿದ್ದಾನೆ, ಗುಪ್ತಸ್ಥಳಗಳಲ್ಲಿ ಅಡಗಿಕೊಂಡಿರುವ ಸಿಂಹದ ಹಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಪಾಲಿಗಂತೂ ಯೆಹೋವನು ಆಕ್ರಮಣಮಾಡಲು ಸಿದ್ಧವಾಗಿರುವ ಕರಡಿಯಂತೆಯೂ ಅಡಗಿಕೊಂಡಿರುವ ಸಿಂಹದಂತೆಯೂ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ, ಗುಪ್ತ ಸ್ಥಳಗಳಲ್ಲಿರುವ ಸಿಂಹದ ಹಾಗೆಯೂ ಇದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:10
10 ತಿಳಿವುಗಳ ಹೋಲಿಕೆ  

ನನ್ನನ್ನು ಜನರು ಮರೆಹೋಗುತ್ತಾ ಹೀಗೆನ್ನುವರು: “ಬನ್ನಿ, ಸರ್ವೇಶ್ವರಸ್ವಾಮಿಯ ಬಳಿಗೆ ಹಿಂದಿರುಗೋಣ. ಅವರು ನಮ್ಮನ್ನು ಛಿದ್ರಗೊಳಿಸಿದವರು. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ; ಅವರೇ ನಮ್ಮ ಗಾಯಗಳನ್ನು ಕಟ್ಟಿ ಗುಣಪಡಿಸುವರು. ಒಂದೆರಡು ದಿನಗಳ ನಂತರ ಅವರು ನಮ್ಮನ್ನು ಬದುಕಿಸುವರು.


ಎಫ್ರಯಿಮಿಗೆ ನಾನು ಸಿಂಹ; ಯೆಹೂದ್ಯಕುಲಕ್ಕೆ ಪ್ರಾಯದ ಸಿಂಹ; ಅದನ್ನು ಸೀಳಿಬಿಡುವೆನು; ಎಳೆದುಕೊಂಡು ಹೋಗುವೆನು; ಯಾರೂ ಅದನ್ನು ನನ್ನಿಂದ ಬಿಡಿಸಿಕೊಳ್ಳಲಾರರು.


ಸಿಂಹವು ಮೇಲೆಬಿದ್ದು ಮೂಳೆ ಮುರಿದಂತೆ ನನಗಾಗುತ್ತಿತ್ತು ಅತೀವ ಬಾಧೆ, ಆದರೂ ಇರುಳೆಲ್ಲ ಮೊರೆಯಿಡುತ್ತಿದ್ದೆ ಬೆಳಗು ಬೈಗಿನೊಳಗೆ ನೀ ನನ್ನ ಮುಗಿಸುತ್ತಿರುವೆನೆಂದೆ.


ಹೊಂಚುಹಾಕುವನವನು ಗುಹೆಯೊಳಗಿನ ಸಿಂಹದಂತೆ I ಕಾಯ್ದು ಹಿಡಿದೆಳೆವನು ದಲಿತರನು ಬಲೆಗೆ ಬೀಳ್ವಂತೆ II


ನಾನು ತಲೆಯೆತ್ತಿದರೆ ಬೇಟೆಯಾಡುವೆ ನನ್ನನ್ನು ಸಿಂಹದಂತೆ ಮತ್ತೆ ನಿನ್ನ ಶಕ್ತಿ ಸಾಮರ್ಥ್ಯವನ್ನು ನನ್ನ ಮೇಲೆ ಪ್ರಯೋಗಿಸುವೆ.


ಇಹರು ಸೀಳಿಹಾಕಲಿರುವ ಕೇಸರಿಯಂತೆ I ಹೊಂಚು ಹಾಕುತಿಹರು ಪ್ರಾಯ ಸಿಂಹದಂತೆ II


ನನ್ನ ದಾರಿಗೆ ಅಡ್ಡವಾಗಿ ನೆಟ್ಟಿರುವನು ಮೊನಚು ಕಲ್ಲುಗಳನ್ನು, ಡೊಂಕು ಡೊಂಕು ಮಾಡಿರುವನು ನನ್ನ ಹಾದಿಯನ್ನು.


ಆತ ನನಗೆ ದಾರಿ ತಪ್ಪಿಸಿರುವನು ತುಂಡರಿಸಿ ದಿಕ್ಕಿಲ್ಲದವನಂತೆ ಮಾಡಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು