Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:24 - ಕನ್ನಡ ಸತ್ಯವೇದವು C.L. Bible (BSI)

24 “ನನ್ನ ಪಾಲಿನ ಸೊತ್ತು ಸರ್ವೇಶ್ವರನೇ, ನಿರೀಕ್ಷಿಸುತ್ತಿರುವೆನು ನಾನು ಆತನನ್ನೇ” ಇಂತೆಂದುಕೊಳ್ಳುತ್ತದೆ ನನ್ನ ಅಂತರಾತ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 “ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು” ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಯೆಹೋವನೇ ನನ್ನ ಪಾಲು, ಆದಕಾರಣ ಆತನನ್ನು ನಿರೀಕ್ಷಿಸುವೆನು ಎಂದು ನನ್ನ ಅಂತರಾತ್ಮವು ಅಂದುಕೊಳ್ಳುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ನಾನು ನನ್ನೊಳಗೆ, “ಯೆಹೋವನೇ ನನ್ನ ಪಾಲು; ಆದ್ದರಿಂದ ನಾನು ಆತನಲ್ಲಿ ಭರವಸವಿಡುವೆನು” ಎಂದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 “ಯೆಹೋವ ದೇವರೇ ನನ್ನ ಪಾಲು, ಆದ್ದರಿಂದ ನಾನು ಅವರಿಗಾಗಿ ಕಾದಿರುತ್ತೇನೆ,” ಎಂದು ನಾನು ನನ್ನೊಳಗೆ ಎಂದುಕೊಳ್ಳುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:24
25 ತಿಳಿವುಗಳ ಹೋಲಿಕೆ  

ನನ್ನ ತನುಮನಗಳೆಲ್ಲವೂ ಸೊರಗಿಹೋದರೂ I ನನ್ನಾತ್ಮದ ಶಕ್ತಿ, ಶಾಶ್ವತ ಸೊತ್ತು ದೇವರು II


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ಇಂತಿರಲು ನಿನ್ನ ಕರುಣೆಯನ್ನು ನೆನಪಿಗೆ ತಂದುಕೊಳ್ಳುತ್ತೇನೆ ಅದರಿಂದಲೆ ನನಗೆ ನಂಬಿಕೆ-ನಿರೀಕ್ಷೆ ಮರುಕಳಿಸುತ್ತದೆ.


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಯಕೋಬ್ಯರಿಗೆ ಸ್ವಂತವಾದ ದೇವರು ಅವುಗಳ ಹಾಗಲ್ಲ ಆತ ಸಮಸ್ತವನ್ನು ಸೃಷ್ಟಿಸಿದಾತ ಆತನ ಸೊತ್ತು ಇಸ್ರಯೇಲ್ ವಂಶ ‘ಸೇನಾಧೀಶ್ವರ ಸರ್ವೇಶ್ವರ’ ಎಂಬುದು ಆತನ ನಾಮಧೇಯ.


ಪ್ರಭುವಿಗಾಗಿ ಕಾದಿಹ ಜನರೆ, ನಿಮಗಿರಲಿ ಅಭಯ I ಧೈರ್ಯದಿಂದಿರಲಿ ನಿರುತ ನಿಮ್ಮೆಲ್ಲರ ಹೃದಯ II


ಹಾಗಲ್ಲ ಯಕೋಬ್ಯರಿಗೆ ಸ್ವಂತವಾದ ದೇವರು ಅವರು ಸಮಸ್ತವನ್ನು ಸೃಷ್ಟಿಸಿದವರು. ಇಸ್ರಯೇಲ್ ಗೋತ್ರ ಅವರಿಗೆ ಸ್ವಾಸ್ತ್ಯ. ‘ಸೇನಾಧೀಶ್ವರ ಸರ್ವೇಶ್ವರ’ ಅವರ ನಾಮಧೇಯ.


ಮರಣದಿಂದ ಪುನರುತ್ಥಾನಗೊಳಿಸಿ ಮಹಿಮೆಪಡಿಸಿದ ದೇವರಲ್ಲಿ ನೀವು ವಿಶ್ವಾಸವಿಟ್ಟದ್ದು ಇವರ ಮುಖಾಂತರವೇ. ಹೀಗೆ ನಿಮ್ಮ ವಿಶ್ವಾಸವೂ ನಿರೀಕ್ಷೆಯೂ ದೇವರಲ್ಲೇ ನೆಲೆಗೊಂಡಿವೆ.


ಮಗದೊಂದು ಕಡೆ ಯೆಶಾಯನು ಹೀಗೆನ್ನುತ್ತಾನೆ: “ಜೆಸ್ಸೆಯನ ವಂಶಜನು ಬರುವನು ಅನ್ಯಜನಾಂಗಗಳನ್ನು ಆಳುವವನು ಉದಯಿಸುವನು ಆ ಜನಾಂಗಗಳು ಆತನಲ್ಲೇ ಭರವಸೆಯನ್ನಿಡುವುವು.”


ಇಸ್ರಯೇಲೇ, ನಂಬಿಕೊಂಡಿರು ಪ್ರಭುವನೆ I ಆತನಲ್ಲಿದೆ ಕರುಣೆ, ಪೂರ್ಣವಿಮೋಚನೆ II


ಪ್ರಭುವೇ, ಸ್ವರ್ಗಸೇನಾಧೀಶ್ವರನೇ I ನಿನ್ನಲಿ ನಂಬಿಕೆ ಇಡುವವನೇ ಧನ್ಯನು I


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ ಪರಮಾತ್ಮ ಆತನೆನಗೆ II


ಇಗೋ, ದೇವರು ಕೊಲ್ಲುವನೆನ್ನನು ಅದಕ್ಕಾಗಿ ನಾನು ಕಾದಿರುವೆನು. ಆದರೂ ನನ್ನ ನಡತೆ ಸರಿಯೆಂಬುದನು ಆತನ ಮುಂದೆಯೆ ರುಜುವಾತುಪಡಿಸುವೆನು.


ಅವರು ದೇವರಲ್ಲಿ ನಂಬಿಕೆಯನ್ನಿಟ್ಟು ಸಹಾಯಕ್ಕಾಗಿ ಪ್ರಾರ್ಥಿಸಿದರು. ದೇವರು ಅವರ ಪ್ರಾರ್ಥನೆಯನ್ನು ಆಲಿಸಿ ಹಗ್ರೀಯರನ್ನೂ ಅವರೊಂದಿಗೆ ಒಪ್ಪಂದ ಮಾಡಿಕೊಂಡವರನ್ನೂ ಸೋಲಿಸಿ ಅವರ ಮೇಲೆ ಜಯಹೊಂದುವಂತೆ ಸಹಾಯ ಮಾಡಿದರು.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ಹೇ ಪ್ರಭು, ನೀನೇ ನನ್ನ ಪಾಲಿನ ಸ್ವಾಸ್ತ್ಯ I ನಿನ್ನ ವಾಕ್ಯದ ಪಾಲನೆಯೆ ನಾಗೈದ ನಿರ್ಣಯ II


ಎನ್ನ ಮನವೆ, ಚಿಂತಿಸುವೆಯೇಕೆ? ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ಸ್ವದೇಶದವರಿಗೆ ದೊರಕುವಂತೆ ಅವರಿಗೆ ಸೊತ್ತು ದೊರಕುವುದಿಲ್ಲ. ಸರ್ವೇಶ್ವರ ಸ್ವಾಮಿಯೇ ಲೇವಿಯರ ಸೊತ್ತು. ಇದನ್ನು ಸ್ವಾಮಿಯೇ ಅವರಿಗೆ ಹೇಳಿದ್ದಾರೆ.


ಸರ್ವಶಕ್ತನಾದ ಸ್ವಾಮಿಯೇ ನಿನಗೆ ಬಂಗಾರವಾಗಿರಲಿ ಆತನೇ ನಿನಗೆ ಬೆಳ್ಳಿಯ ರಾಶಿಯಾಗಿರಲಿ.


ನಾನಂತು ನಂಬಿರುವೆ ನಿನ್ನ ನಿರಂತರವಾಗಿ I ನಿನ್ನನು ಕೀರ್ತಿಸುತ್ತಿರುವೆ ಅಧಿಕಾಧಿಕವಾಗಿ II


ನನ್ನ ಅಂತರಂಗದಲಿ ಏಳಲು ಆಂದೋಲನ I ತಂದಿತೆನ್ನ ಮನಕೆ ಆನಂದ ನಿನ್ನ ಸಾಂತ್ವನ II


ನಾನಾದರೋ ಸರ್ವೇಶ್ವರನ ಕಡೆಗೆ ಕಣ್ಣೆತ್ತಿ ನೋಡುವೆನು. ನನ್ನ ಉದ್ಧಾರಕ ದೇವರನ್ನು ನಿರೀಕ್ಷಿಸಿಕೊಂಡಿರುವೆನು. ನನ್ನ ದೇವರು ನನಗೆ ಕಿವಿಗೊಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು