Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:2 - ಕನ್ನಡ ಸತ್ಯವೇದವು C.L. Bible (BSI)

2 ಆತ ನನ್ನನ್ನು ಕರೆದೊಯ್ದು ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನೇ ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಿ ಅಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಆತನು ನನ್ನನ್ನು ಕರೆದುಕೊಂಡು ಹೋಗಿ ಬೆಳಕಿನಲ್ಲಲ್ಲ, ಕತ್ತಲಲ್ಲೇ ನಡೆಯಮಾಡಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನು ನನ್ನನ್ನು ಬೆಳಕೇ ಇಲ್ಲದ ಕತ್ತಲೆಗೆ ನಡೆಸಿಕೊಂಡು ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರು ನನ್ನನ್ನು ಕರೆತಂದು ನಡೆಸಿದ್ದು ಕತ್ತಲೆಗೇ ಹೊರತು ಬೆಳಕಿಗಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:2
11 ತಿಳಿವುಗಳ ಹೋಲಿಕೆ  

ಆಗ ಜನರು ಹೀಗೆನ್ನುತ್ತಾರೆ : ಈ ಕಾರಣದಿಂದಲೇ ನ್ಯಾಯನಿರ್ಣಯವು ನಮ್ಮಿಂದ ದೂರವಾಗಿದೆ, ಸದ್ಧರ್ಮವು ನಮಗೆ ದೊರಕದೆ ಇದೆ. ಬೆಳಕಿಗಾಗಿ ಕಾದಿರುವ ನಮ್ಮನ್ನು ಕತ್ತಲು ಆವರಿಸಿದೆ. ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಮ್ಮನ್ನು ಅಂಧಕಾರವೇ ಬೆನ್ನಟ್ಟುತ್ತಿದೆ.


ನಾನು ಒಳಿತನು ನಿರೀಕ್ಷಿಸಿದಾಗ ಕೇಡು ಬಂದೊದಗಿತು ಬೆಳಕನು ಎದುರು ನೋಡುವಾಗ ಕತ್ತಲು ಕವಿಯಿತು.


ತಮ್ಮ ನಾಚಿಕೆಗೇಡಿತನದ ನೊರೆಯನ್ನು ಕಾರುವ ಸಾಗರದ ಹುಚ್ಚು ತೆರೆಗಳು; ದಿಕ್ಕುಗೆಟ್ಟ ತಾರೆಗಳಿವರು. ಇವರಿಗಾಗಿ ಕಾದಿದೆ ನಿರಂತರ ಕಾರ್ಗತ್ತಲಿನ ಕಂದಕ.


ಅಂತೆಯೇ, ತಮ್ಮ ಆದ್ಯ ಅಂತಸ್ತನ್ನು ಉಳಿಸಿಕೊಳ್ಳದೆ, ತಮ್ಮ ಯೋಗ್ಯ ನಿವಾಸವನ್ನು ಕಳೆದುಕೊಂಡ ದೇವದೂತರನ್ನು ಶಾಶ್ವತ ಸಂಕಲೆಗಳಿಂದ ಬಂಧಿಸಲಾಯಿತು; ಮಹಾದಿನದಲ್ಲಿ ಸಂಭವಿಸುವ ದಂಡನೆಯ ತೀರ್ಪಿಗಾಗಿ ಅವರನ್ನು ಕಾರ್ಗತ್ತಲೆಯಲ್ಲಿ ಕೂಡಿಡಲಾಯಿತು.


ಅಯ್ಯಯ್ಯೋ, ಸ್ವಾಮಿಯೆ ಸಿಟ್ಟುಗೊಂಡಿರುವನಲ್ಲಾ ! ಸಿಯೋನ್ ಕುವರಿಗೆ ಕಾರ್ಮೋಡ ಕವಿದಂತೆ ಮಾಡಿರುವನಲ್ಲಾ ! ಇಸ್ರಯೇಲಿನ ವೈಭವವನ್ನು ಆಗಸದಿಂದ ನೆಲಕ್ಕೆಸೆದುಬಿಟ್ಟಿರುವನಲ್ಲಾ ! ಆ ಸಿಟ್ಟಿನ ದಿನದಂದು ತನ್ನ ಪಾದಪೀಠವಾದ ದೇವಾಲಯವನ್ನೂ ನೆನೆಯದೆಹೋದನಲ್ಲಾ !


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ನಾನು ಭೂಮಿಯನ್ನು ನೋಡಿದೆ, ಅದು ಬಿಕೋ ಎನ್ನುತ್ತಿತ್ತು. ಆಕಾಶವನ್ನು ದಿಟ್ಟಿಸಿದೆ, ಅದರಲ್ಲಿ ಬೆಳಕೇ ಇರಲಿಲ್ಲ.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಕುರುಡರಂತೆ ನಡುಮಧ್ಯಾಹ್ನದಲ್ಲೂ ಕತ್ತಲಾಯಿತೆಂದು ನೀವು ತಡವರಿಸುವಿರಿ; ನೀವು ಮಾಡುವ ಕೆಲಸ ಯಾವುದೂ ಕೈಗೂಡುವುದಿಲ್ಲ. ಅನ್ಯರು ನಿಮ್ಮನ್ನು ನಿರಂತರವಾಗಿ ಪೀಡಿಸುತ್ತಾ ನಿಮ್ಮ ಸೊತ್ತನ್ನು ಸೂರೆಮಾಡುತ್ತಾ ಇರುವರು. ನಿಮಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು