Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 3:30 - ಕನ್ನಡ ಸತ್ಯವೇದವು C.L. Bible (BSI)

30 ಹೊಡೆಯುವವನಿಗೆ ಕೆನ್ನೆಕೊಡುವಾಗಲೂ ನಿಂದೆ ಅವಮಾನದಿಂದ ತೃಪ್ತಿಪಡುವಾಗಲೂ. ನಂಬಿಕೆಗೆ ಎಡೆಯಿರಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಹೊಡೆಯುವವನಿಗೆ ತನ್ನ ಕೆನ್ನೆಯನ್ನು ಕೊಟ್ಟು ಅವಮಾನವನ್ನು ಹೊಟ್ಟೆತುಂಬಾ ತಿನ್ನಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆ ವ್ಯಕ್ತಿಯು ತನ್ನನ್ನು ಹೊಡೆಯುವವರಿಗೆ ತನ್ನ ಕೆನ್ನೆಯನ್ನು ಒಡ್ಡಬೇಕು. ಅವನು ತನಗೆ ಜನರಿಂದಾಗುವ ಗೇಲಿಯನ್ನು ಸಹಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 3:30
11 ತಿಳಿವುಗಳ ಹೋಲಿಕೆ  

ಬೆನ್ನುಕೊಟ್ಟೆನು ಹೊಡೆಯುವವರಿಗೆ ಗಡ್ಡ ಒಡ್ಡಿದೆನು ಅದನ್ನು ಕೀಳುವವರಿಗೆ ಮುಖ ಮರೆಮಾಡಲಿಲ್ಲ ಉಗುಳುಬುಗುಳಿಗೆ.


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಆದರೆ ನನ್ನ ಬೋಧೆ ಇದು; ನಿನಗೆ ಅಪಕಾರ ಮಾಡಿದವನಿಗೆ ಪ್ರತೀಕಾರ ಮಾಡಬೇಡ. ನಿನ್ನ ಬಲಗೆನ್ನೆಗೆ ಒಬ್ಬನು ಹೊಡೆದರೆ ಇನ್ನೊಂದು ಕೆನ್ನೆಯನ್ನೂ ಒಡ್ಡು.


ಯಾರಾದರೂ ನಿಮ್ಮನ್ನು ಅಧೀನಪಡಿಸಿಕೊಂಡರೂ ಕಬಳಿಸಿದರೂ ಮರುಳುಗೊಳಿಸಿದರೂ ತುಚ್ಛೀಕರಿಸಿದರೂ ಕೆನ್ನೆಗೆ ಬಿಗಿದರೂ ಎಲ್ಲವನ್ನೂ ಸಹಿಸಿಕೊಳ್ಳುತ್ತೀರಿ.


ನಿನ್ನ ಒಂದು ಕೆನ್ನೆಗೆ ಹೊಡೆಯುವವನಿಗೆ ಇನ್ನೊಂದು ಕೆನ್ನೆಯನ್ನು ಒಡ್ಡು, ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳ ಅಂಗಿಯನ್ನೂ ತೆಗೆದುಕೊಳ್ಳಲು ಬಿಡು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ದಯೆತೋರು ಪ್ರಭು, ನಮಗೆ ದಯೆ ತೋರು I ಅತ್ಯಧಿಕವಾಗಿ ನಾವು ತಿರಸ್ಕೃತರು II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ಅಗ್ನಿಯಂತೆನ್ನ ದಹಿಸುತ್ತಿದೆ ನಿನ್ನಾಲಯದಭಿಮಾನ I ಎನ್ನ ಮೇಲೆರಗಿದೆ ನಿನ್ನ ಕಡುದ್ರೋಹಿಗಳ ದೂಷಣ II


ನನಗೆ ಅಸಹ್ಯಪಟ್ಟು ದೂರಸರಿಯುತ್ತಾರೆ ನನ್ನ ಮೇಲೆ ಉಗುಳುವುದಕ್ಕೂ ಹಿಂಜರಿಯದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು